ಉಜಿರೆ: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ), ದ ಕ ಜಿಲ್ಲೆ ಮಂಗಳೂರು ಹಾಗೂ ಸೈಂಟ್ ಫಿಲೋಮಿನಾ ಕಾಲೇಜು ಪುತ್ತೂರು ಇದರ ಸಹಭಾಗಿತ್ವದಲ್ಲಿ ನವಂಬರ್ 20 ರಂದು ಪುತ್ತೂರಿನ ಸೈಂಟ್ ಫಿಲೋಮಿನಾ ಪದವಿ ಪೂರ್ವ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಸಾಹಿತ್ಯಿಕ ಹಾಗೂ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ ಕಾಲೇಜು ಹಲವಾರು ಪ್ರಶಸ್ತಿಗಳನ್ನು ಗಳಿಸಿದೆ.

ಇದನ್ನೂ ಓದಿ: 🛑ಬೆಳ್ತಂಗಡಿ: “ಡಿಕೆಶಿ ಸಿಎಂ ಆಗಲಿ”
ದ್ವಿತೀಯ ಪಿಯುಸಿ ವಿಭಾಗದಲ್ಲಿ ದ್ವಿತೀಯ ವಿಜ್ಞಾನ ವಿಭಾಗದ ಪ್ರೀತಮ್ ಶೆಟ್ಟಿಗಾರ್ ಪೈಂಟಿಂಗ್ ನಲ್ಲಿ ಪ್ರಥಮ ಸ್ಥಾನ, ದ್ವಿತೀಯ ವಾಣಿಜ್ಯ ವಿಭಾಗದ ಹಂಸಿನಿ ಭಿಡೆ ಏಕಪಾತ್ರಾಭಿನಯದಲ್ಲಿ ಪ್ರಥಮ ಸ್ಥಾನ, ದ್ವಿತೀಯ ಕಲಾ ವಿಭಾಗದ ಅನಘಾ ಜನಪದ ನೃತ್ಯದಲ್ಲಿ ತೃತೀಯ ಸ್ಥಾನ ಹಾಗೂ ದ್ವಿತೀಯ ಕಲಾ ವಿಭಾಗದ ಶ್ರೀಪೂರ್ಣ ಕನ್ನಡ ಚರ್ಚಾ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಪಡೆದಿದ್ದಾರೆ.
ಪ್ರಥಮ ಪಿಯುಸಿ ವಿಭಾಗದಲ್ಲಿ ಪ್ರಥಮ ವಿಜ್ಞಾನ ವಿಭಾಗದ ಸಾತ್ವಿಕ್ ಭಟ್ ಪೈಂಟಿಂಗ್ ನಲ್ಲಿ ಪ್ರಥಮ ಸ್ಥಾನ, ಪ್ರಥಮ ವಿಜ್ಞಾನ ವಿಭಾಗದ ಸಾಗರೀಕಾ ಇಂಗ್ಲಿಷ್ ಚರ್ಚಾ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ, ಪ್ರಥಮ ಕಲಾ ವಿಭಾಗದ ಮನೋಜ್ ಏಕಪಾತ್ರಾಭಿನಯದಲ್ಲಿ ಪ್ರಥಮ ಸ್ಥಾನ ಪಡೆದು ಕಾಲೇಜಿಗೆ ಕೀರ್ತಿ ತಂದಿದ್ದಾರೆ.


ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗಳು ಉಡುಪಿಯಲ್ಲಿ ನಡೆಯುವ ಮೈಸೂರು ವಿಭಾಗ ಮಟ್ಟದ ಸಾಹಿತ್ಯಿಕ ಮತ್ತು ಸಾಂಸ್ಕೃತಿಕ ಸ್ಪರ್ಧೆಗೆ ಆಯ್ಕೆ ಆಗಿರುತ್ತಾರೆ.
ಇವರಿಗೆ ಕಾಲೇಜಿನ ಪ್ರಾಂಶುಪಾಲ ಪ್ರಮೋದ್ ಕುಮಾರ್ ಬಿ, ಉಪ ಪ್ರಾಂಶುಪಾಲ ಡಾ ರಾಜೇಶ್ ಬಿ, ಕಾಲೇಜಿನ ಪ್ರಾಧ್ಯಾಪಕ ವೃಂದ ಹಾಗೂ ಸಾಂಸ್ಕೃತಿಕ ಸಮಿತಿ ಅಭಿನಂದಿಸಿದೆ.



