ಬೆಳ್ತಂಗಡಿ:(ಆ.28) ಬೆಳ್ತಂಗಡಿಯ ಸರಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಆಗುತ್ತಿರುವ ಕೆಲವು ನ್ಯೂನತೆಗಳ ಬಗ್ಗೆ ಸಾರ್ವಜನಿಕರ ದೂರಿನ ಮೇರೆಗೆ ಜಿಲ್ಲಾ ಆರೋಗ್ಯಾಧಿಕಾರಿಯವರು ಬೆಳ್ತಂಗಡಿ ತಾಲೂಕು ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿ ಮಾರ್ಗದರ್ಶನ ನೀಡಿದರು.


ಇದನ್ನೂ ಓದಿ: 🛑ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಆಡಳಿತ ಹಾಗೂ ಅಬಕಾರಿ ಇಲಾಖೆಯಿಂದ ವ್ಯಾಪಕ ಭ್ರಷ್ಟಾಚಾರ
ತಾಲೂಕು ಆಸ್ಪತ್ರೆಯ ಕೆಲ ಸಿಬ್ಬಂದಿಗಳ ಕರ್ತವ್ಯ ನಿರ್ವಹಣೆ ಬಗ್ಗೆ, ಹಾಗೂ ಆಸ್ಪತ್ರೆಯ ಕುಂದುಕೊರತೆಗಳ ಬಗ್ಗೆ ಬಂದ ದೂರುಗಳನ್ನು ಪರಿಶೀಲಿಸಿದರು. ಹಾಗೂ ತಾಲ್ಲೂಕು ಆರೋಗ್ಯಾಧಿಕಾರಿ ಮತ್ತು ತಾಲೂಕು ಆಸ್ಪತ್ರೆಯ ವೈದ್ಯಾಧಿಕಾರಿಗಳ ಜತೆ ಸಮಾಲೋಚನೆ ನಡೆಸಿದರು.

ಆಸ್ಪತ್ರೆಯ ಸಿಬ್ಬಂದಿಗಳ ಸಭೆ ನಡೆಸಿ ಸೂಕ್ತ ಮಾರ್ಗದರ್ಶನ ನೀಡಿದರು. ಶವಪರೀಕ್ಷಾ ಕೊಠಡಿಗೆ ಮತ್ತು ರೋಗಿಗಳ ವಾರ್ಡ್ ಗೆ ಭೇಟಿ ನೀಡಿ ಪರಿಶೀಲಿಸಿದರು.


ಜಿಲ್ಲಾ ಆರೋಗ್ಯಾಧಿಕಾರಿಗಳ ಜೊತೆ ತಾಲೂಕು ಆರೋಗ್ಯಾಧಿಕಾರಿಗಳು, ವೈದ್ಯಾಧಿಕಾರಿಗಳು, ಜಿಲ್ಲಾ ಆರೋಗ್ಯ ರಕ್ಷಾ ಸಮಿತಿ ಸದಸ್ಯರಾದ ಅಬ್ದುಲ್ ಕರೀಮ್ ಗೇರುಕಟ್ಟೆ ಮತ್ತು ತಾಲೂಕು ಆಸ್ಪತ್ರೆಯ ಸಿಬ್ಬಂದಿಗಳು ಇದ್ದರು.


