ಕೊಕ್ಕಡ: ಬೆಳ್ತಂಗಡಿ ತಾಲೂಕಿನ ಕೊಕ್ಕಡ ಗ್ರಾಮದ ಹಳ್ಳಿಗೇರಿ ಎಂಬಲ್ಲಿ ವ್ಯಕ್ತಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂದು (ಜನವರಿ 2) ಸಂಭವಿಸಿದೆ.

ಇದನ್ನೂ ಓದಿ: ಬೆಳ್ತಂಗಡಿ: ಕಲ್ಮಂಜ ಬದಿನಡೆ ಕ್ಷೇತ್ರ ಅಲೆಕ್ಕಿ ಸಮಿತಿಯಿಂದ ಶಾಸಕರಿಗೆ ಗೌರವಾರ್ಪಣೆ
ಘಟನೆಯ ವಿವರ:
ಕೊಕ್ಕಡ ಸರಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ನಿವೃತ್ತ ನೌಕರ ಕುಂಞಕಣ್ಣನ್ ಅವರ ಪುತ್ರ ಅಜಯ್ ಕುಮಾರ್ (39) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಇಂದು ಮಧ್ಯಾಹ್ನ ಊಟ ಮುಗಿಸಿದ ನಂತರ ಅಜಯ್ ತಮ್ಮ ಮನೆಯಲ್ಲಿದ್ದ ಫ್ಯಾನ್‌ಗೆ ನೇಣು ಬಿಗಿದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಮೃತ ಅಜಯ್ ಕುಮಾರ್ ಅವರು ಕಳೆದ ಕೆಲವು ಸಮಯದಿಂದ ಅವರು ಸ್ವಂತ ಆಟೋ ರಿಕ್ಷಾ ಚಾಲನೆ ಮಾಡುತ್ತಾ ಜೀವನ ಸಾಗಿಸುತ್ತಿದ್ದರು.

ಆತ್ಮಹತ್ಯೆಗೆ ನಿಖರವಾದ ಕಾರಣ ಏನು ಎಂಬುದು ಸದ್ಯಕ್ಕೆ ತಿಳಿದುಬಂದಿಲ್ಲ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.



