Mon. Jan 5th, 2026

ಬೆಳ್ತಂಗಡಿ: ಮಾರ್ಚ್ 1 ರಿಂದ 9ರವರೆಗೆ ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಬ್ರಹ್ಮಕಲಶೋತ್ಸವ – ಸಚಿವರನ್ನು ಭೇಟಿ ಮಾಡಿದ ಬ್ರಹ್ಮಕಲಶೋತ್ಸವ ಸಮಿತಿ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಬ್ರಹ್ಮಕಲಶೋತ್ಸವವು ಮಾರ್ಚ್ 1ರಿಂದ 9ರವರೆಗೆ ಅದ್ದೂರಿಯಾಗಿ ನಡೆಯಲಿದ್ದು,

ಇದನ್ನೂ ಓದಿ: ಮುಂಬೈ: ರಾತ್ರಿ ಗಂಡನಿಲ್ಲದ ವೇಳೆ ಪ್ರೇಮಿಯನ್ನು ಮನೆಗೆ ಕರೆದು ಮಹಿಳೆ ಮಾಡಿದ್ದೇನು ಗೊತ್ತಾ.?!

ದೇವಸ್ಥಾನದ ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಾರಿಗೆ ಮತ್ತು ಮುಜರಾಯಿ ಸಚಿವರಾದ ಮಾನ್ಯ ಶ್ರೀ ರಾಮಲಿಂಗಾರೆಡ್ಡಿಯವರನ್ನು ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷರು, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ ಮಾಡಿ ಮನವಿ ಸಲ್ಲಿಸಿದರು. ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ರವೀಂದ್ರ ಪೂಜಾರಿ ಬಾಂದೊಟ್ಟು,

ಬ್ರಹ್ಮಕಲಶೋತ್ಸವ ಸಮಿತಿಯ ಕಾರ್ಯದರ್ಶಿ ವಿನಯ್ ಹೆಗ್ಡೆ, ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ಜಗದೀಶ ಹೆಗಡೆ, ಲಕ್ಷ್ಮಣ್ ಬಂಗೇರ, ಬ್ರಹ್ಮಕಲಶೋತ್ಸವ ಸ್ವಾಗತ ಸಮಿತಿಯ ಅಧ್ಯಕ್ಷರಾದ ನಾರಾಯಣ ಪೂಜಾರಿ ಈದು, ಬಳಂಜ ಗ್ರಾಮ ಪಂಚಾಯತ್ ಸದಸ್ಯರಾದ ರವೀಂದ್ರ ಬಿ. ಅಮೀನ್ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *