Wed. Nov 20th, 2024

ಬೆಳ್ತಂಗಡಿ : ವೇಣೂರು ಗುರುನಾರಾಯಣ ಸ್ವಾಮಿ ಸೇವಾ ಸಂಘಕ್ಕೆ ಜಮೀನು ಮಂಜೂರಿಗೆ ಸಚಿವ ಸಂಪುಟ ಅನುಮೋದನೆ

ಬೆಳ್ತಂಗಡಿ :(ಜು.5)  ಸಚಿವ ಸಂಪುಟವು  ಬೆಳ್ತಂಗಡಿ ತಾಲೂಕು  ವೇಣೂರು ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘಕ್ಕೆ ಜಮೀನು ಮಂಜೂರುಗೊಳಿಸಲು ಜುಲೈ. 4ರಂದು ಅನುಮೋದನೆ ನೀಡಿದೆ.

ಮಾಜಿ ಶಾಸಕ ಕೆ. ವಸಂತ ಬಂಗೇರ ಮತ್ತು ಕೆ.ಪಿ.ಸಿ.ಸಿ. ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಮನವಿಗೆ ಸ್ಪಂದಿಸಿದ ಸಚಿವ ಸಂಪುಟ ಬೆಳ್ತಂಗಡಿ ತಾಲೂಕು ವೇಣೂರು ಗುರುನಾರಾಯಣ ಸ್ವಾಮಿ ಸೇವಾ ಸಂಘದ ಧಾರ್ಮಿಕ ಮತ್ತು ಸಾಮಾಜಿಕ ಚಟುವಟಿಕೆಗಳನ್ನು ಉತ್ತೇಜಿಸಲು  ವೇಣೂರು ಗ್ರಾಮದ ಸ. ನಂ 59/1 ರಲ್ಲಿ 0.14 ಸೆಂಟ್ಸ್ ಜಮೀನನ್ನು ಮಂಜೂರುಗೊಳಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅದ್ಯಕ್ಷತೆಯಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ.

ಸಂಘದ ಕಾರ್ಯಚಟುವಟಿಕೆಗಳಿಗೆ ಉತ್ತೇಜಿಸಲು ಜಮೀನು ಮಂಜೂರುಗೊಳಿಸುವಂತೆ ಮಾಜಿ ಶಾಸಕ ಕೆ.

ವಸಂತ ಬಂಗೇರ ಮತ್ತು ಕೆ. ಪಿ. ಸಿ. ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಸರಕಾರಕ್ಕೆ  ಸಲ್ಲಿಸಿದ್ದ ಮನವಿಯನ್ನು ಸ್ಮರಿಸಬಹುದು.

Leave a Reply

Your email address will not be published. Required fields are marked *