Mon. Nov 10th, 2025

Vitla: ಶ್ರೀ ಕ್ಷೇ.ಧ.ಗ್ರಾ.ಯೋಜನೆ ಮಾಣಿ ವಲಯದ ಪ್ರಗತಿ ಬಂಧು – ಸ್ವಸಹಾಯ ಸಂಘಗಳ ವಲಯ ಮಟ್ಟದ ಶ್ರೀ ಸತ್ಯನಾರಾಯಣ ಪೂಜೆ

ವಿಟ್ಲ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ವಿಟ್ಲ ‌ಮಾಣಿ ವಲಯ, ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಮಾಣಿ ವಲಯ, ಜನಜಾಗೃತಿ ವೇದಿಕೆ ಮಾಣಿ ವಲಯ, ಶ್ರೀ ಶಾರದಾಂಬ ಭಜನಾ ಮಂದಿರ ಅಶೋಕನಗರ ಅಳಕೆಮಜಲು ಇವರ ಸಹಭಾಗಿತ್ವದಲ್ಲಿ ಅಳಕೆಮಜಲು ಶ್ರೀ ಶಾರದಾಂಬ ಭಜನಾ ಮಂದಿರದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ನಡೆಯಿತು.

ಇದನ್ನೂ ಓದಿ: ⭕ಬೆಳಾಲು : ಬೆಳಾಲು ಗ್ರಾಮದ ಕಾಡಂಡ ಬಳಿ ಗೇರು ತೋಟದಲ್ಲಿ ಕಾಡುಕೋಣ ಪ್ರತ್ಯಕ್ಷ

ಕೊಲ್ಪೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಕೆ ಎಸ್ ಪ್ರಕಾಶ್ ಧಾರ್ಮಿಕ ಸಭಾ ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ, ಶ್ರೀ ಸತ್ಯನಾರಾಯಣ ಪೂಜೆಯಿಂದ ಸಮಾಜದಲ್ಲಿ ಧಾರ್ಮಿಕ ನಂಬಿಕೆಗಳು ಗಟ್ಟಿಗೊಳಿಸಲು ಸಹಕಾರಿಯಾಗಿದೆ.


ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಜನಜಾಗೃತಿ ವೇದಿಕೆ ನಿಕಟಪೂರ್ವ ಅಧ್ಯಕ್ಷರಾದ ಬಾಲಕೃಷ್ಣ ಆಳ್ವ ಕೊಡಾಜೆಯವರು ಶ್ರೀ ಕ್ಷೇತ್ರ ಧರ್ಮಸ್ಥಳದ ಎಲ್ಲಾ ಕಾರ್ಯಕ್ರಮಗಳು ಅರ್ಥ ಪೂರ್ಣವಾಗಿ ನಡೆಯುತ್ತಿದೆ ಎಂದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿಟ್ಲ ದ ಯೋಜನಾಧಿಕಾರಿ ಸುರೇಶ್ ಗೌಡ ರವರು ಧರ್ಮಸ್ಥಳದಿಂದ ನಡೆಯುವ ಕಾರ್ಯಕ್ರಮಗಳ ಕುರಿತು, ದೇಶದ ಪ್ರಮುಖ ಬ್ಯಾಂಕುಗಳ ವ್ಯವಹಾರ ಪ್ರತಿನಿಧಿಯಾಗಿ ಕಡಿಮೆ ಬಡ್ಡಿದರದಲ್ಲಿ ಪ್ರಗತಿ ನಿಧಿ ನೀಡುವುದರೊಂದಿಗೆ ಸ್ವಾವಲಂಬನೆ ಸಾಧಿಸಲು ಸಾಧ್ಯವಾಗಿದೆ ಎಂದರು.

ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಜನಜಾಗೃತಿ ವಲಯಾಧ್ಯಕ್ಷರಾದ ರಾಜಾರಾಮ ಶೆಟ್ಟಿ ಕೋಲ್ಪೆ ಗುತ್ತು , ಶ್ರೀ ಶಾರದಾಂಬ ಭಜನಾ ಮಂದಿರದ ಅಧ್ಯಕ್ಷರಾದ ಕೃಷ್ಣ ಕಿಶೋರ್ ಭಟ್ ಯೋಜನೆಯ ಕಾರ್ಯಕ್ರಮಗಳ ಬಗ್ಗೆ ಶ್ಲಾಘಿಸಿದರು.. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪಶು ವೈದ್ಯಾಧಿಕಾರಿಗಳು. ಪೂಜಾ ಸಮಿತಿ ಅಧ್ಯಕ್ಷರೂ ಆದ ಮಂದಾರ ಜೈನ್ ರವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ನಡೆಸುವ ಸಾಮಾಜಿಕ ಕೆಲಸಗಳು ಜನರಲ್ಲಿ ಜಾಗೃತಿ ಮೂಡಿಸಲು ಸಹಕಾರಿಯಾಗಿದೆ ಎಂದರು.

ವೇದಿಕೆಯಲ್ಲಿ ಜನಜಾಗೃತಿ ಸದಸ್ಯರಾದ ತನಿಯಪ್ಪ ಗೌಡ, ಮಾಣಿ ವಲಯದ ಒಕ್ಕೂಟಗಳ ವಲಯಾಧ್ಯಕ್ಷ ರಾದ ಸುಧಾಕರ ಸಪಲ್ಯ ಉಪಸ್ಥಿತರಿದ್ದರು.
ಸೇವಾ ಪ್ರತಿನಿಧಿ ಸುಗಂಧಿನಿ ಸ್ವಾಗತಿಸಿ, ಮೇಲ್ವಿಚಾರಕಿ ಆಶಾ ಪಾರ್ವತಿ ವರದಿ ವಾಚಿಸಿ,ವಂದಿಸಿದರು. ಶ್ರೀ ಶಾರದಾಂಬ ಭಜನಾ ಮಂದಿರದ ಸದಸ್ಯರಾದ ಉದಯಕುಮಾರ್ ಅಳಕೆಮಜಲು ಕಾರ್ಯಕ್ರಮ ನಿರೂಪಿಸಿದರು. ಮಾಣಿ ವಲಯದ ಒಕ್ಕೂಟದ
ಅಧ್ಯಕ್ಷರುಗಳು, ಸದಸ್ಯರು ಶೌರ್ಯ ಸದಸ್ಯರು, ಸೇವಾ ಪ್ರತಿನಿಧಿಗಳು ಸಹಕರಿಸಿದರು.

Leave a Reply

Your email address will not be published. Required fields are marked *