Wed. Nov 20th, 2024

Meerut: 2 ವರ್ಷದ ಮಗುವಿನ ಮೇಲೆ ಅತ್ಯಾಚಾರಕ್ಕೆ ಯತ್ನ- ಆ ಮೇಲೆ ಆಗಿದ್ದೇನು ಗೊತ್ತಾ?

ಮೀರತ್: (ಆ.18) ಉತ್ತರ ಪ್ರದೇಶದ ಮೀರತ್‌ನಲ್ಲಿ ವ್ಯಕ್ತಿಯೊಬ್ಬ 2 ವರ್ಷದ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಮಾಡಲು ಯತ್ನಿಸಿದ್ದಾನೆ. ಬಾಲಕಿಯ ಮನೆಯವರು ಆತನನ್ನು ಹಿಂಬಾಲಿಸಿಕೊಂಡು ಹೋದಾಗ ಆತ ಹೆದರಿಕೊಂಡು ಆ ಮಗುವನ್ನು ಚರಂಡಿಗೆ ಎಸೆದು ಓಡಿಹೋಗಿದ್ದಾನೆ. ತೀವ್ರವಾದ ಗಾಯದಿಂದಾಗಿ ಆ ಬಾಲಕಿ ಮೃತಪಟ್ಟಿದ್ದು, ಆಕೆಯ ಶವ ಚರಂಡಿಯಲ್ಲಿ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: 🛑Congress Guarantees : ಪ್ರತೀ ತಿಂಗಳು ಗ್ಯಾರಂಟಿ ಯೋಜನೆಗೆ ಖರ್ಚಾಗೋ ಹಣವೆಷ್ಟು ಗೊತ್ತಾ?

ಈ ಘಟನೆಯ ಕುರಿತು ವಿವರಗಳನ್ನು ನೀಡಿದ ಪೊಲೀಸ್ ವರಿಷ್ಠಾಧಿಕಾರಿ ಆಯುಷ್ ವಿಕ್ರಮ್ ಸಿಂಗ್, ಶುಕ್ರವಾರ ತಡರಾತ್ರಿ 20 ವರ್ಷದ ಮೋಯಿಶ್ ಎಂಬಾತ ಮೀರತ್‌ನ ಸದರ್ ಪ್ರದೇಶದಲ್ಲಿ ಮನೆಯಿಂದ ಹೊರಗೆ ತನ್ನ ಕುಟುಂಬದ ಸದಸ್ಯರೊಂದಿಗೆ ಮಲಗಿದ್ದ 2 ವರ್ಷದ ಬಾಲಕಿಯನ್ನು ತನ್ನ ಮನೆಯ ಹೊರಗಿನಿಂದ ಅಪಹರಿಸಿದ ಘಟನೆ ನಡೆದಿದೆ.

ಕುಟುಂಬದ ಸದಸ್ಯರು ಎಚ್ಚರಗೊಂಡ ನಂತರ, ತಮ್ಮ ಮನೆಯ ಮಗು ಇಲ್ಲವೆಂದು ಗೊತ್ತಾಗಿದೆ. ತಕ್ಷಣ ಆರೋಪಿಯನ್ನು ಹಿಂಬಾಲಿಸಿ ಹೋಗಿದ್ದಾರೆ. ಆದರೆ, ಆತ ಆ ಬಾಲಕಿಯನ್ನು ಚರಂಡಿಗೆ ಎಸೆದು ಸ್ಥಳದಿಂದ ಪರಾರಿಯಾಗಿದ್ದಾನೆ. ಇದರಿಂದ ಮಗು ಸಾವನ್ನಪ್ಪಿದೆ ಎಂದು ತಿಳಿಸಿದ್ದಾರೆ.

ಆರೋಪಿಯನ್ನು ಬಂಧಿಸಲಾಗಿದ್ದು, ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ ಎಂದು ಎಸ್ಪಿ ಆಯುಷ್ ಸಿಂಗ್ ಹೇಳಿದ್ದಾರೆ. ಬಾಲಕಿಯ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ. ಉತ್ತರ ಪ್ರದೇಶವನ್ನು ಬೆಚ್ಚಿ ಬೀಳಿಸಿದ 2 ಅತ್ಯಾಚಾರ ಪ್ರಕರಣಗಳ ಬೆನ್ನಲ್ಲೇ ಈ ಪ್ರಕರಣ ಬೆಳಕಿಗೆ ಬಂದಿದೆ.

Leave a Reply

Your email address will not be published. Required fields are marked *