ಕಾರ್ಕಳ: ಅಕ್ಟೋಬರ್ 29 ರಂದು ವೈವಾಹಿಕ ಜೀವನಕ್ಕೆ ಕಾಲಿಟ್ಟ ಯುವಕನೊಬ್ಬ ನಾಪತ್ತೆಯಾಗಿರುವ ಘಟನೆ ಕಾರ್ಕಳದಲ್ಲಿ ನಡೆದಿದೆ. ವಸಂತ ಬಿ ನಾಪತ್ತೆಯಾದ ಯುವಕ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಇದನ್ನೂ ಓದಿ: ⭕ಪುತ್ತೂರು: ಶಾಲೆಗೆ ಹೋಗುತ್ತಿದ್ದ ಬಾಲಕಿಯರಿಬ್ಬರಿಗೆ ಕಿರುಕುಳ
ವಸಂತ್ ಅಕ್ಟೋಬರ್ 29 ರಂದು ಮದುವೆಯಾಗಿದ್ದರು. ದಿನಾಂಕ 06/11/2025 ರಂದು ಮದುವೆಯಾದ ಯುವತಿ ಗಂಡನ ಜೊತೆ ತನ್ನ ತಾಯಿ ಮನೆಗೆ ಆಗಮಿಸಿದ್ದಳು.
ಬಳಿಕ ದಿನಾಂಕ 07/11/2025 ನಾರಾವಿ, ಕಟೀಲು ದೇವಸ್ಥಾನಗಳಿಗೆ ಹೋಗಿ ಬಂದಿದ್ದಾರೆ. ಅದೇ ದಿನ ಸಂಜೆ 4 ಗಂಟೆಗೆ ಹೊಸ್ಮಾರು ಪೇಟೆಗೆ ಹೋಗಿ ಬರುತ್ತೇನೆಂದು ಹೇಳಿ ಹೋದವರು ವಾಪಾಸು ಬಾರದೇ ಕಾಣೆಯಾಗಿದ್ದಾರೆ. ಅವರ ಮೊಬೈಲ್ ಫೋನ್ ಸ್ವಿಚ್ ಆಫ್ ಆಗಿದೆ ಎನ್ನಲಾಗಿದೆ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣಾ ನಾಪತ್ತೆ ಪ್ರಕರಣ ದಾಖಲಾಗಿದೆ.





