Thu. Dec 26th, 2024

Bengaluru: ಬಟ್ಟೆ ಕೊಳ್ಳುವ ವಿಚಾರಕ್ಕೆ ಜಗಳ – ಕೊನೆಗೆ ಆಗಿದ್ದೇನು ಗೊತ್ತಾ?

ಬೆಂಗಳೂರು: (ಆ.21) ಬಟ್ಟೆ ಕೊಳ್ಳುವ ವಿಚಾರಕ್ಕೆ ಪತಿ ಮತ್ತು ಪತ್ನಿ ಮಧ್ಯೆ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ ಪೆಟ್ರೋಲ್​ ಸುರಿದು ಬೆಂಕಿ ಹಚ್ಚಿ ಪತ್ನಿಯನ್ನೇ ಪತಿ ಹತ್ಯೆಗೈದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ದಾಬಸ್​​​ಪೇಟೆಯಲ್ಲಿ ನಡೆದಿದೆ. ಪತಿ ಶಿವಾನಂದ ಪತ್ನಿ ಕಾವ್ಯಾ(27) ರನ್ನು ಹತ್ಯೆಗೈದು ಪರಾರಿಯಾಗಿದ್ದ. ಕಾವ್ಯಾ ಪೋಷಕರ ದೂರಿನನ್ವಯ ಶಿವಾನಂದ ಬಂಧಿಸಲಾಗಿದೆ.

ಇದನ್ನೂ ಓದಿ: 🛑ಮಂಡ್ಯ: 60ರ ಅರ್ಚಕನ ಜೊತೆ 20 ವರ್ಷದ ಯುವತಿ ಚಾಟಿಂಗ್

ಕಾವ್ಯಾ ಮತ್ತು ಶಿವಾನಂದ 6 ವರ್ಷಗಳ ಹಿಂದೆ ಮದುವೆಯಾಗಿದ್ದು, ಎರಡು ಮಕ್ಕಳಿದ್ದಾರೆ. ಶಿವಾನಂದ ದಾಬಸ್ ಪೇಟೆ ಕೈಗಾರಿಕಾ ಪ್ರದೇಶದಲ್ಲಿರುವ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದು, ಕಳೆದ 6 ತಿಂಗಳ ಹಿಂದೆಯಷ್ಟೇ ಆರೋಗ್ಯ ಸಮಸ್ಯೆಯಿಂದ ಕೆಲಸ ಬಿಟ್ಟಿದ್ದಾರೆ.

ತಿಂಗಳ ಹಿಂದೆ ಗಲಾಟೆ ಮಾಡಿ ಕಾವ್ಯಾ ತವರು ಸೇರಿದ್ದರು. ವಾರದ ಹಿಂದೆಯಷ್ಟೇ ಪತ್ನಿಯನ್ನ ಪತಿ ಮನೆಗೆ ಕರೆತಂದಿದ್ದರು. ವರಮಹಾಲಕ್ಷ್ಮಿ ಹಬ್ಬಕ್ಕೆ ಬಟ್ಟೆ ಕೊಡಿಸುತ್ತೆನೆಂದು ಕೊಡಿಸಿಲ್ಲ. ಹೀಗೆ ಆದರೆ ತವರು ಮನೆಗೆ ತೆರಳುವುದಾಗಿ ಕ್ಷುಲ್ಲಕ ಕಾರಣಗಳಿಗಾಗಿ ಗಲಾಟೆ ಉಂಟಾಗಿ ಬಳಿಕ ಕೊಲೆ ಮಾಡಲಾಗಿದೆ. ನಂತರ ಮೃತದೇಹವನ್ನು ಪೆಟ್ರೋಲ್​ ಸುರಿದು ಸುಟ್ಟು ಹಾಕಿದ್ದಾರೆ.

ಇತ್ತ ತಂಗಿ ರಮ್ಯಾರ ಫೋನ್​ ತೆಗೆಯದ ಮೃತ ಕಾವ್ಯ, ಅನುಮಾನಗೊಂಡು ಮನೆಗೆ ಬಂದಾಗ ಘಟನೆ ಬೆಳಕಿಗೆ ಬಂದಿದೆ. ಪೊಲೀಸರ ಜೊತೆ ಸೀನ್ ಆಫ್ ಕ್ರೈಂ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ನೆಲಮಂಗಲ ಡಿವೈಎಸ್​ಪಿ ಜಗದೀಶ್ ನೇತೃತ್ವದಲ್ಲಿ ತನಿಖೆ ಮಾಡಿದ್ದು, ಕಾವ್ಯ ಪೋಷಕರ ಕರೆ ಸ್ವೀಕರಿಸಿದ ಎಸ್ಕೇಪ್ ಆಗಿದ್ದ ಪತಿ ಶಿವಾನಂದನನ್ನ ಕೆಲವೇ ಗಂಟೆಗಳಲ್ಲಿ ಬಂಧಿಸಿದ್ದಾರೆ. ಸದ್ಯಕ್ಕೆ ದಾಬಸ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *