ಧರ್ಮಸ್ಥಳ: ಗ್ರಾಮೀಣಾಭಿವೃದ್ಧಿಯ ಕ್ಷೇತ್ರದಲ್ಲಿ ಕ್ರಾಂತಿ ಮಾಡುತ್ತಿರುವ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ.) ಮತ್ತೊಂದು ರಾಷ್ಟ್ರಮಟ್ಟದ ಸಾಧನೆ ಮಾಡಿದೆ.

ಯೋಜನೆಯು ಬ್ಯಾಂಕುಗಳ ವ್ಯವಹಾರ ಪ್ರತಿನಿಧಿಯಾಗಿ ಗ್ರಾಮೀಣ ಪ್ರದೇಶಗಳಲ್ಲಿ ಸ್ವ-ಸಹಾಯ ಸಂಘಗಳನ್ನು ರಚಿಸಿ, ಅವುಗಳನ್ನು ಆರ್ಥಿಕ ಸೇರ್ಪಡೆಗೊಳಿಸುತ್ತಿರುವ (Financial Inclusion) & ಹಿನ್ನಲೆ SKOCH ಗ್ರೂಪ್ಸ್ ನಿಂದ ಕೊಡಮಾಡುವ ಪ್ರತಿಷ್ಠಿತ “ಸ್ಕಾಚ್ ಪ್ರಶಸ್ತಿ’ಗೆ ಭಾಜನವಾಗಿದೆ.

ದೇಶದ ಆರ್ಥಿಕ ಮತ್ತು ಸಾಮಾಜಿಕ ಬೆಳವಣಿಗೆಗೆ ಕೊಡುಗೆ ನೀಡುವ ಸಂಸ್ಥೆಗಳನ್ನು ಗುರುತಿಸಿ ಗೌರವಿಸುವ “ಸ್ಕಾಚ್ ಗ್ರೂಪ್”, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ.ಸಿ. ಮಾದರಿಯನ್ನು ಪರಿಗಣಿಸಿ ಈ ಗೌರವ ನೀಡಿದೆ. ಇದು ಕೇವಲ ಒಂದು ಪ್ರಶಸ್ತಿಯಲ್ಲ, ಲಕ್ಷಾಂತರ ಜನರ ಬದುಕಿನಲ್ಲಿ ಬದಲಾವಣೆ ತಂದ ಶ್ರಮಕ್ಕೆ ಸಿಕ್ಕ ಪ್ರತಿಫಲ.



