ಉಜಿರೆ: ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಭಾರತದ ಮಹಾನ್ ತತ್ವಜ್ಞಾನಿ, ಚಿಂತಕ ಹಾಗೂ ಶ್ರೇಷ್ಠ ನಾಯಕರಾಗಿದ್ದ ಸ್ವಾಮಿ ವಿವೇಕಾನಂದರ ಜನ್ಮ ದಿನದ ಅಂಗವಾಗಿ ಜ.12 ರಂದು ರಾಷ್ಟ್ರೀಯ ಯುವದಿನಾಚರಣೆ ಆಚರಿಸಲಾಯಿತು.

ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಉಜಿರೆ ಎಸ್.ಡಿ.ಎಮ್ ಪ್ರಕೃತಿ ಮತ್ತು ಯೋಗ ವಿಜ್ಞಾನ ಕಾಲೇಜಿನ ಉಪನ್ಯಾಸಕ ಹಾಗೂ ವೈದ್ಯಕೀಯ ಅಧಿಕಾರಿ ಡಾ. ಯೋಹಿ ಧರ್ಮರಾಜನ್ ವಿದ್ಯಾರ್ಥಿಗಳನ್ನುದ್ದೇಶಿಸಿ ತಮ್ಮ ಗುರಿ ತಲುಪುವ ಮಾರ್ಗ ಹಾಗೂ ಅರೋಗ್ಯವನ್ನು ಉತ್ತಮಗೊಳಿಸುವ ವಿಧಾನಗಳ ಕುರಿತು ಮಾತನಾಡಿದರು.

ಕಾರ್ಯಕ್ರಮದಲ್ಲಿ ಶಾಲಾ ವಿದ್ಯಾರ್ಥಿಗಳಿಂದ ದಿನದ ವಿಶೇಷತೆ, ಸ್ವಾಮಿ ವಿವೇಕಾನಂದರ ಜೀವನ, ವಿವೇಕಾನಂದರ ಸಂದೇಶಗಳನ್ನೊಳಗೊಂಡ ನೃತ್ಯ, ಸಮೂಹ ಗಾಯನ ಆಯೋಜಿಸಲಾಗಿತ್ತು.

ಕಾರ್ಯಕ್ರಮದಲ್ಲಿ ಶಾಲಾ ಪ್ರಾಂಶುಪಾಲ ಶ್ರೀ ಮನಮೋಹನ್ ನಾಯ್ಕ್ ಕೆ.ಜಿ ಅಧ್ಯಕ್ಷತೆ ವಹಿಸಿದ್ದರು.

ವಿದ್ಯಾರ್ಥಿನಿ ಪೂರ್ವಿ ನಿರೂಪಿಸಿದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿ ಧೃತಿ ನಿರೂಪಿಸಿದರು.


