ಮೇಷ ರಾಶಿ : ನಿಮ್ಮ ಹಲವು ದಿನಗಳ ಮನಸ್ಸಿನ ಗೊಂದಲವು ಪರಿಹಾರವಾಗುವುದು. ವೈವಾಹಿಕ ಜೀವನವು ಸುಖಮಯವಾಗಿ ಸಾಗಲಿದೆ. ಆರ್ಥಿಕತೆಗೆ ಸಂಬಂಧಿಸಿದಂತೆ ಮನಸ್ತಾಪಗಳು ಬರಬಹುದು. ಕಾರ್ಯಗಳಲ್ಲಿ ಹಿನ್ನಡೆಯಾಗಲಿದೆ. ಮಾಡಬೇಕು ಎಂದುಕೊಂಡ ಕೆಲಸಗಳು ಆರಂಭವಾಗದೇ ಇರಬಹುದು.
ವೃಷಭ ರಾಶಿ : ಇಂದು ಮಹಿಳೆಯರ ಸಂಘವು ವ್ಯವಹಾರದಲ್ಲಿ ಲಾಭವನ್ನು ಪಡೆದುಕೊಳ್ಳುವುದು. ನಿಮ್ಮ ಶ್ರಮಕ್ಕೆ ದೈವವು ಅನುಕೂಲವನ್ನು ಮಾಡಲಿದೆ. ಮಾತಿನಲ್ಲಿ ಮೆಚ್ಚುಗೆಯು ನಿಮಗೆ ಸಿಗಲಿದೆ. ಮಾನಸಿಕವಾಗಿ ಆಗುವ ನೋವನ್ನು ಶಮನ ಮಾಡಿಕೊಳ್ಳಲು ದೂರಪ್ರಯಾಣ ಮಾಡಬಹುದು. ಸಹೋದ್ಯೋಗಿಗಳ ಜೊತೆ ವೈಮನಸ್ಯ ಉಂಟಾಗಬಹುದು.
ಮಿಥುನ ರಾಶಿ : ಇಂದು ನಿಮಗೆ ಯಾರಿಂದಲಾದರೂ ಹೊಗಳಿಕೆ ಸಿಗಲಿದೆ. ಇಂದು ಅನಗತ್ಯವಾಗಿ ಸುತ್ತಾಟವಾಗುವುದೇ ವಿನಃ ಪ್ರಯೋಜನವಾಗದು. ಇದರಿಂದ ಸಿಟ್ಟೂ ಹತಾಶೆಯೂ ಇರಲಿದೆ. ನಿಧಾನವಾಗಿ ಸಾಗುವ ಸಾಗುತ್ತಿರುವ ಕೆಲಸದಿಂದ ಬೇಸರವಾಗಲಿದೆ. ಕೋಪವು ನಿಮ್ಮನ್ನು ದಾರಿ ತಪ್ಪಿಸಬಹುದು.
ಕಟಕ ರಾಶಿ : ಉದ್ಯೋಗದಲ್ಲಿ ಭಡ್ತಿಗಾಗಿ ಕಾಯುವಿರಿ. ಮಕ್ಕಳಿಂದ ಸಂತೋಷವಾರ್ತೆಯು ಇರುತ್ತದೆ. ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಬೇಡ. ಸ್ನೇಹಿತರ ಸಹಾಯದಿಂದ ಹೊಸ ಉದ್ಯಮವನ್ನು ಆರಂಭಿಸುವ ಸಾಧ್ಯತೆ ಇದೆ. ಪಾಲುದಾರಿಕೆಯಲ್ಲಿ ನಿಮ್ಮ ನಿಲುವೂ ಮುಖ್ಯವೇ ಆಗುವುದು. ಅರ್ಥಿಕತೆಯನ್ನು ನೀವು ವೃದ್ಧಿ ಮಾಡಿಕೊಳ್ಳುವ ಅವಶ್ಯಕತೆ ಇರುವುದು.
