Sun. Nov 16th, 2025

ಮಂಜೊಟ್ಟಿ: ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳ ದಿನಾಚರಣೆ

ಮಂಜೊಟ್ಟಿ: ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆ ರಝಾ ಗಾರ್ಡನ್ ಮಂಜೊಟ್ಟಿ ಇಲ್ಲಿ ಮಕ್ಕಳ ದಿನಾಚರಣೆಯನ್ನು ಬಹಳ ವಿಜ್ರಂಭಣೆಯಿಂದ ಆಚರಿಸಲಾಯಿತು.

ಪಂಡಿತ್ ಜವಾಹರಲಾಲ್ ನೆಹರೂರವರ ಭಾವಚಿತ್ರಕ್ಕೆ ಪುಷ್ಪಾರ್ಚನೆಯನ್ನು ಮಾಡುವುದರ ಮೂಲಕ ಕಾರ್ಯಕ್ರಮವನ್ನು ಪ್ರಾರಂಭಿಸಲಾಯಿತು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಆಡಳಿತ ಟ್ರಸ್ಟಿನ ಸಂಚಾಲಕರಾದ ಶ್ರೀಯುತ ಜನಾಬ್ ಸಯ್ಯದ್ ಹಬೀಬ್ ಸಾಹೇಬ್ ವಹಿಸಿಕೊಂಡಿದ್ದರು.ವೇದಿಕೆಯಲ್ಲಿ ಶಾಲಾ ಆಡಳಿತ ಟ್ರಸ್ಟಿನ ಕೋಶಾಧಿಕಾರಿಯಾದ ಶ್ರೀಯುತ ಸಯ್ಯದ್ ಇರ್ಫಾನ್ ಹಾಗೂ ಶಾಲಾ ಮುಖ್ಯೋಪಾಧ್ಯಾಯನಿ ಶ್ರೀಮತಿ ಜಾಕಿನ್ ಬಿನ್ ಇವರು ಉಪಸ್ಥಿತರಿದ್ದರು.

ಪ್ರಸ್ತಾವಿಕವಾಗಿ ಮಾತನಾಡಿದ ಶಾಲಾ ಮುಖ್ಯೋಪಾಧ್ಯಾಯನಿ “ಈ ಹಬ್ಬದ ವಾತಾವರಣ ಮತ್ತು ಖುಷಿ ನಿಮ್ಮ ಜೀವನದಲ್ಲಿ ಸದಾ ಇರಲಿ ಮತ್ತು ನೆಹರೂ ರವರ ಜೀವನದ ಸಾಧನೆ ಮತ್ತು ತ್ಯಾಗವನ್ನು ತಿಳಿಸುತ್ತಾ ವಿದ್ಯಾರ್ಥಿಗಳಿಗೆ ಮಕ್ಕಳ ದಿನಾಚರಣೆಯ ಶುಭಾಶಯಗಳನ್ನು ತಿಳಿಸಿದರು. ಹಾಗೂ ಪ್ರಸ್ತುತ ಶೈಕ್ಷಣಿಕ ವರ್ಷದ ಕೆಲವೊಂದು ವಿದ್ಯಾರ್ಥಿಗಳ ವಿಶೇಷ ಗುಣ ಹಾಗೂ ಪ್ರತಿಭೆಯನ್ನು ಗುರುತಿಸಿ ಅವರಿಗೆ ಸ್ಮರಣೆಕೆಯನ್ನು ನೀಡಿ ಗೌರವಿಸಲಾಯಿತು.

ಸಮಾರಂಭದ ಅಧ್ಯಕ್ಷರು ಮಾತನಾಡಿ ” ಮಕ್ಕಳು ತಮ್ಮ ತಂದೆ ತಾಯಿಗೆ ಗೌರವ ಸಲ್ಲಿಸುವುದನ್ನು ಮರೆಯಬಾರದು ಜೊತೆಗೆ ಶಿಕ್ಷಣವನ್ನು ನೀಡಿದ ಗುರುಗಳನ್ನು ಎಂದಿಗೂ ಗೌರವಿಸಬೇಕು ” ಎಂದು ಹೇಳುತ್ತಾ ಮಕ್ಕಳ ದಿನಾಚರಣೆಯ ಶುಭಾಶಯಗಳನ್ನು ತಿಳಿಸಿದರು.. ಕಾರ್ಯಕ್ರಮದಲ್ಲಿ ಪುಟಾಣಿ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ಶಾಲೆಯ ಸಹಶಿಕ್ಷಕಿ ಶ್ರೀಮತಿ ಯಶಸ್ವಿನಿ ಇವರು ಶಿಕ್ಷಕ ದಿನಾಚರಣೆಯ ಮಹತ್ವವನ್ನು ತಿಳಿಸಿದರು. ಹತ್ತನೆಯ ತರಗತಿಯ ವಿದ್ಯಾರ್ಥಿನಿ ಕುಮಾರಿ ಅಫ್ ಸಿಯಾ ಕಾರ್ಯಕ್ರಮವನ್ನು ನಿರೂಪಿಸಿದರು. ಎಂಟನೇ ತರಗತಿಯ ವಿದ್ಯಾರ್ಥಿ ಅನಝ್ ಅತಿಥಿಗಳನ್ನು ಸ್ವಾಗತಿಸಿದರು. 6ನೇ ತರಗತಿಯ ಅರ್ಷದ ಧನ್ಯವಾದವನ್ನು ನೀಡಿದರು. ಕಾರ್ಯಕ್ರಮದ ಕೊನೆಯಲ್ಲಿ ವಿದ್ಯಾರ್ಥಿಗಳಿಗೆ ಸಿಹಿ ತಿಂಡಿಯನ್ನು ವಿತರಿಸಲಾಯಿತು.

Leave a Reply

Your email address will not be published. Required fields are marked *