Wed. Nov 20th, 2024

Paris Olympics 2024: ಅನರ್ಹಗೊಂಡ ವಿನೇಶ್‌ ಫೋಗಟ್ ಗೆ ಪ್ರಧಾನಿ ಮೋದಿ ಸಾಂತ್ವನದ ಟ್ವೀಟ್

Paris Olympics 2024:(ಆ.7) ಪ್ಯಾರಿಸ್‌ ಒಲಿಂಪಿಕ್ಸ್‌ನಲ್ಲಿ ಫೈನಲ್‌ ಪ್ರವೇಶಿಸುವ ಮೂಲಕ ಪದಕವೊಂದನ್ನು ಖಾತ್ರಿಪಡಿಸಿದ ಭಾರತದ ಮಹಿಳಾ ಕುಸ್ತಿಪಟು ವಿನೇಶ್‌ ಫೋಗಟ್ ಫೈನಲ್‌ ಆಡಲು ಕೆಲವೇ ಗಂಟೆಗಳು ಬಾಕಿ ಇರುವಾಗಲೇ ಒಲಿಂಪಿಕ್ಸ್‌ ಸಮಿತಿ ಅನರ್ಹ ಮಾಡಿದ್ದು, ಈ ಕಾರಣಕ್ಕೆ ಆಘಾತದಲ್ಲಿರುವ ವಿನೇಶ್‌ಗೆ ಪ್ರಧಾನಿ ಮೋದಿ ಟ್ವೀಟ್‌ ಮೂಲಕ ಸಾಂತ್ವನ ಹೇಳಿದ್ದಾರೆ.

ಇದನ್ನೂ ಓದಿ: 🛑ಬಂದಾರು: ಹಣವನ್ನು ಪಣವಾಗಿಟ್ಟು ಕೋಳಿ ಅಂಕ ನಡೆಸುತ್ತಿದ್ದ ಸ್ಥಳಕ್ಕೆ ಧರ್ಮಸ್ಥಳ ಪೊಲೀಸರ ದಾಳಿ

50 ಕೆಜಿ ತೂಕ ವಿಭಾಗದಲ್ಲಿ ಸ್ಪರ್ಧಿಸಿದ್ದ ವಿನೀಶ್‌ ಅವರು ನಿಗದಿತ ತೂಕಕ್ಕಿಂತ 100 ಗ್ರಾಂ ಹೆಚ್ಚು ಇರುವ ಕಾರಣಕ್ಕೆ ಅವರನ್ನು ಫೈನಲ್‌ನಿಂದ ಅನರ್ಹ ಮಾಡಲಾಗಿದೆ.

ವಿನೇಶ್, “ನೀವು ಚಾಂಪಿಯನ್‌ಗಳಲ್ಲಿ ಚಾಂಪಿಯನ್! ನೀವು ಭಾರತದ ಹೆಮ್ಮೆ ಮತ್ತು ಪ್ರತಿಯೊಬ್ಬ ಭಾರತೀಯರಿಗೂ ಸ್ಫೂರ್ತಿ. ಇಂದಿನ ಹಿನ್ನಡೆ ನೋವು ತಂದಿದೆ. ಪದಗಳು ನಾನು ಅನುಭವಿಸುತ್ತಿರುವ ಹತಾಶೆಯ ಅರ್ಥವನ್ನು ವ್ಯಕ್ತಪಡಿಸಬಹುದು ಎಂದು ನಾನು ಬಯಸುತ್ತೇನೆ. ಸವಾಲುಗಳನ್ನು ಎದುರಿಸುವುದು ಯಾವಾಗಲೂ ನಿಮ್ಮ ಸ್ವಭಾವವಾಗಿದೆ. ನಾವೆಲ್ಲರೂ ನಿಮ್ಮೊಂದಿಗಿದ್ದೇವೆ” ಎಂದು ಟ್ವೀಟ್‌ ಮಾಡಿದ್ದಾರೆ.

Leave a Reply

Your email address will not be published. Required fields are marked *