Mon. Dec 29th, 2025

ಗುರುವಾಯನಕೆರೆ: ಎಕ್ಸೆಲ್ ಕಾಲೇಜು ಆವರಣದಲ್ಲಿ 15 ಲಕ್ಷ ಲೀಟರ್ ಸಾಮರ್ಥ್ಯದ ಎಸ್‌ಟಿಪಿ ಘಟಕಕ್ಕೆ ಭೂಮಿ ಪೂಜೆ

ಗುರುವಾಯನಕೆರೆ: ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜು ಪದವಿ ಪೂರ್ವ ಶಿಕ್ಷಣ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳ ಫಲಿತಾಂಶದಲ್ಲಿ ರಾಷ್ಟ್ರಮಟ್ಟದಲ್ಲಿ ಅದ್ವಿತೀಯ ಸಾಧನೆ ಮಾಡಿರುವ ಕಾಲೇಜಿನ ಬಳಿಯಲ್ಲಿ ನೂತನವಾಗಿ ರೂ. 15 ಲಕ್ಷ ಲೀಟರ್ ಸಾಮರ್ಥ್ಯದ ಕೊಳಚೆ ನೀರಿನ ಸಂಸ್ಕರಣಾ ಘಟಕ( ಎಸ್ ಟಿ ಪಿ) ರಚನೆಗೆ ಇಂದು ಭೂಮಿ ಪೂಜೆ ನೆರವೇರಿಸಲಾಯಿತು.

ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಎಕ್ಸೆಲ್ ವಿದ್ಯಾ ಸಂಸ್ಥೆಗಳ ಆಡಳಿತ ಮಂಡಳಿಯ ಅಧ್ಯಕ್ಷರಾದ ಸುಮಂತ್ ಕುಮಾ‌ರ್ ಜೈನ್ ಅವರು, ಎಕ್ಸೆಲ್ ವಿದ್ಯಾ ಸಂಸ್ಥೆಗಳ ಆವರಣದಲ್ಲಿ ನೂತನ ಎಸ್ ಟಿ ಪಿ ಘಟಕವನ್ನು ಶೀಘ್ರದಲ್ಲಿ ಕಾಮಗಾರಿ ಮುಗಿಸಿ ಲೋಕಾರ್ಪಣೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.

Leave a Reply

Your email address will not be published. Required fields are marked *