Wed. Nov 20th, 2024

Shikhar Dhawan: ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ ಶಿಖರ್ ಧವನ್

Shikhar Dhawan:(ಆ.24) 2010 ರಲ್ಲಿ ಟೀಮ್ ಇಂಡಿಯಾ ಪರ ಚೊಚ್ಚಲ ಪಂದ್ಯವಾಡಿದ ಶಿಖರ್ ಧವನ್ 2022ರಲ್ಲಿ ಭಾರತ ತಂಡದಿಂದ ಹೊರಬಿದ್ದಿದ್ದರು. ಇದಾದ ಬಳಿಕ ಅವರಿಗೆ ಟೀಮ್ ಇಂಡಿಯಾದಲ್ಲಿ ಚಾನ್ಸ್ ಸಿಕ್ಕಿರಲಿಲ್ಲ. ಇದೀಗ ಐಪಿಎಲ್ ಮೆಗಾ ಹರಾಜಿಗೂ ಮುನ್ನ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ್ದಾರೆ. ಇದಾಗ್ಯೂ ಅವರು ಐಪಿಎಲ್​ನಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಇದನ್ನೂ ಓದಿ: 🛑ಕಾರ್ಕಳ: ಕಾರ್ಕಳದಲ್ಲಿ ಹಿಂದೂ ಯುವತಿಯ ಮೇಲೆ ಗ್ಯಾಂಗ್ ರೇಪ್ – SP ಅರುಣ್ ಹೇಳಿದ್ದೇನು?

ಟೀಮ್ ಇಂಡಿಯಾದ ಆರಂಭಿಕ ಆಟಗಾರ ಶಿಖರ್ ಧವನ್ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ್ದಾರೆ. ಧವನ್ ಸಾಮಾಜಿಕ ಮಾಧ್ಯಮದ ಮೂಲಕ ತಮ್ಮ ನಿವೃತ್ತಿ ನಿರ್ಧಾರವನ್ನು ಪ್ರಕಟಿಸಿದ್ದು, ಈ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ಗುಡ್ ಬೈ ಹೇಳುತ್ತಿರುವುದಾಗಿ ತಿಳಿಸಿದ್ದಾರೆ.

“ನನ್ನ ಕ್ರಿಕೆಟ್ ಪಯಣದ ಈ ಅಧ್ಯಾಯವನ್ನು ಮುಕ್ತಾಯಗೊಳಿಸುತ್ತಿದ್ದೇನೆ. ಈ ಪ್ರಯಾಣದಲ್ಲಿ ನಾನು ನನ್ನೊಂದಿಗೆ ಅಸಂಖ್ಯಾತ ನೆನಪುಗಳು ಮತ್ತು ಕೃತಜ್ಞತೆಯನ್ನು ಹೊಂದಿದ್ದೇನೆ. ನಿಮ್ಮ ಪ್ರೀತಿ ಮತ್ತು ಬೆಂಬಲಕ್ಕಾಗಿ ಧನ್ಯವಾದಗಳು! ಜೈ ಹಿಂದ್!” ಎಂದು ಧವನ್ ವಿಡಿಯೋದಲ್ಲಿ ಹೇಳಿದ್ದಾರೆ.

ಭಾರತಕ್ಕಾಗಿ ಆಡುವ ಗುರಿಯನ್ನು ನಾನು ಯಾವಾಗಲೂ ಮನಸ್ಸಿನಲ್ಲಿಟ್ಟುಕೊಂಡಿದ್ದೆ. ನಾನು ಅದನ್ನು ಸಾಧಿಸಿದೆ. ಇದಕ್ಕಾಗಿ ಬಹಳಷ್ಟು ಜನರಿಗೆ ಧನ್ಯವಾದಗಳು. ಮೊದಲನೆಯದಾಗಿ ನನ್ನ ಕುಟುಂಬ, ನನ್ನ ಬಾಲ್ಯದ ಕೋಚ್ ತಾರಕ್ ಸಿನ್ಹಾ ಮತ್ತು ಮದನ್ ಶರ್ಮಾ ಅವರ ಮಾರ್ಗದರ್ಶನದಲ್ಲಿ ನಾನು ಕ್ರಿಕೆಟ್ ಕಲಿತೆ. ನಂತರ ನಾನು ವರ್ಷಗಳ ಕಾಲ ಆಡಿದ ನನ್ನ ಇಡೀ ತಂಡ ಮತ್ತೊಂದು ಕುಟುಂಬದಿಂದ ಖ್ಯಾತಿ ಮತ್ತು ಎಲ್ಲರ ಪ್ರೀತಿ ಮತ್ತು ಬೆಂಬಲ ಸಿಕ್ಕಿತು. ಜೀವನದಲ್ಲಿ ಮುನ್ನಡೆಯಲು ಪುಟವನ್ನು ತಿರುಗಿಸುವುದು ಮುಖ್ಯ. ಅದಕ್ಕಾಗಿಯೇ ನಾನು ಅಂತರಾಷ್ಟ್ರೀಯ ಮತ್ತು ದೇಶೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸುತ್ತಿದ್ದೇನೆ ಎಂದು ಶಿಖರ್ ಧವನ್ ತಿಳಿಸಿದ್ದಾರೆ.

ದೇಶಕ್ಕಾಗಿ ನಾನು ಸಾಕಷ್ಟು ಆಡಿದ್ದೇನೆ ಎಂಬ ತೃಪ್ತಿ ನನಗಿದೆ. ನನಗೆ ಈ ಅವಕಾಶವನ್ನು ನೀಡಿದ ಬಿಸಿಸಿಐ, ಡಿಡಿಸಿಎ (ದೆಹಲಿ ಕ್ರಿಕೆಟ್ ಸಂಸ್ಥೆ) ಮತ್ತು ಬೆಂಬಲಸಿದ ನನ್ನ ಎಲ್ಲಾ ಅಭಿಮಾನಿಗಳಿಗೆ ನಾನು ನಿಜವಾಗಿಯೂ ಕೃತಜ್ಞನಾಗಿದ್ದೇನೆ. ನಾನು ಮತ್ತೆ ನಿಮ್ಮ ದೇಶಕ್ಕಾಗಿ ಆಡುವುದಿಲ್ಲ ಎಂದು ದುಃಖಿಸಬೇಡಿ ಎಂದು ಧವನ್‌ ಹೇಳಿದ್ದಾರೆ.

Leave a Reply

Your email address will not be published. Required fields are marked *