ಉಜಿರೆ: ದಕ್ಷಿಣಕನ್ನಡ ಜಿಲ್ಲಾ ಪದವಿಪೂರ್ವ ಕಾಲೇಜುಗಳ ಸಂಸ್ಕೃತ ಭಾಷಾ ಉಪನ್ಯಾಸಕರ ಸಂಘದ ವತಿಯಿಂದ ದಕ್ಷಿಣಕನ್ನಡ ಜಿಲ್ಲೆಯ ಪದವಿಪೂರ್ವ ಕಾಲೇಜುಗಳ ಸಂಸ್ಕೃತ ಭಾಷಾ ಉಪನ್ಯಾಸಕರಿಗಾಗಿ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಪ್ರಶ್ನೆ ಪತ್ರಿಕೆಯ ನೀಲನಕ್ಷೆ , ಮಾದರಿ ಪ್ರಶ್ನೆ ಪತ್ರಿಕೆ ಸ್ವರೂಪ ಇತ್ಯಾದಿ ವಿಷಯಗಳ ಬಗ್ಗೆ ಆನ್ಲೈನ್ ಮಾರ್ಗದರ್ಶನ ಕಾರ್ಯಕ್ರಮ ನಡೆಯಿತು.

ಸಂಪನ್ಮೂಲ ವ್ಯಕ್ತಿಗಳಾದ ಶೃಂಗೇರಿಯ ಸರಕಾರಿ ಪ.ಪೂ ಕಾಲೇಜಿನ ಹಿರಿಯ ಸಂಸ್ಕೃತ ಭಾಷಾ ಉಪನ್ಯಾಸಕ ಮಹೇಶ್ ಕಾಕತ್ಕರ್ ಹಾಗೂ ಗಂಗೊಳ್ಳಿಯ ಎಸ್. ವಿ ಪ.ಪೂ ಕಾಲೇಜಿನ ಸಂಸ್ಕೃತ ಭಾಷಾ ಉಪನ್ಯಾಸಕ ವೆಂಕಟೇಶಮೂರ್ತಿ ಎನ್.ಸಿ ಇವರು ಉಪಯುಕ್ತ ಸಲಹೆ ಹಾಗೂ ಮಾಹಿತಿಗಳನ್ನು ನೀಡಿದರು.

ದಕ್ಷಿಣಕನ್ನಡ ಜಿಲ್ಲಾ ಪದವಿಪೂರ್ವ ಕಾಲೇಜುಗಳ ಸಂಸ್ಕೃತ ಭಾಷಾ ಉಪನ್ಯಾಸಕರ ಸಂಘದ ಅಧ್ಯಕ್ಷರಾದ ಹಾಗೂ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ.ಪೂ ಕಾಲೇಜಿನ ಸಂಸ್ಕೃತ ಭಾಷಾ ವಿಭಾಗದ ಮುಖ್ಯಸ್ಥರಾದ ಡಾ. ಪ್ರಸನ್ನಕುಮಾರ ಐತಾಳ್ ಪ್ರಾಸ್ತಾವಿಕ ನುಡಿಗಳನ್ನಾಡಿ ನಿರೂಪಿಸಿದರು.

ಕೋಶಾಧಿಕಾರಿ ಹಾಗೂ ಮಂಗಳೂರಿನ ಡಾ. ಎನ್.ಎಸ್. ಎ.ಎಂ ಪ.ಪೂ ಕಾಲೇಜಿನ ಸಂಸ್ಕೃತ ಭಾಷಾ ಉಪನ್ಯಾಸಕ ರವಿಶಂಕರ ಹೆಗಡೆ ಪರಿಚಯಿಸಿ ಸ್ವಾಗತಿಸಿದರು. ಸಂಘಟನಾ ಕಾರ್ಯದರ್ಶಿ ಹಾಗೂ ಮೂಡುಬಿದ್ರೆ ಎಕ್ಸಲೆಂಟ್ ಪ.ಪೂ ಕಾಲೇಜಿನ ಸಂಸ್ಕೃತ ಭಾಷಾ ಉಪನ್ಯಾಸಕ ತೇಜಸ್ವಿ ಭಟ್ ವಂದಿಸಿದರು.



