ಸುಳ್ಯ: ಇಲಿಪಾಷಾಣ ಸೇವಿಸಿ ಅಸ್ವಸ್ಥಗೊಂಡಿದ್ದ ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಗುತ್ತಿಗಾರಿನ ಚಿಕ್ಕುಳಿಯಲ್ಲಿ ನಡೆದಿದೆ.

ಇದನ್ನೂ ಓದಿ: 🔵ಕಟಪಾಡಿ: ವಿದ್ಯಾವರ್ಧಕ ಸಂಘದ ವತಿಯಿಂದ ನಿವೃತ್ತ ಉಪನ್ಯಾಸಕ ಭಾಸ್ಕರ ಕಾಮತ್ ರವರಿಗೆ ಗೌರವಾರ್ಪಣೆ
ಗುತ್ತಿಗಾರಿನ ಚಿಕ್ಕುಳಿ ನಿವಾಸಿ ಶೇಷಪ್ಪ ಗೌಡರ ಪುತ್ರಿ, ಕಾಲೇಜು ವಿದ್ಯಾರ್ಥಿನಿ ಪೂಜಾ ಮೂರು ದಿನಗಳ ಹಿಂದೆ ಇಲಿ ಪಾಷಾಣ ಸೇವಿಸಿದ್ದಳು ಎನ್ನಲಾಗಿದೆ.


ಅಸ್ವಸ್ಥಗೊಂಡ ಬಳಿಕ ವಿಷಯ ಗೊತ್ತಾಗಿ ಆಕೆಯನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.



