ಚಾರ್ಮಾಡಿ:(ಜು.30) ಮಂಗಳೂರು ಹಾಗೂ ಚಿಕ್ಕಮಗಳೂರಿಗೆ ಸಂಪರ್ಕ ಕಲ್ಪಿಸುವ ಚಾರ್ಮಾಡಿ ಘಾಟ್‌ನಲ್ಲಿ ಮತ್ತೆ ಗುಡ್ಡ ಕುಸಿತ ಸಂಭವಿಸಿದ್ದು, ರಸ್ತೆ ಸಂಚಾರ ಬಂದ್ ಮಾಡಲಾಗಿದೆ.
ಇದನ್ನೂ ಓದಿ: ಬಂಟ್ವಾಳ: ಅಪಾಯ ಮಟ್ಟದ ಸನಿಹಕ್ಕೆ ತಲುಪಿದ ನೇತ್ರಾವತಿ- ತಗ್ಗು ಪ್ರದೇಶಗಳು ಜಲಾವೃತ
ರಾಷ್ಟ್ರೀಯ ಹೆದ್ದಾರಿ 173 ರಲ್ಲಿರುವ ಚಾರ್ಮಾಡಿ ಘಾಟಿಯಲ್ಲಿ ಮತ್ತೆ ಗುಡ್ಡ ಕುಸಿತ ಉಂಟಾಗಿದೆ.
ಘಾಟ್ ಪ್ರದೇಶದಲ್ಲಿ ವಿಪರೀತ ಮಳೆಯಾಗುತ್ತಿರುವ ಹಿನ್ನೆಲೆ ಗುಡ್ಡ ಕುಸಿದು ರಸ್ತೆಗೆ ಅಡ್ಡಲಾಗಿ ಮಣ್ಣು, ಮರ ಬಿದ್ದಿದೆ. ಹೀಗಾಗಿ ಘಾಟ್ ರಸ್ತೆ ಸಂಚಾರ ಬಂದ್ ಮಾಡಲಾಗಿದೆ.
ಇನ್ನು ಘಾಟ್ ರಸ್ತೆ ಸಂಚಾರ ಬಂದ್ ಮಾಡಿರುವ ಹಿನ್ನೆಲೆ ಭಾರೀ ಟ್ರಾಫಿಕ್ ಜಾಮ್ ಉಂಟಾಗಿದೆ. ನೂರಾರು ವಾಹನಗಳು ರಸ್ತೆಯಲ್ಲಿ ಸಾಲುಗಟ್ಟಿ ನಿಂತಿವೆ. ಕೊಟ್ಟಿಗೆಹಾರ, ಬೆಳ್ತಂಗಡಿ ಸಮೀಪ ಚಾರ್ಮಾಡಿ ಘಾಟಿಗೆ ತೆರಳದಂತೆ ಬ್ಯಾರಿಕೇಡ್ ಹಾಕಿ ರಸ್ತೆ ಬಂದ್ ಮಾಡಲಾಗಿದೆ.