ಬೆಂಗಳೂರು(ಆ.01) : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು ಅನುಮತಿ ಕೋರಿ ವಕೀಲ ಟಿಜೆ ಅಬ್ರಹಾಂ ರಾಜ್ಯಪಾಲರಿಗೆ ಮನವಿ ಸಲ್ಲಿಸಿದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ನೋಟಿಸ್ ನೀಡಿದ್ದಾರೆ.
ಇದನ್ನೂ ಓದಿ: 🔶ಧರ್ಮಸ್ಥಳ: ಧರ್ಮಸ್ಥಳ ಪ್ರಾ.ಕೃ.ಸ.ಸಂಘದ ನೂತನ ಮುಖ್ಯಕಾರ್ಯನಿರ್ವಹಣಾಧಿಕಾರಿಯಾಗಿ ಶಶಿಧರ ನೇಮಕ
ಇದನ್ನೂ ಓದಿ: ಧರ್ಮಸ್ಥಳ: ಧರ್ಮಸ್ಥಳ ಪ್ರಾ.ಕೃ.ಸ.ಸಂಘದ ನೂತನ ಮುಖ್ಯಕಾರ್ಯನಿರ್ವಹಣಾಧಿಕಾರಿಯಾಗಿ ಶಶಿಧರ ನೇಮಕ
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಬದಲಿ ನಿವೇಶನ ಹಂಚಿಕೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು ಅನುಮತಿ ಕೋರಿರುವ ಅರ್ಜಿಯಲ್ಲಿ ಆರೋಪಗಳ ಕುರಿತು ವಿವರಣೆ ನೀಡುವಂತೆ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್
ಅವರು ಸಿದ್ದರಾಮಯ್ಯ ಅವರಿಗೆ ನೋಟಿಸ್ ನೀಡಿದ್ದು, ಕೈ ಪಾಳಯದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಯಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಜುಲೈ 27ರಂದೇ ನೋಟಿಸ್ ಕಳುಹಿಸಲಾಗಿದೆ.
ಇಂದು(ಗುರುವಾರ) ನಡೆಯಲಿರುವ ಸಚಿವ ಸಂಪುಟ ಸಭೆ ನಡೆಯಲಿದ್ದು, ಈ ಸಭೆಯಲ್ಲಿ ನೋಟಿಸ್ಗೆ ವಿವರಣೆ ನೀಡುವ ಬಗ್ಗೆ ಹಾಗೂ ಸರ್ಕಾರದ ಮುಂದಿನ ಹೆಜ್ಜೆಯ ಬಗ್ಗೆ ಸಭೆಯಲ್ಲಿ ಚರ್ಚೆಯಾಗಲಿದೆ. ನೋಟಿಸ್ಗೆ ಸಂಬಂಧಿಸಿದ ವಿಚಾರ ಚರ್ಚೆಯ ಸಂದರ್ಭದಲ್ಲಿ ಸಿದ್ದರಾಮಯ್ಯ ಹೊರಗುಳಿದಿದ್ದು, ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅಧ್ಯಕ್ಷತೆ ವಹಿಸಲಿದ್ದಾರೆ. ಬಳಿಕ, ಈ ಬಗ್ಗೆ ರಾಜ್ಯ ಸರ್ಕಾರದ ತೀರ್ಮಾನ ಹೊರಬೀಳಲಿದೆ.