Wed. Nov 20th, 2024

Aries to Pisces: ಇಂದು ಈ ರಾಶಿಯವರು ಶುಭ ದಿನದ ನಿರೀಕ್ಷೆಯಲ್ಲಿ ಇರುವಿರಿ!!

Daily Horoscope - ಇಂದು ಈ ರಾಶಿಯವರಿಗೆ ಆತುರವೇ ಅಪಾಯ ತಂದೊಡ್ಡಬಹುದು

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಸಿಂಹ ಮಾಸ, ಮಹಾನಕ್ಷತ್ರ: ಮಘಾ, ಮಾಸ: ಶ್ರಾವಣ, ಪಕ್ಷ: ಕೃಷ್ಣ, ವಾರ: ಭಾನು, ತಿಥಿ: ಷಷ್ಠೀ, ನಿತ್ಯನಕ್ಷತ್ರ: ಭರಣೀ, ಯೋಗ: ಗಂಡ, ಕರಣ: ವಣಿಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 21 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06:47 ಗಂಟೆ, ರಾಹು ಕಾಲ ಸಂಜೆ 05:15 ರಿಂದ 18:48, ಯಮಘಂಡ ಕಾಲ ಮಧ್ಯಾಹ್ನ 12:35 ರಿಂದ 02:08ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 03:41 ರಿಂದ ಸಂಜೆ 05:15ರ ವರೆಗೆ

ಮೇಷ ರಾಶಿ: ಇಂದು ನಿಮಗೆ ಗೊತ್ತಿಲ್ಲದೇ ಪುಣ್ಯವು ನಿಮ್ಮನ್ನು ಸೇರಿಸುವ ಸ್ಥಳಕ್ಕೆ ತಂದುಬಿಡುವುದು. ಪ್ರಶಂಸೆಯಿಂದ ನಿಮಗೆ ಮುಜುಗರವಾಗುವುದು. ವ್ಯಾಪಾರಸ್ಥರು ಪ್ರಾಮಾಣಿಕತೆಯಿಂದಲೂ ಸೋಲುವರು. ನಿಮ್ಮ ಜವಾಬ್ದಾರಿಯನ್ನು ಸರಿಯಾಗಿ ಸಮಯಕ್ಕೆ ಪೂರೈಸುವಿರಿ. ತಾಯಿಯ ಕಡೆಯ ಬಂಧುಗಳು ನಿಮಗೆ ಆಪ್ತರಾಗುವರು. ಇಂದು ನೀವು ಸುಳ್ಳು ಹೇಳಿ ಸಿಕ್ಕಿಬೀಳುವ ಸಾಧ್ಯತೆ ಇದೆ.‌

ವೃಷಭ ರಾಶಿ: ಮನಸ್ಸಿನ ನಿಯಂತ್ರಣದಿಂದ ಇಂದಿನ ಎಲ್ಲ ಒತ್ತಡವನ್ನೂ ಸರಿಮಾಡಿಕೊಳ್ಳುವಿರಿ. ಇಂದು ನಿಮಗೆ ಒಳ್ಳೆಯ ವಾರ್ತೆ ಸಿಗಬಹುದು. ನಿಮ್ಮ ವೈಯಕ್ತಿಕ ಯೋಜನೆಗಳಿಗೆ ಯಾರೂ ಅಡ್ಡಿ ಮಾಡಲಾರರು. ಲಾಭ‌ವನ್ನು ಪಡೆಯಲು ಹೊಸ ಮಾರ್ಗಗಳು ಗೊತ್ತಾಗಬಹುದು. ಆಮಿಷಕ್ಕೆ ಒಳಗಾಗಿ ಕೆಟ್ಟದ್ದನ್ನು ಮಾಡಬಹುದು.

ಮಿಥುನ ರಾಶಿ: ವಿದ್ಯಾರ್ಥಿಗಳು ಶ್ರದ್ಧೆಯಿಂದ ಅಭ್ಯಾಸದ ಕಡೆ ಗಮನವಿಡಿ. ಅದೇ ಉತ್ತರವಾಗಲಿದೆ. ಅವಿವಾಹಿತರ ನಿರೀಕ್ಷೆ ಅಧಿಕವಾಗಿರುವುದು. ಬಹಳ ದಿನಗಳ ಅನಂತರ ಕುಟುಂಬದ ಸಂಬಂಧಗಳು ಬಲಗೊಳ್ಳುವುದು. ನೀವು ಯಶಸ್ಸನ್ನು ಸಾಧಿಸಲು ಹಂಬಲಿಸುವಿರಿ. ಒಂದೇ ವಿಚಾರವನ್ನು ಮತ್ತೆ ಮತ್ತೆ ಹೇಳಿ ಇತರರಿಂದ ದೂರಾಗಬಹುದು.

