Sat. Apr 19th, 2025

Dharmasthala: (ಆ. 10) ಧರ್ಮಸ್ಥಳದಲ್ಲಿ ರಾಜ್ಯ ಮಟ್ಟದ ಅಂಚೆ-ಕುಂಚ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣೆ – ಶಾಂತಿವನ ಟ್ರಸ್ಟ್ ವತಿಯಿಂದ ಪ್ರಕಟಿಸಲಾದ “ಜ್ಞಾನದರ್ಶಿನಿ” ಮತ್ತು “ಜ್ಞಾನವರ್ಷಿನಿ” ನೈತಿಕ ಮೌಲ್ಯಧಾರಿತ ಪುಸ್ತಕ ಲೋಕಾರ್ಪಣೆ

ಉಜಿರೆ:(ಆ.9) ಧರ್ಮಸ್ಥಳದ ಶಾಂತಿವನ ಟ್ರಸ್ಟ್ ಆಶ್ರಯದಲ್ಲಿ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆಯಡಿಯಲ್ಲಿ ಆಯೋಜಿಸಿದ 21 ನೇ ವರ್ಷದ ರಾಜ್ಯಮಟ್ಟದ ಅಂಚೆ-ಕುಂಚ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಣಾ ಸಮಾರಂಭವು ಆ. 10 ರಂದು ಧರ್ಮಸ್ಥಳದಲ್ಲಿ ಮಹೋತ್ಸವ ಸಭಾಭವನದಲ್ಲಿ ಪೂರ್ವಾಹ್ನ ಗಂಟೆ 10.30 ರಿಂದ ನಡೆಯಲಿದೆ ಎಂದು ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆಯ ನಿರ್ದೇಶಕ ಶಶಿಕಾಂತ್ ಜೈನ್ ತಿಳಿಸಿದ್ದಾರೆ.

ಇದನ್ನೂ ಓದಿ: 🛑ಬೆಳ್ತಂಗಡಿ: ಅಕ್ರಮ ಮರಳು ಸಾಗಾಟ -ಬೆಳ್ತಂಗಡಿ ತಹಶೀಲ್ದಾರರಿಂದ ಬೆಳ್ಳಂಬೆಳಗ್ಗೆ ಕಾರ್ಯಾಚರಣೆ

ಚಲನಚಿತ್ರ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಬಹುಮಾನ ವಿತರಿಸಲಿದ್ದಾರೆ. ಶಾಂತಿವನ ಟ್ರಸ್ಟ್ ವತಿಯಿಂದ ಪ್ರಕಟಿಸಲಾದ “ಜ್ಞಾನದರ್ಶಿನಿ” ಮತ್ತು “ಜ್ಞಾನವರ್ಷಿನಿ” ಎಂಬ 30 ನೇ ವರ್ಷದ ನೈತಿಕ ಮೌಲ್ಯಧಾರಿತ ಪುಸ್ತಕಗಳನ್ನು ಹಾವೇರಿಯ ಹುಕ್ಕೇರಿ ಮಠದ ನಿರಂಜನ ಪ್ರಣವ ಸ್ವರೂಪಿ ಸದಾಶಿವ ಮಹಾಸ್ವಾಮೀಜಿ ಲೋಕಾರ್ಪಣೆ ಮಾಡಲಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲಾ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೇಶಕ ವೆಂಕಟೇಶ ಸುಬ್ರಾಯ ಪಟಗಾರ ರವರು ಭಾಗವಹಿಸಲಿದ್ದಾರೆ.

ಅಧ್ಯಕ್ಷತೆಯನ್ನು ಧರ್ಮಾಧಿಕಾರಿಯಾದ ಡಾ|ಡಿ. ವೀರೇಂದ್ರ ಹೆಗ್ಗಡೆಯವರು ವಹಿಸಲಿದ್ದಾರೆ.

Leave a Reply

Your email address will not be published. Required fields are marked *