ಮಂಗಳೂರು:(ಆ.28) ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ಮನೆ ಗೆ ಕಲ್ಲು ತೂರಾಟ ಪ್ರಕರಣದ ಇಬ್ಬರು ಹಿಂದೂ ಸಂಘಟನೆ ಕಾರ್ಯಕರ್ತರನ್ನು ಬಂಧಿಸಲಾಗಿದೆ.

ಕಲ್ಲಡ್ಕದ ದಿನೇಶ್ (20) ಮತ್ತು ಭರತ್ (24) ಬಂಧಿತ ಆರೋಪಿಗಳು.
ಬಂಧಿತರಿಬ್ಬರೂ ವಿ ಎಚ್ ಪಿ , ಬಜರಂಗದಳದ ಕಾರ್ಯಕರ್ತರು ಎಂದು ತಿಳಿದು ಬಂದಿದೆ.


ಸಿಸಿಟಿವಿ ಕ್ಯಾಮರಾದಲ್ಲಿ ದಾಖಲಾದ ದೃಶ್ಯ ಆಧರಿಸಿ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ರಾಜ್ಯಪಾಲರ ಕುರಿತು ಎಂ ಎಲ್ ಸಿ ಐವನ್ ಡಿಸೋಜಾ ನೀಡಿದ ಹೇಳಿಕೆ ವಿವಾದಕ್ಕೆ ಕಾರಣವಾಗಿತ್ತು.

ಐವನ್ ಡಿಸೋಜಾ ವಿರುದ್ದ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಆಗಸ್ಟ್ 20 ರ ತಡ ರಾತ್ರಿ ಐವನ್ ಡಿಸೋಜಾ ಅವರ ಮನೆಗೆ ಕಲ್ಲು ತೂರಾಟ ನಡೆದಿತ್ತು.

ಬೈಕ್ ನಲ್ಲಿ ಬಂದ ಇಬ್ಬರು ಐವನ್ ಮನೆ ಮೇಲೆ ಕಲ್ಲು ತೂರಿ ಪರಾರಿಯಾಗಿದ್ದರು.


ಪ್ರಕರಣದ ಕುರಿತು ತನಿಖೆ ನಡೆಸಿ ಪಾಂಡೇಶ್ವರ ಠಾಣೆಯ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ.