ಕರ್ಕಾಟಕ ರಾಶಿ: ಇಂದು ನೀವು ಬಹಳ ದಿನಗಳ ಅನಂತರ ಸಂಗಾತಿಯ ಜೊತೆ ದೂರದ ಊರಿಗೆ‌ ಪ್ರಯಾಣ ಮಾಡುವಿರಿ. ಹಣವು ನಿಮ್ಮ ತುರ್ತು ಅವಶ್ಯಕತೆಯಾದ ಕಾರಣ ಅದನ್ನು ಗಳಿಸುವ ವಿಧಾನವನ್ನು ಯೋಚಿಸುವಿರಿ. ಇಂದಿನ‌ ನಿಮ್ಮ ಅಭಿಪ್ರಾಯವನ್ನು ಕುಟುಂಬ ಗೌರವಿಸುವುದು. ಕಳೆದುಹೋದ ವಸ್ತುವಿನ ಬಗ್ಗೆ ನಿಮಗೆ ಅತಿಯಾದ ಮೋಹ ಉಂಟಾಗುವ ಸಾಧ್ಯತೆ ಇದೆ.

ಸಿಂಹ ರಾಶಿ: ಇಂದು ಸಿಕ್ಕಿದ್ದರಲ್ಲಿ ಸಂತೃಪ್ತಿಯಿಂದ ಅನುಭವಿಸುವುದು ಅವಶ್ಯಕ. ನಿಮಗೆ ನೀವೇ ಉತ್ತೇಜನವನ್ನು ಕೊಟ್ಟುಕೊಳ್ಳಬೇಕಾಗುವುದು. ಇನ್ನೊಬ್ಬರಿಗೆ ಸಾಲವಾಗಿ ನೀಡಿದ ಹಣವನ್ನು ಸ್ವೀಕರಿಸಬಹುದು. ಅನಗತ್ಯ ವೆಚ್ಚಗಳಿಗೆ ಕಡಿವಾಣ ಹಾಕಿ ಸಂಪತ್ತನ್ನು ಉಳಿಸಿಕೊಳ್ಳಿ. ಸ್ನೇಹಿತರ ಜೊತೆ ಮೋಜಿನಲ್ಲಿ ಸಮಯವನ್ನು ಕಳೆಯುವಿರಿ.

ಕನ್ಯಾ ರಾಶಿ: ಇಂದು ನಿಮ್ಮ ವ್ಯವಹಾರದಲ್ಲಿ ಕೆಲವು ಬದಲಾವಣೆಗಳು ಬೇಕು ಎಂದು ಅನ್ನಿಸಬಹುದು. ನಿಮಗೆ ಹಿರಿಯರಿಂದ ಪ್ರಶಂಸೆ ಸಿಗುವುದು. ಹಿರಿಯರ ಜೊತೆ ಸಮಯವನ್ನು ಕಳೆಯಲು ಅವಕಾಶ ಸಿಗಲಿದೆ. ಯಾವುದನ್ನೂ ಗೊತ್ತಿಲ್ಲ ಎಂದು ಹೇಳುವುದನ್ನು ಬಿಡಬೇಕು.

ತುಲಾ ರಾಶಿ: ಇಂದು ನಿಮ್ಮ ಮಾತುಗಳು ಕೆಲವರಿಗೆ ವಿರೋಧದಂತೆ ಭಾಸವಾಗಬಹುದು. ಹರಿತವಾದ ಕತ್ತಿ ಇದೆ ಎಂದು ಮೂಗನ್ನು ಕತ್ತರಿಸಲಾಗದು. ಅದರ ಉಪಯೋಗವನ್ನು ತಿಳಿದುಕೊಂಡು ಅದನ್ನು ಮಾಡಬೇಕು. ಜನರ ಜೊತೆ ಬೆರೆಯುವ ಮನಸ್ಸಾಗುವುದು.

