ಬೆಳ್ತಂಗಡಿ:(ಆ.20) ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಸಹೋದರ, ಸಹೋದರಿಯರಿಗೆ ರಾಖಿಯನ್ನು ಕಟ್ಟುವ ಮುಖೇನ ರಕ್ಷಾ ಬಂಧನ ಹಬ್ಬದ ಆಚರಣೆ ಮಾಡಲಾಯಿತು.
ಇದನ್ನೂ ಓದಿ: 🔶ಬೆಳ್ತಂಗಡಿ:(ಆ. 21) ಜೆಸಿಐ ಭಾರತದ ರಾಷ್ಟ್ರೀಯ ಅಧ್ಯಕ್ಷ ಸಿ.ಆರ್ ರಿಕೇಶ್ ಶರ್ಮಾ ಬೆಳ್ತಂಗಡಿಗೆ ಭೇಟಿ
ಸನಾತನ ಧರ್ಮದಲ್ಲಿ ರಕ್ಷಾ ಬಂಧನ ಹಬ್ಬವನ್ನು ಶ್ರಾವಣ ಹುಣ್ಣಿಮೆಯಂದು ಆಚರಿಸಲಾಗುತ್ತದೆ. ಈ ದಿನ ಸಹೋದರಿಯರು ತಮ್ಮ ಸಹೋದರರಿಗೆ ಆರತಿ ಬೆಳಗಿಸಿ, ಪ್ರೀತಿಯ ಪ್ರತಿಕವೆಂದು ರಾಖಿಯನ್ನು ಕಟ್ಟುತ್ತಾರೆ. ಸಹೋದರರು ಏನಾದರೂ ಒಂದು ವಸ್ತುವನ್ನು ಉಡುಗೊರೆಯಾಗಿ ನೀಡಿ ಆಶೀರ್ವಾದ ನೀಡುತ್ತಾರೆ.
ಇದರ ಹಿಂದೆ ಸಹೋದರನ ಏಳಿಗೆಯಾಗಬೇಕು ಮತ್ತು ಸಹೋದರನು ಸಹೋದರಿಯ ರಕ್ಷಣೆಯನ್ನು ಮಾಡಬೇಕು ಎನ್ನುವ ಉದ್ದೇಶವಿರುತ್ತದೆ. ಇಬ್ಬರಲ್ಲಿನ ಕೊಡುಕೊಳ್ಳುವ ಲೆಕ್ಕಾಚಾರ ಕಡಿಮೆಯಾಗಿ ಈಶ್ವರನತ್ತ ಪ್ರಯಾಣಿಸುವ ಅವಕಾಶವನ್ನು ಒದಗಿಸುತ್ತದೆ. ಹಾಗೂ ಈ ಹಬ್ಬವು ಇಬ್ಬಾಗವಾಗಿರುವ ಸಮಾಜವನ್ನು ಒಗ್ಗೂಡಿಸುವ ಒಂದು ಸಂಧಿಯಾಗಿದೆ.
ಇದರಿಂದ ಕುಟುಂಬದಲ್ಲಿರುವ ಕಲಹ ಶಾಂತವಾಗುತ್ತದೆ. ಮನಸ್ತಾಪ ದೂರವಾಗುತ್ತದೆ ಮತ್ತು ಸಾಮೂಹಿಕ ಸಂಕಲ್ಪ ಶಕ್ತಿ ಕಾರ್ಯಗತವಾಗುತ್ತದೆ. ಈ ಉದ್ದೇಶದಿಂದ ಹಿಂದೂ ಜನಜಾಗೃತಿ ಸಮಿತಿಯು ಸಹೋದರರಿಗೆ ರಾಖಿಯನ್ನು ಕಟ್ಟುವ ಮುಖಾಂತರ ರಕ್ಷಾ ಬಂಧನ ಹಬ್ಬವನ್ನು ಆಚರಿಸಲಾಯಿತು.
ಈ ನಿಟ್ಟಿನಲ್ಲಿ ಮಾನ್ಯ ಶಾಸಕರು ಶ್ರೀ ಹರೀಶ್ ಪೂಂಜಾರವರಿಗೆ, ಪತ್ರಕರ್ತರಿಗೆ, ಹಿಂದುತ್ವ ನಿಷ್ಠರಿಗೆ ಹಾಗೂ ಧರ್ಮಪ್ರೇಮಿಗಳಿಗೆ ರಾಕಿ ಕಟ್ಟುವ ಮೂಲಕ ರಕ್ಷಾಬಂಧನದ ಶುಭಾಶಯವನ್ನು ಹೇಳಲಾಯಿತು.