ಉಜಿರೆ:(ನ. 24) ಶ್ರೀ ಭಗವದ್ಗೀತೆ ಅಭಿಯಾನ ಸಮಿತಿ ದ.ಕ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ, ಶಿರಸಿ, ಮಂಗಳೂರು ಸಂಸ್ಕೃತ ಸಂಘ ಹಾಗೂ ರಾಮಕೃಷ್ಣ ಪದವಿಪೂರ್ವ ಕಾಲೇಜು,

ಇದನ್ನೂ ಓದಿ: 🟣ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವತಿಯಿಂದ
ಬಂಟ್ಸ್ ಹಾಸ್ಟೆಲ್ ಇದರ ಸಂಯುಕ್ತ ಆಶ್ರಯದಲ್ಲಿ ಭಗವದ್ಗೀತೆ ಅಭಿಯಾನ 2025 ಹಾಗೂ ಗೀತಾ ಜಯಂತಿ ಅಂಗವಾಗಿ ಮಂಗಳೂರಿನಲ್ಲಿ ನ.23 ರಂದು ನಡೆದ ಜಿಲ್ಲಾ ಮಟ್ಟದ ಭಗವದ್ಗೀತಾ ಸ್ಪರ್ಧೆಯಲ್ಲಿ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ, ಗೀತಾ ಕಂಠಪಾಠ ಸ್ಪರ್ಧೆಯಲ್ಲಿ 8ನೇ ತರಗತಿ ಸಾನ್ವಿ.ಎಸ್ ದ್ವಿತೀಯ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ವಿಜೇತರಾದ ವಿದ್ಯಾರ್ಥಿಯನ್ನು ಹಾಗೂ ಭಾಗವಹಿಸಿದ ವಿದ್ಯಾರ್ಥಿಗಳನ್ನು ಶಾಲಾ ಪ್ರಾಂಶುಪಾಲರು ಹಾಗೂ ಶಿಕ್ಷಕ ವೃಂದದಿಂದ ಅಭಿನಂದಿಸಲಾಯಿತು.




