Mon. Nov 10th, 2025

Bengaluru: ಪತ್ನಿ ಕಿರುಕುಳಕ್ಕೆ ಬೇಸತ್ತು ಪತಿ ಆತ್ಮಹತ್ಯೆಗೆ ಶರಣು

ಬೆಂಗಳೂರು(ನ.10): ಪತ್ನಿ ಕಿರುಕುಳಕ್ಕೆ ಬೇಸತ್ತು ಪತಿ ಆತ್ಮಹತ್ಯೆಗೆ ಶರಣಾಗಿರುವಂತಹ ಘಟನೆ ಗಿರಿನಗರದಲ್ಲಿ ನಡೆದಿದೆ. ಗಗನ್ ರಾವ್ ನೇಣಿಗೆ ಶರಣಾದ ಪತಿ. ದಂಪತಿ ನಡುವೆ ನಿತ್ಯವೂ ಜಗಳ ನಡೆಯುತ್ತಿತ್ತು.

ಇದನ್ನೂ ಓದಿ: ⭕ವಿಟ್ಲ: ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ

ಪತ್ನಿ ಕಿರುಕುಳದಿಂದ ನೊಂದ ಗಗನ್ ರಾವ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗಿರಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬ್ಯಾಂಕ್​ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಗಗನ್ ರಾವ್, ಎಂಟು ತಿಂಗಳ ಹಿಂದೆ ಮೇಘನಾ ಜತೆ ಮದುವೆಯಾಗಿದ್ದರು.

ಮನೆಯಲ್ಲಿ ನಿತ್ಯ ದಂಪತಿ ನಡುವೆ ಜಗಳ ನಡೆಯುತ್ತಿತ್ತು. ಪತ್ನಿ ಕಿರುಕುಳದಿಂದಲೇ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಗಗನ್ ರಾವ್ ಸಹೋದರಿ ಮೇಘನಾ ವಿರುದ್ಧ ದೂರು ನೀಡಿದ್ದಾರೆ.

Leave a Reply

Your email address will not be published. Required fields are marked *