ಬೆಳ್ತಂಗಡಿ : ಯಾವುದೋ ಖಾಸಗಿ ವಿಚಾರಕ್ಕೆ ಸಂಬಂಧಿಸಿ ಉಂಟಾದ ಜಗಳದಲ್ಲಿ ಮನೆಯ ಅಂಗಳದಲ್ಲಿಯೇ ವ್ಯಕ್ತಿಯನ್ನು ಮಾರಾಕಾಸ್ತ್ರದಿಂದ ಕೊಚ್ಚಿ ಬರ್ಬರವಾಗಿ ಕೊಲೆಗೈದ ಘಟನೆ ಬೆಳಾಲು ಗ್ರಾಮದಲ್ಲಿ ಮಂಗಳವಾರ ನಡೆದಿದೆ.
ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ಎಸ್.ಪಿ.ಬಿ ಕಾಂಪೌಂಡ್ ನಿವಾಸಿ ಎಸ್.ಪಿ.ಬಾಲಕೃಷ್ಣ ಭಟ್ (83) ಎಂಬವರೇ ಕೊಲೆಯಾದ ವ್ಯಕ್ತಿ.
ಮಂಗಳವಾರ ಮಧ್ಯಾಹ್ನದ ಬಳಿಕ ಘಟನೆ ಸಂಭವಿಸಿದೆ.ಕೌಟುಂಬಿಕ ಕಲಹ ಶಂಕೆ ವ್ಯಕ್ತವಾಗಿದ್ದು ಕೊಲೆಗಾರರು ಯಾರು ಕೊಲೆಗೆ ಕಾರಣವೇನೆಂಬ ಬಗ್ಗೆ ಸ್ಪಷ್ಟವಾದ ಮಾಹಿತಿಗಳು ಲಭ್ಯವಾಗಿಲ್ಲ. ಈ ಬಗ್ಗೆ ಇನ್ನಷ್ಟೇ ಮಾಹಿತಿ ತಿಳಿದು ಬರಬೇಕಿದೆ.
ಸ್ಥಳಕ್ಕೆ ಧರ್ಮಸ್ಥಳ ಪೊಲೀಸರು ದೌಡಾಯಿಸಿದ್ದು ತನಿಖೆ ನಡೆಸುತ್ತಿದ್ದಾರೆ.