ವೃಶ್ಚಿಕ ರಾಶಿ: ಮಕ್ಕಳ ಪ್ರೀತಿಯಲ್ಲಿ ನೀವು ಕಳೆದುಹೋಗುವಿರಿ. ಕ್ರೀಡೆಯಲ್ಲಿ ಹೆಚ್ಚು ಮನಸ್ಸುಳ್ಳವರಾಗುವಿರಿ. ಸ್ನೇಹಪರವಾಗಿ ಇದ್ದಷ್ಟು ನಿಮಗೆ ಅನುಕೂಲತೆಗಳು ಜಾಸ್ತಿ. ಇಂದು ನೀವು ಇನ್ನೊಬ್ಬರ ಶ್ರೇಯಸ್ಸಿಗೆ ಕೆಲಸವನ್ನು ಮಾಡಲು ಇಚ್ಛಿಸುವಿರಿ. ಸಾಮಾಜಿಕ ಕೆಲಸವು ನಿಮಗೆ ಪ್ರಿಯವಾದುದಾಗಿದೆ.

ಧನು ರಾಶಿ: ಇಂದು ಕಛೇರಿಯಲ್ಲಾಗಲಿ ನಿಮ್ಮ ಮಾತನ್ನು ಬೆಂಬಲಿಸತ್ತಾರೆ. ಎಲ್ಲವನ್ನೂ ಮರೆತು ಕುಳಿತುಕೊಳ್ಳಲು ಕಷ್ಟವಾಗುವುದು. ಇಂದು ನಿಮ್ಮ ಕೌಶಲದ ಬಗ್ಗೆ ಹಂಚಿಕೊಳ್ಳಿ. ನಿಮಗೆ ಮುಂದಿನ ಜೀವನೋಪಾಯಕ್ಕೆ ದಾರಿಯಾದೀತು. ಆರ್ಥಿಕವಾಗಿ ಸಬಲರಾಗುವ ಹಂಬಲವಿದ್ದರೂ ಆಲಸ್ಯದಿಂದ ಹೊರಬರದೇ ಇದು ಸಾಧ್ಯವಿಲ್ಲ.

ಮಕರ ರಾಶಿ: ಇಂದು ನಿಮಗೆ ಸೇವೆಯಲ್ಲಿ ಸಂತೋಷ ಸಿಗಲಿದೆ. ನೀವು ತೊಂದರೆಗೆ ಸಿಲುಕದಂತೆ ದಾಟಲು ನಿಮಗೆ ಯಾರಿಂದಲಾದರೂ ಸೂಚನೆ ಬರಬಹುದು. ಯಾವುದಾದರೂ ಜವಾಬ್ದಾರಿಯನ್ನು ಪಡೆದರೆ ಮುಂದಾಗುವ ಎಲ್ಲದೂ ನಿಮ್ಮ ಮೇಲೆ ಬರಲಿದೆ.

ಕುಂಭ ರಾಶಿ: ಆತುರದಲ್ಲಿ ಏನಾದರೂ ನಿರ್ಧಾರವನ್ನು ತೆಗದುಕೊಳ್ಳಬೇಡಿ. ಸಾಲವು ನಿಮ್ಮ ಆತ್ಮೀಯತೆಯನ್ನು ಹಾಳುಮಾಡುವುದು. ಇಂದು ನೀವು ಸಣ್ಣ ವಿಷಯಗಳಿಗೂ ಕೋಪ ಮಾಡಿಕೊಳ್ಳುವಿರಿ.

ಮೀನ ರಾಶಿ: ಇಂದು ನಿಮಗೆ ಧಾರ್ಮಿಕ ಕಾರ್ಯಗಳಿಂದ ನಿಮ್ಮ ಹಣದ‌ ಸಂಪಾದನೆಯಾಗಲಿದೆ. ಹಿರಿಯರ ಬೇಸರವೇ ನಿಮಗೆ ಶಾಪದಂತೆ ಆಗಬಹುದು. ಇದು ನಿಮ್ಮ ಮನಸ್ಸಿಗೆ ಇಂದು‌ ನೀವು ಶುಭದಿನದ ನಿರೀಕ್ಷೆಯಲ್ಲಿ ಇರುವಿರಿ. ನಿಮ್ಮ ಸಾಮರ್ಥ್ಯ ಅನಾವರಣಕ್ಕೆ ಇಂದು ಶುಭದಿನವಾಗಲಿದೆ. ಪ್ರೀತಿಯಲ್ಲಿ ಬಿದ್ದು ನೀವು ಒದ್ದಾಡುವ ಸ್ಥಿತಿ ಎದುರಾಗಬಹುದು. ಸಂಗಾತಿಗೆ ಅನಿರೀಕ್ಷಿತ ಉಡುಗೊರೆಯನ್ನು ನೀಡಿ.

Leave a Reply

Your email address will not be published. Required fields are marked *