Sun. Nov 23rd, 2025

ಬೆಳ್ತಂಗಡಿ: ಸಿಯೋನ್ ಆಶ್ರಮದಲ್ಲಿ ಉಚಿತ ದಂತ ಚಿಕಿತ್ಸಾ ಹಾಗೂ ಆರೋಗ್ಯ ತಪಾಸಣಾ ಶಿಬಿರ

ಬೆಳ್ತಂಗಡಿ: ಸಿಯೋನ್ ಆಶ್ರಮ ಗಂಡಿಬಾಗಿಲು, ಬೆಳ್ತಂಗಡಿ ತಾಲೂಕು ಇಲ್ಲಿ ದಿನಾಂಕ:23.11.2025ರಂದು ಯೆನಪೋಯ ದಂತ ಕಾಲೇಜು ಮತ್ತು ಆಸ್ಪತ್ರೆ ದೇರಳಕಟ್ಟೆ ಹಾಗೂ ಗ್ರಾಮೀಣ ಆರೋಗ್ಯ ರಕ್ಷಣೆ ಮತ್ತು ಅಭಿವೃದ್ಧಿ ಕೇಂದ್ರ ಯೆನಪೋಯ ಪರಿಗಣಿಸಲ್ಪಟ್ಟ ವಿಶ್ವವಿದ್ಯಾಲಯ ದೇರಳಕಟ್ಟೆ ಇದರ ಸಂಯುಕ್ತ ಆಶ್ರಯದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿತ್ತು.

ಇದನ್ನೂ ಓದಿ: 🛑ಬೆಳ್ತಂಗಡಿ: ಅಪಘಾತದಲ್ಲಿ ಮೃತರಾದ ಹಂಝ ಬೆದ್ರಬೆಟ್ಟು ಕುಟುಂಬಕ್ಕೆ ಗುತ್ತಿಗೆದಾರರ ಕಡೆಯಿಂದ ಸಾಂತ್ವನ ನಿಧಿ ಹಸ್ತಾಂತರ

ಶಿಬಿರವನ್ನು ಜ್ಯೋತಿ ಬೆಳಗಿಸುವುದರ ಮೂಲಕ ಉದ್ಘಾಟಿಸಲಾಯಿತು. ಡಾ.ಮಹಮ್ಮದ್ ಮಿಫ್ರಾ ದಂತವೈದ್ಯರು, ಡಾ.ಅಪ್ಸಲ್ ವೈದ್ಯಕೀಯ ಅಧಿಕಾರಿ, ಗ್ರಾಮೀಣ ಆರೋಗ್ಯ ರಕ್ಷಣೆ ಮತ್ತು ಅಭಿವೃದ್ಧಿ ಕೇಂದ್ರ ಯೆನಪೋಯ ಹಾಗೂ ಯೆನಪೋಯ ಆಸ್ಪತ್ರೆಯ ವೈದ್ಯರುಗಳ ತಂಡ ಶಿಬಿರಾರ್ಥಿಗಳನ್ನು ತಪಾಸಣೆ ನಡೆಸಿದರು. 200ಕ್ಕೂ ಅಧಿಕ ಫಲಾನುಭವಿಗಳು ಇದರ ಪ್ರಯೋಜನವನ್ನು ಪಡೆದುಕೊಂಡರು.

ಸಿಯೋನ್ ಸಂಸ್ಥೆಯ ಆಡಳಿತಾಧಿಕಾರಿ ಶ್ರೀಮತಿ ಶೋಭಾ ಯು.ಪಿ., ವೈದ್ಯಾಧಿಕಾರಿ ಡಾ.ಶಿವಾನಂದಸ್ವಾಮಿ, ಯೆನೆಪೋಯ ಸಂಸ್ಥೆಯ ವೈದ್ಯಕೀಯ ಸಮಾಜ ಸೇವಕರಾದ ಗಾಯತ್ರಿ ಪೂಜಾರಿ, ಸಿಯೋನ್ ಆಶ್ರಮದ ಆಡಳಿತ ಮಂಡಳಿಯವರು ಮತ್ತು ಸಿಬ್ಬಂದಿವರ್ಗದವರು ಉಪಸ್ಥಿತರಿದ್ದರು. ಸಂಸ್ಥೆಯ ಸಿಬ್ಬಂದಿಯವರಾದ ಶ್ರೀಮತಿ ಸಿಂಧು ವಿ.ಎಂ. ಕಾರ್ಯಕ್ರಮ ನಿರೂಪಿಸಿದರು.

Leave a Reply

Your email address will not be published. Required fields are marked *