ಮಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) ಮಂಗಳೂರು ತಾಲೂಕಿನ ದೇರಳಕಟ್ಟೆ ವಲಯದ ಮುನ್ನೂರು ಸಾಮಾನ್ಯ ಸೇವಾ ಕೇಂದ್ರದಲ್ಲಿ DIGIPAY ಕಾರ್ಯಕ್ರಮವನ್ನು ಉದ್ಘಾಟಿಸಿ, ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ಕಾರ್ಯಕ್ರಮದಲ್ಲಿ ಮುನ್ನೂರು ಗ್ರಾಮ ಪಂಚಾಯತ್ ಅಧ್ಯಕ್ಷರು ರೆಹನಾ ಬಾನ್, ಮಂಗಳೂರು ತಾಲೂಕಿನ ಯೋಜನಾಧಿಕಾರಿ ಶ್ರೀಮುತ ಸುರೇಂದ್ರ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರು ಶ್ರೀಮತಿ ಧನಲಕ್ಷ್ಮಿ ಗಟ್ಟಿ, ದೇರಳಕಟ್ಟೆ ವಲಯದ ಅಧ್ಯಕ್ಷರು ದೇವರಾಜ್ ಶೆಟ್ಟಿ, ಚಂದ್ರಹಾಸ್ ಮುನ್ನೂರು, ಸಿ.ಎಸ್.ಸಿ ತಾಲೂಕು ನೋಡಲ್ ಅಧಿಕಾರಿ, ದೇರಳಕಟ್ಟೆ ವಲಯದ ಮೇಲ್ವಿಚಾರಕರು, ಒಕ್ಕೂಟ ಪದಾಧಿಕಾರಿಗಳು, ಸೇವಾಪ್ರತಿನಿಧಿ, ಸೇವಾದಾರರು, ಸಂಘದ ಸದಸ್ಯರು ಉಪಸ್ಥಿತರಿದ್ದರು.

Digipay ಕಾರ್ಯಕ್ರಮದಿಂದ ಗ್ರಾಮೀಣ ಜನತೆಗೆ ಆಯ್ದ ಬ್ಯಾಂಕಿಂಗ್ ಸೇವೆಗಳು, AePS & mATM ಮೂಲಕ ಬ್ಯಾಂಕ್ ಖಾತೆಯಿಂದ ನಗದೀಕರಣ ಸೌಲಭ್ಯ ಪಡೆದುಕೊಳ್ಳುವುದು ಮತ್ತು ಸಾಮಾನ್ಯ ಸೇವಾ ಕೇಂದ್ರದಲ್ಲಿ ಲಭ್ಯವಿರುವ ಸೇವೆಗಳ ಪ್ರಯೋಜನ ಪಡೆಯುವಂತೆ ಮಾಹಿತಿ ನೀಡಲಾಗಿದೆ.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಅನುಷ್ಠಾನ ಮಾಡಲಾಗುವ ಕಾರ್ಯಕ್ರಮಗಳು ಗ್ರಾಮೀಣ ಜನರಿಗೆ ಪ್ರಯೋಜನಕಾರಿ ಆಗಿದೆ. DIGIPAY ಕಾರ್ಯಕ್ರಮದ ಅನುಷ್ಠಾನದಿಂದ ಜನರಿಗೆ ಬ್ಯಾಂಕಿಂಗ್ ವ್ಯವಹಾರ ಮತ್ತು ಬ್ಯಾಂಕ್ ಖಾತೆಯಿಂದ ನಗದೀಕರಣ ಸೌಲಭ್ಯ ಪಡೆದುಕೊಳ್ಳಲು ತಮ್ಮದೇ ಗ್ರಾಮದಲ್ಲಿ ಅವಕಾಶ ಕಲ್ಪಿಸಲಾಗಿದೆ. ಗ್ರಾಮೀಣ ಜನರು ಈ ಸೇವೆಯ ಪ್ರಯೋಜನ ಪಡೆದುಕೊಳ್ಳುವಂತೆ ತಾಲೂಕಿನ ಯೋಜನಾಧಿಕಾರಿಯವರು ಮಾಹಿತಿ ನೀಡಿದರು.
ಮುನ್ನೂರು ಗ್ರಾಮ ಪಂಚಾಯತಿನ ಅಧ್ಯಕ್ಷರು DIGIPAY ಅನುಷ್ಠಾನದ ಪ್ರಯೋಜನೆ ಪಡೆದುಕೊಳ್ಳುವಂತೆ ಈ ಸಂದರ್ಭದಲ್ಲಿ ಸಂದೇಶ ನೀಡಿದರು ಹಾಗೂ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಅನುಷ್ಠಾನಗೊಳ್ಳುವ ಕಾರ್ಯಕ್ರಮಗಳು ಮಾದರಿ ಆಗಿವೆ. ಮೂನ್ನೂರು ಗ್ರಾಮದಿಂದ ಅನುಷ್ಠಾನಗೊಂಡಿರುವ Digipay ಕಾರ್ಯಕ್ರಮ ಗ್ರಾಮೀಣ ಜನರಿಗೆ ಬ್ಯಾಂಕಿಂಗ್ ವ್ಯವಹಾರ ಪಡೆಯಲು ಒಂದು ಒಳ್ಳೆಯ ಉಪಯುಕ್ತ ಸೇವೆ ಆಗಿದೆ ಹಾಗೂ ಈ ಸೇವೆಯ ಪ್ರಯೋಜನ ಪಡೆದುಕೊಳ್ಳುವಂತೆ ಶುಭ ಹಾರೈಸಿದರು.
ಈ ಮೂಲಕ DIGIPAY ಕಾರ್ಯಕ್ರಮವನ್ನು ಯಶಸ್ವಿಯಾಗಿ ಅನುಷ್ಠಾನ ಮಾಡಲಾಯಿತು.


