Fri. Apr 18th, 2025

MUDA scam: ಸಿಎಂ ಕೊರಳಿಗೆ ‘ಮುಡಾ’ ಉರುಳು – ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ ರಾಜ್ಯಪಾಲರು

ಬೆಂಗಳೂರು:(ಆ.17) ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡಿರುವ ಬಗ್ಗೆ ವರದಿಯಾಗಿದೆ.

ಇದನ್ನೂ ಓದಿ: 🔴ಕೊಪ್ಪಳ: ತುಂಗಭದ್ರಾ ಜಲಾಶಯದ ಸ್ಟಾಪ್ ಗೇಟ್ ಅಳವಡಿಕೆ ಯಶಸ್ವಿ

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಮುಡಾದಲ್ಲಿ ನಡೆದಿದೆ ಎನ್ನಲಾದ ಹಗರಣ ಆರೋಪ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕೊನೆಗೂ ಪ್ರಾಸಿಕ್ಯೂಷನ್​ಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅನುಮತಿ ನೀಡಿದ್ದಾರೆ. ಇದರ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ಸಿಎಂ ಸಿದ್ದರಾಮಯ್ಯ ಮುಂದಿನ ಕಾನೂನು ಹೋರಾಟದ ಬಗ್ಗೆ ಸಮಾಲೋಚನೆ ನಡೆಸುತ್ತಿದ್ದಾರೆ. ಪ್ರಾಸಿಕ್ಯೂಷನ್​ಗೆ ನೀಡಿರುವ ಆದೇಶದ ಅಧಿಕೃತ ಪ್ರತಿ ಇನ್ನಷ್ಟೇ ಸಿಎಂ ಕೈಗೆ ತಲುಪಬೇಕಿದೆ.

ಕಾವೇರಿ ನಿವಾಸದಲ್ಲೇ ಇರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂದಿರುವ ಕಾನೂನು ಆಯ್ಕೆಗಳ ಬಗ್ಗೆ ಸಮಾಲೋಚನೆ ನಡೆಸುತ್ತಿದ್ದಾರೆ. ಪ್ರಾಸಿಕ್ಯೂಷನ್ ವಿರುದ್ಧ ಅವರು ಕೋರ್ಟ್ ಮೆಟ್ಟಿಲೇರುವ ಸಾಧ್ಯತೆ ದಟ್ಟವಾಗಿದೆ. ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಗುಪ್ತಚರ ಇಲಾಖೆ ಮುಖ್ಯಸ್ಥ ಶರತ್ ಚಂದ್ರ ಜೊತೆ ಸಿಎಂ ಚರ್ಚೆ ನಡೆಸುತ್ತಿದ್ದಾರೆ. ಪ್ರಾಸಿಕ್ಯೂಷನ್​ಗೆ​ ಅನುಮತಿ ನೀಡಿರುವ ಬಗ್ಗೆ ಹಾಗೂ ಮುಂದೆ ಕೈಗೊಳ್ಳಬೇಕಾದ ನಡೆಗಳ ಬಗ್ಗೆ ಅವರು ಸಮಾಲೋಚಿಸುತ್ತಿದ್ದಾರೆ.

ರಾಜ್ಯಪಾಲರ ಆದೇಶದ ಅಧಿಕೃತ ಪ್ರತಿ ತಲುಪಿದ ಬಳಿಕ ಮುಂದಿನ ತೀರ್ಮಾನ ಕೈಗೊಳ್ಳುವ ಬಗ್ಗೆ ಸಿಎಂ ನಿರ್ಧರಿಸಿದ್ದಾರೆ ಎನ್ನಲಾಗಿದೆ. ಈ ವಿಚಾರವಾಗಿ ಕೆಲವು ದಿನಗಳ ಹಿಂದೆ ಕೂಡ ಕಾನೂನು ತಜ್ಞರ ಜತೆ ಸಿಎಂ ಸಮಾಲೋಚನೆ ನಡೆಸಿದ್ದರು.

Leave a Reply

Your email address will not be published. Required fields are marked *