ಪುತ್ತೂರು:(ಆ.28) ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ಆಡಿಯೋ ಹಾಗೂ ಈ ಕುರಿತು ಮಾಧ್ಯಮಗಳಲ್ಲಿ ಪ್ರಸಾರವಾಗಿರುವ ವರದಿಗಳ ಕುರಿತು ಅರುಣ್ ಕುಮಾರ್ ಪುತ್ತಿಲ ಸ್ಪಷ್ಟನೆ ನೀಡಿದೆ.
ಕಳೆದ ವಿಧಾನಸಭಾ ಚುನಾವಣೆ ಮತ್ತು ನಂತರ ನಡೆದ ಆರೋಪ ಪ್ರತ್ಯಾರೋಪಗಳು ಎಲ್ಲವೂ ಜನತೆಯ ಮುಂದಿರುವುದು ತಿಳಿದ ವಿಚಾರ ಚುನಾವಣಾ ಸಂದರ್ಭದಲ್ಲಿ 3.5 ಕೋಟಿ ರೂಪಾಯಿ ವ್ಯವಹಾರದ ಅಪಾದನೆ ಮತ್ತು
ಅದರ ಬಗ್ಗೆ ಸಾರ್ವಜನಿಕ ಸಭೆಯಲ್ಲಿ ಹೇಳಿರುವ ವಿಚಾರಕ್ಕೆ ಇಂದು ಕೂಡ ಬದ್ಧನಾಗಿದ್ದೇನೆಂದು ಪುತ್ತಿಲ ಹೇಳಿದ್ದಾರೆ.
ಈ ರೀತಿಯಾಗಿ ಸುಳ್ಳು ಆರೋಪ ಮಾಡುವುದು ಸರಿಯಲ್ಲ ಎಂದು ಭಾವಿಸಿದ್ದೇನೆ. ಮುಂದಿನ ದಿನದಲ್ಲಿ ಇದೇ ರೀತಿಯ ರಾಜಕೀಯ ಷಡ್ಯಂತರಗಳ ಬಗ್ಗೆ ಹಿರಿಯರ ಹಾಗೂ ಅಧಿಕಾರಿಗಳ ಸೂಚನೆಯಂತೆ ಚೌಕಟ್ಟಿನಲ್ಲಿ ನಡೆಯಲಿದೆ ಎಂದು ಸ್ಪಷ್ಟನೆ ನೀಡಿದ್ದಾರೆ.