ಸಿಂಹ ರಾಶಿ : ಯಾರನ್ನೂ ಅಳೆಯುವಲ್ಲಿ ಸೋಲುವಿರಿ. ನಿಮ್ಮ ಪರೀಕ್ಷೆಯ ಕಾಲವೂ ಆಗಬಹುದು. ಉದ್ಯೋಗದಲ್ಲಿ ನಿಮ್ಮ ಲಾಭದ ಅಂಶವನ್ನು ಹೆಚ್ಚು ಮಾಡಿಕೊಳ್ಳಲು ಯೋಜನೆಯನ್ನು ಹಾಕಿಕೊಳ್ಳುವಿರಿ. ಸಂಗಾತಿಯನ್ನು ನೀವು ಸಂತೋಷ ಪಡಿಸುವಿರಿ. ಹರಟೆಯಿಂದ ಇಂದಿನ ದಿನವು ಮುಕ್ತಾಯವಾಗುವುದು.
ಕನ್ಯಾ ರಾಶಿ : ನಿಮ್ಮ ಕಾರ್ಯದಲ್ಲಿ ಅಗತ್ಯದ ಬದಲಾವಣೆಯನ್ನು ಮಾಡಿಕೊಳ್ಳಬೇಕಾಗಬಹುದು. ಆಲಂಕಾರಿಕ ವಸ್ತುಗಳನ್ನು ಇಷ್ಟಪಟ್ಟು ಖರೀದಿಸುವಿರಿ. ನೀವು ಅಂದುಕೊಂಡದ್ದು ಮಾತ್ರ ಸತ್ಯ ಎನ್ನುವ ನಿರ್ಧಾರಕ್ಕೆ ಬರುವುದು ಬೇಡ.
ತುಲಾ ರಾಶಿ : ಅತಿಥಿಗಳ ಆಗಮನದಿಂದ ನಿಮಗೆ ಕಷ್ಟವಾಗಬಹುದು. ಸಂಗಾತಿಯ ಪ್ರೀತಿಯನ್ನು ನೀವು ಒಪ್ಪಿಕೊಳ್ಳುವುದು ನಿಮಗೆ ಅನಿವಾರ್ಯವಾದೀತು. ನಿಮ್ಮ ಉಪಕಾರವನ್ನು ಸ್ಮರಿಸುವ ಜನರು ನಿಮಗೆ ಸಿಗುವರು. ಸೌಂದರ್ಯಕ್ಕೆ ಆಕರ್ಷಿತರಾಗುವಿರಿ. ಕಾನೂನಿಗೆ ವಿರುದ್ಧವಾಗಿ ನಡೆದುಕೊಳ್ಳುವುದು ಬೇಡ.
ವೃಶ್ಚಿಕ ರಾಶಿ : ನಿಮ್ಮನ್ನು ಇಂದು ಯಾರಾದರೂ ಮಾತಿನಿಂದ ಕಟ್ಟಿಹಾಕಬಹುದು. ಸದವಕಾಶಗಳು ಸಿಗಲಿವೆ ಇಂದು ನಿಮಗೆ. ಬಹಳ ದಿನದ ಕಾರ್ಯಗಳನ್ನು ಬೇಗನೆ ಮುಗಿಸಲಿದ್ದೀರಿ. ನಿಮ್ಮ ಬಳಿ ಇರುವುದನ್ನು ಇನ್ನೊಬ್ಬರಿಗೆ ಕೊಡುವ ಮನಸ್ಸು ಇರದು. ಅಧಿಕವಾದ ಮಾತುಗಳು ನಿಮ್ಮ ಸ್ವಭಾವವನ್ನು ತಿಳಿಸುವುದು. ದೇಹಪೀಡೆಯಿಂದ ಕಷ್ಟವಾಗುವುದು.
