ಬೆಳ್ತಂಗಡಿ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ,ದಕ್ಷಿಣ ಕನ್ನಡ ಜಿಲ್ಲಾ ಸಂಸ್ಥೆ,ಬೆಳ್ತಂಗಡಿ ತಾಲೂಕಿನ ಬೆಳ್ತಂಗಡಿ ಮತ್ತು ಮಡಂತ್ಯಾರು ಸ್ಥಳೀಯ ಸಂಸ್ಥೆ ಇವರ ಸಹಭಾಗಿತ್ವದಲ್ಲಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿ ಇಲ್ಲಿ ಬೆಳ್ತಂಗಡಿ ತಾಲೂಕು ಮಟ್ಟದ ಪ್ರಾರಂಭಿಕ ತರಬೇತಿ ಶಿಬಿರ ಹಾಗೂ ಪುನಶ್ಚೇತನ ತರಬೇತಿ ಶಿಬಿರ ಯಶಸ್ವಿಯಾಗಿ ನಡೆಯಿತು.

ಇದನ್ನೂ ಓದಿ: 💐💐ಮಂಗಳೂರು: ಶ್ರೀ ಪಂಡಿತ ರಾಮಕೃಷ್ಣ ಶಾಸ್ತ್ರೀ ರವರಿಗೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರದಾನ
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೆಳ್ತಂಗಡಿ ತಾಲೂಕಿನ ಮಾನ್ಯ ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿಗಳು ಶ್ರೀಮತಿ ಸುಜಯ ವಿ ಇವರು ವಹಿಸಿಕೊಂಡು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ಕಾರ್ಯಕ್ರಮವನ್ನು ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ಮುಖ್ಯ ಶಿಕ್ಷಕಿ ಶ್ರೀಮತಿ ಹೇಮಲತಾ ಇವರು ದೀಪ ಬೆಳಗಿಸಿ ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಸ್ಥಳೀಯ ಸಂಸ್ಥೆಯ ಅಧ್ಯಕ್ಷರು ಶ್ರೀ ಪದ್ಮಕುಮಾರ್,ಜಿಲ್ಲಾ ಕಾರ್ಯದರ್ಶಿ ಶ್ರೀ ಪ್ರತೀಮ್ ಕುಮಾರ್,ಶಿಬಿರ ನಾಯಕರು ಶ್ರೀ ಗುರುಮೂರ್ತಿ ನಾಯ್ಕಪು LT(S),ಶಿಬಿರ ಸಹಾಯಕರು ಶ್ರೀ ವಿನೋದ್ ಚೇವಾರ್ HWB(S),ಸ್ಥಳೀಯ ಸಂಸ್ಥೆಯ ಸ್ಥಳೀಯ ಸಂಸ್ಥೆಯ ಕೋಶಾಧಿಕಾರಿ ಶ್ರೀ ಬೆಳ್ಳಿಯಪ್ಪ ಕೆ, ಕಾರ್ಯದರ್ಶಿ ಪ್ರಮೀಳಾಪೂಜಾರಿ, ರಾಜ್ಯ ಸಹಾಯಕ ಸಂಘಟನಾ ಆಯುಕ್ತರು ಶ್ರೀ ಭರತ್ ರಾಜ್ ಕೆ ಉಪಸ್ಥಿತರಿದ್ದರು.

ಇದನ್ನೂ ಓದಿ: ⭕ಶಿಶಿಲ : ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಮಹಿಳೆಗೆ ಹಾವು ಕಡಿತ – ಮಹಿಳೆ ಸಾವು
ಪ್ರಾರಂಭಿಕ ತರಬೇತಿ ಶಿಬಿರದಲ್ಲಿ ಒಟ್ಟು 31 ಮತ್ತು ಪುನಶ್ಚೇತನ ತರಬೇತಿ ಶಿಬಿರದಲ್ಲಿ ಒಟ್ಟು 10 ಒಟ್ಟು 41 ಶಿಕ್ಷಕ/ಶಿಕ್ಷಕಿಯರು ಭಾಗವಹಿಸುತ್ತಾರೆ.
ಸ್ವಯಂ ಸೇವಕರಾಗಿ ವಾಣಿ ಪದವಿ ಪೂರ್ವ ಕಾಲೇಜು ಬೆಳ್ತಂಗಡಿ ಇಲ್ಲಿನ ರೋವರ್ಸ್ ಮತ್ತು ರೇಂಜರ್ಸ್ ವಿದ್ಯಾರ್ಥಿಗಳು ಸಹಕರಿಸಿದರು.
ಪ್ರಾರಂಭಿಕ ತರಬೇತಿ ಶಿಬಿರದಲ್ಲಿ ಒಟ್ಟು 31 ಮತ್ತು ಪುನಶ್ಚೇತನ ತರಬೇತಿ ಶಿಬಿರದಲ್ಲಿ ಒಟ್ಟು 10 ಒಟ್ಟು 41 ಶಿಕ್ಷಕ/ಶಿಕ್ಷಕಿಯರು ಭಾಗವಹಿಸುತ್ತಾರೆ.

ಕಾರ್ಯಕ್ರಮದಲ್ಲಿ ನಿರೂಪಣೆಯನ್ನು ಸ್ಥಳೀಯ ಸಂಸ್ಥೆಯ ಕೋಶಾಧಿಕಾರಿ ಬೆಳಿಯಪ್ಪ ಕೆ, ಸ್ವಾಗತ ಹಾಗೂ ಪ್ರಾಸ್ತಾವಿಕ ನುಡಿಯನ್ನು ರಾಜ್ಯ ಸಹಾಯಕ ಸಂಘಟನಾ ಆಯುಕ್ತರಾದ ಭರತ್ ರಾಜ್ ಕೆ, ಧನ್ಯವಾದ ಹಾಗೂ ಕಾರ್ಯಕ್ರಮದ ನೇತೃತ್ವವನ್ನು ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿ ಪ್ರಮೀಳಾ ಪೂಜಾರಿ ವಹಿಸಿದ್ದರು.


