ಪುತ್ತೂರು :(ಆ.30) ಅರುಣ್ ಕುಮಾರ್ ಪುತ್ತಿಲ ಅವರ ಜೊತೆ ಸಂಭಾಷಣೆಯ ಆಡಿಯೋ ವೈರಲ್ ಗೆ ಸಂಬಂಧಿಸಿದಂತೆ ಬೆದರಿಕೆ ಕರೆ ಬರುತ್ತಿರುವುದಾಗಿ ಆರೋಪಿಸಿ ಮಹಿಳೆ ಆ.29ರಂದು ರಾತ್ರಿ ಪುತ್ತೂರು ನಗರ ಪೊಲೀಸ್ ಠಾಣೆಗೆ ಬಂದಿದ್ದರು ಎಂದು ತಿಳಿದು ಬಂದಿದೆ.
ಇದನ್ನೂ ಓದಿ: ⚖Aries to Pisces – ಇಂದು ಈ ರಾಶಿಯವರಿಗೆ ವೃತ್ತಿ ಜೀವನವೇ ಕಪ್ಪು ಚುಕ್ಕೆಯಾಗಲಿದೆ!!
ಆಡಿಯೋ ವೈರಲ್ ಬಳಿಕ ಮಹಿಳೆಗೆ ಹಲವಾರು ಬೆದರಿಕೆ ಕರೆ ಬಂದಿದ್ದು, ಈ ನಿಟ್ಟಿನಲ್ಲಿ ಪುತ್ತೂರು ನಗರ ಪೊಲೀಸ್ ಠಾಣೆಗೆ ರಾತ್ರಿ ಬಂದು ಪೊಲೀಸ್ ಇನ್ಸ್ಪೆಕ್ಟರ್ ಜೊತೆ ಮಾತುಕತೆ ನಡೆಸಿದ್ದಾರೆ.
ಬೆದರಿಕೆಗೆ ಸಂಬಂಧಿಸಿ ಆರೋಪ ಮಾಡಿರುವ ಮಹಿಳೆ ನಿನ್ನೆ ರಾತ್ರಿ ಪುತ್ತಿಲ ಪರಿವಾರದ ಮಾಜಿ ಸದಸ್ಯ ರಾಜಾರಾಂ ಭಟ್ ಅವರೊಂದಿಗೆ ಪುತ್ತೂರು ನಗರ ಠಾಣೆಗೆ ಆಗಮಿಸಿದ್ದರು. ಆಡಿಯೋ ಸಂಬಂಧ ಹಲವಾರು ಬೆದರಿಕೆ ಕರೆಗಳು ಬರುತ್ತಿದೆ ಎಂದು ಮಹಿಳೆ ದೂರು ನೀಡಿದ್ದಾರೆ. ಇನ್ನು ಮಹಿಳೆ ಪೊಲೀಸ್ ಠಾಣೆಯಿಂದ ಮನೆಗೆ ಹಿಂತಿರುಗಿದಾಗ ಪೊಲೀಸರು ಭದ್ರತೆ ನೀಡಿದ್ದಾರೆ.
ಸದ್ಯ ಈ ಆಡಿಯೋ ಬೆದರಿಕೆಗೆ ಸಂಬಂಧಿಸಿ ಸಂತ್ರಸ್ತೆ ಮಹಿಳೆಗೆ ಸೂಕ್ತ ಭದ್ರತೆ ಒದಗಿಸುವಂತೆ ಗೃಹ ಇಲಾಖೆ ಪುತ್ತೂರು ಪೊಲೀಸರಿಗೆ ಮಾಹಿತಿ ರವಾನಿಸಿದ್ದಾರೆ ಎಂದು ತಿಳಿದುಬಂದಿದೆ.