ಧನು ರಾಶಿ : ನಿಮಗೆ ಇಂದು ಯಾವುದಕ್ಕೆ ಪ್ರಾಮುಖ್ಯ ಕೊಡಬೇಕು ತಿಳಿಯದಾಗುವುದು. ಉದ್ಯೋಗದ ಸ್ಥಳದಲ್ಲಿ ಕೆಲಸವು ವೇಗವಾಗಿ ನಡೆಯಲಿದೆ. ಮನೆಯಲ್ಲಿ ನಡೆಯುವ ಸಮಾರಂಭದಲ್ಲಿ ಭಾಗವಹಿಸಲು ದೂರದಿಂದ ಹೋಗುವಿರಿ. ಮಕ್ಕಳ ಪ್ರೀತಿಯು ನಿಮಗೆ ಸಿಗಲಿದೆ. ಕುಟುಂಬದ ಜೊತೆ ಸಂತೋಷವನ್ನು ಹಂಚಿಕೊಳ್ಳಲು ಬಯಸುವಿರಿ.
ಮಕರ ರಾಶಿ : ಪಶ್ಚಾತ್ತಾಪವು ಸಕಾರಾತ್ಮಕ ವಿಚಾರಕ್ಕೆ ಇರಲಿ. ಸಹೋದರರ ಜೊತೆ ಪ್ರೀತಿಯಿಂದ ಇರಲು ಬಯಸುವಿರಿ. ನಿಮ್ಮನ್ನು ಹಳಿದವರೇ ನಿಮ್ಮ ಸಹವಾಸ ಬಯಸಿ ಬರಬಹುದು. ಗುಣಮಟ್ಟದ ಜೀವನಕ್ಕೆ ಹೋಗಲು ಸತತವಾಗಿ ಮಾಡಿದ ಪ್ರಯತ್ನವು ಇಂದು ಫಲ ಕೊಡಬಹುದು. ಬೇಡವೆಂದ ಕಾರ್ಯವನ್ನು ಹಠದಿಂದ ಮಾಡುವುದು ಬೇಡ.
ಕುಂಭ ರಾಶಿ : ನಿಮ್ಮ ಬೆಳವಣಿಗೆಯು ಇತರಿಗೆ ಕಷ್ಡವಾಗಬಹುದು. ಅದರ ಪರಿಣಾಮವನ್ನು ಎದುರಿಸಬೇಕಾದೀತು. ಅವರನ್ನು ದೂರವಿಟ್ಟು ನಿಮ್ಮ ಕೆಲಸವನ್ನು ಮಾಡಿಕೊಳ್ಳಿ. ನಿಮ್ಮ ಮನಸ್ಸಿಗೆ ವಿರುದ್ಧವಾದ ವಾತಾವರಣವಿದ್ದರೂ ಅದನ್ನು ಮನಸ್ಸಿಗೆ ತೆಗೆದುಕೊಳ್ಳದೇ ಮುನ್ನಡೆಯುವಿರಿ. ಮಕ್ಕಳಿಗೆ ನೀವು ತೋರಿಸುವ ಪ್ರೀತಿಯು ಖುಷಿ ಕೊಡುವುದು. ಸರ್ಕಾರಿ ಉದ್ಯೋಗಕ್ಕೆ ಅರ್ಜಿ ಹಾಕಲಿದ್ದೀರಿ.
ಮೀನ ರಾಶಿ : ಇಂದು ನಿಮ್ಮನ್ನು ಭೇಟಿ ಮಾಡಲು ಬಂದವರನ್ನು ಅಗೌರವದಿಂದ ಕಾಣುವಿರಿ. ನಿಮ್ಮ ಹತ್ತಾರು ಕನಸುಗಳಲ್ಲಿ ಒಂದು ಸಾಕಾರಗೊಳ್ಳುವುದು. ನಿಮಗೆ ಸೌಕರ್ಯಗಳು ಹೆಚ್ಚಾಯಿತು ಅನ್ನಿಸಬಹುದು. ಮುಕ್ತವಾಗಿ ಇರಲು ಕಷ್ಟವಾದೀತು. ಇಷ್ಟಪಟ್ಟವರನ್ನು ಪಡೆಯುವ ತಂತ್ರವನ್ನು ಹೂಡಬಹುದು. ಆಪ್ತರಿಗೆಂದು ಉಡುಗೊರೆಯನ್ನು ಸಿದ್ಧಮಾಡಿಕೊಳ್ಳುವಿರಿ.