Tue. Nov 25th, 2025

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಪೂಜ್ಯ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಸಂಭ್ರಮ

ಉಜಿರೆ: (ನ.25)”ಪಡೆದ ಉಪಕಾರವನ್ನು ನೆನಪು ಮಾಡಿಕೊಂಡಾಗ ನಾವು ಕೃತಜ್ಞರಾಗುತ್ತೇವೆ ಹಾಗೂ ಪೂಜ್ಯರ ಮಾರ್ಗದರ್ಶನದೊಂದಿಗೆ ಎಸ್.ಡಿ.ಎಮ್ ಸಂಸ್ಥೆಯಲ್ಲಿ ವಿದ್ಯೆಯನ್ನು ಪಡೆಯುತ್ತಿರುವ ನೀವು ನಾವೆಲ್ಲರೂ ಧನ್ಯರು” ಎಂದು ಉಜಿರೆ ಎಸ್.ಡಿ.ಎಮ್ ಪದವಿ ಕಾಲೇಜಿನ ರಿಜಿಸ್ಟ್ರಾರ್ ಹಾಗೂ ಸಂಸ್ಕೃತ ವಿಭಾಗದ ಮುಖ್ಯಸ್ಥರಾದ ಡಾ. ಶ್ರೀಧರ ಭಟ್ ಹೇಳಿದರು.

ಇದನ್ನೂ ಓದಿ: 🔵ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ

ಇವರು ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ) ಉಜಿರೆ ಇಲ್ಲಿ ಪೂಜ್ಯ ಡಾ.ಡಿ ವೀರೇಂದ್ರ ಹೆಗ್ಗಡೆಯವರ ಜನ್ಮ ದಿನದ ಸಂಭ್ರಮದ ಅಂಗವಾಗಿ ಆಯೋಜಿಸಿದ “ಸಂಸ್ಥಾಪಕರ ದಿನ (Founder’s day)” ಶೀರ್ಷಿಕೆಯಲ್ಲಿ ನಡೆದ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಆಗಮಿಸಿ, ಶಾಲಾ ವಿದ್ಯಾರ್ಥಿಗಳು ರಚಿಸಿದ ಸುವಿಚಾರ ಪುಸ್ತಕ ಹಾಗೂ ಸ್ಕ್ರಾಪ್ ಪುಸ್ತಕವನ್ನು ಬಿಡುಗಡೆಗೊಳಿಸಿ, ಪೂಜ್ಯರು ನಡೆದು ಬಂದ ಹಾದಿ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳದ ದಾನ ಪರಂಪರೆಯ ಕುರಿತು ಮೌಲ್ಯಾಧಾರಿತ ಮಾತುಗಳನ್ನಾಡಿದರು.

ಕಾರ್ಯಕ್ರಮದಲ್ಲಿ ಕಿಂಡರ್ಗಾರ್ಟನ್ ವಿದ್ಯಾರ್ಥಿಗಳಿಂದ ಪೂಜ್ಯರಿಗೆ ಶುಭಾಶಯ ಭಾಷಣ, 6ನೇ ಹಾಗೂ 8ನೇ ತರಗತಿಯ ವಿದ್ಯಾರ್ಥಿನಿಯರಿಂದ ಶಿಕ್ಷಕಿ ಸುಮಾ ಶ್ರೀನಾಥ್ ಅವರು ರಚಿಸಿರುವ ಪದ್ಯದ ಗುಂಪು ಗಾಯನ, ವಿದ್ಯಾರ್ಥಿಗಳಿಂದ ಪಂಚ ದಾನಗಳಾದ ವಿದ್ಯಾದಾನ, ಅನ್ನದಾನ, ವಸ್ತ್ರದಾನ, ಔಷಧದಾನ ಹಾಗೂ ವಸತಿ ದಾನಗಳ ಪ್ರಸ್ತುತಿ, 8ನೇ ತರಗತಿ ವಿದ್ಯಾರ್ಥಿನಿಯರಿಂದ ಸಮೂಹ ನೃತ್ಯ ಆಯೋಜಿಸಲಾಗಿತ್ತು.

ಪೂಜ್ಯರ ಜನ್ಮದಿನದ ಅಂಗವಾಗಿ ಶಾಲೆಯಲ್ಲಿ ತರಗತಿವಾರು ವಿದ್ಯಾರ್ಥಿಗಳಿಗೆ ಚಿತ್ರಕಲೆ, ಸ್ಕ್ರಾಪ್ ಪುಸ್ತಕ ತಯಾರಿ, ಭಿತ್ತಿ ಚಿತ್ರ ತಯಾರಿ, ಪೋಸ್ಟರ್ ತಯಾರಿ, ಶುಭಾಶಯ ಪತ್ರ ತಯಾರಿ ಮುಂತಾದ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗಿದ್ದು, ಕಾರ್ಯಕ್ರಮದಲ್ಲಿ ಇದರ ಪ್ರದರ್ಶನ ಆಯೋಜಿಸಲಾಗಿತ್ತು.

ಶಾಲಾ ಪ್ರಾಂಶುಪಾಲರಾದ ಮನ್ಮೋಹನ್ ನಾಯ್ಕ್ ಕೆ.ಜಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.

ಶಿಕ್ಷಕಿ ಶಾಂಟಿ ಜಾರ್ಜ್ ನಿರೂಪಿಸಿದ ಕಾರ್ಯಕ್ರಮದಲ್ಲಿ ಶಾಲಾ ಪ್ರಾಂಶುಪಾಲರಾದ ಮನ್ಮೋಹನ್ ನಾಯ್ಕ್ ಕೆ.ಜಿ ಸ್ವಾಗತಿಸಿದರು.

Leave a Reply

Your email address will not be published. Required fields are marked *


ಇನ್ನಷ್ಟು ಸುದ್ದಿಗಳು