Wed. Nov 20th, 2024

Chikkamagaluru Physical Abuse: ಯೋಗ ಕಲಿಯಲು ಬಂದ ವೈದ್ಯೆಯ ಮೇಲೆ ಯೋಗಗುರುವಿನಂದಲೇ ಅತ್ಯಾಚಾರ – ಆ ವೈದ್ಯೆ ಹೇಳಿದ್ದೇನು ಗೊತ್ತಾ?

ಚಿಕ್ಕಮಗಳೂರು:(ಸೆ.2) ಯೋಗ ಕಲಿಯಲು ಬಂದ ವೈದ್ಯೆಯ ಮೇಲೆ ಯೋಗಗುರುವೇ ಅತ್ಯಾಚಾರ ನಡೆಸಿದ್ದಾನೆ ಎಂಬ ಆರೋಪ ಚಿಕ್ಕಮಗಳೂರು ತಾಲೂಕಿನ ಮಲ್ಲೇನಹಳ್ಳಿಯಿಂದ ಕೇಳಿ ಬಂದಿದೆ.

ಇದನ್ನೂ ಓದಿ: 💥ಪುತ್ತೂರು: ಅರುಣ್ ಪುತ್ತಿಲರಿಗೆ ಜಾಮೀನು ಮಂಜೂರು


ಚಿಕ್ಕಮಗಳೂರು ತಾಲೂಕಿನ ಮಲ್ಲೇನಹಳ್ಳಿಯಲ್ಲಿರುವ ಕೇವಲ ಆಶ್ರಮಕ್ಕೆ3 ತಿಂಗಳ ಹಿಂದೆ ಯೋಗ, ಧ್ಯಾನ ಕಲಿಯಲು ಅಮೆರಿಕ ಪೌರತ್ವ ಪಡೆದಿರುವ ಪಂಜಾಬ್ ಮೂಲದ ಮಹಿಳಾ ವೈದ್ಯೆ ಬಂದಿದ್ದರು. ಅವರ ಮೇಲೆ ಯೋಗಗುರು ಪ್ರದೀಪ್‌ನಿಂದ ಅತ್ಯಾಚಾರವೆಸಗಿದ್ದಾನೆ ಎಂದು ಆಕೆ ದೂರು ನೀಡಿದ್ದಾರೆ.

ಎನ್‌ಆರ್‌ಐ ವೈದ್ಯೆ ಯ ದೂರಿನ ಮೇರೆಗೆ ಆರೋಪಿಯನ್ನು ಬಂಧಿಸಲಾಗಿದೆ. ಸದ್ಯ ಆರೋಪಿಯನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ಯೋಗಗುರು ಪ್ರದೀಪ್ ವಿರುದ್ಧ ಎನ್‌ಆರ್‌ಐ ವೈದ್ಯ ಟ್ವಿಟರ್‌ನಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ. ಕೇವಲ ಆಶ್ರಮದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ತಿಳಿದುಕೊಂಡಿದ್ದ ವೈದ್ಯೆ, 3 ತಿಂಗಳ ಹಿಂದೆ ಕೇವಲ ಆಶ್ರಮಕ್ಕೆ ಬಂದು ನೆಲೆಸಿದ್ದರು.

ಪ್ರದೀಪ್ ಮಲ್ಲೇನಹಳ್ಳಿಯಲ್ಲಿ ಕಳೆದ ಕೆಲವು ವರ್ಷಗಳಿಂದ ಕೇವಲ ಫೌಂಡೇಷನ್ ಮೂಲಕ ಯೋಗ ತರಬೇತಿ ನೀಡುತ್ತಿದ್ದ. ಇಲ್ಲಿಗೆ ದೇಶ, ವಿದೇಶದ ಅನೇಕ ಮಂದಿ ಬಂದು ಯೋಗ ಶಿಕ್ಷಣ ಪಡೆಯುತ್ತಿದ್ದರು. ಆನ್ಲೈನ್ ಮೂಲಕವೂ ಯೋಗ ತರಬೇತಿ ನೀಡಲಾಗುತ್ತಿತ್ತು. ಪಂಜಾಬ್ ಮೂಲದ ವೈದ್ಯರೊಬ್ಬರು 2020ರಲ್ಲಿ ಅಮೇರಿಕಾದಲ್ಲಿ ವೃತ್ತಿಯಲ್ಲಿದ್ದ ಸಂದರ್ಭ ಅವರ ಸ್ನೇಹಿತರಿಂದ ಕೇವಲ ಯೋಗ ಕೇಂದ್ರದ ಬಗ್ಗೆ ಮಾಹಿತಿ ಸಿಗುತ್ತದೆ.

ಅದರಂತೆ ಅಲ್ಪ ಹಣ ನೀಡಿ ಆನೈನ್ ತರಗತಿಗೆ ಸೇರಿಕೊಳ್ಳುತ್ತಾರೆ. ನಂತರ ಇಲ್ಲಿಗೆ ಬಂದು ತರಗತಿಯಲ್ಲಿ ಪಾಲ್ಗೊಳ್ಳುವಂತೆ ಪ್ರದೀಪ್ ಹೇಳಿದ್ದಾನೆ. ಆ ಪ್ರಕಾರ ಚಿಕ್ಕಮಗಳೂರಿಗೆ ಬಂದು ಆತನ ಕೇಂದ್ರಕ್ಕೆ ಭೇಟಿ ನೀಡಿ 20 ದಿನ ತರಗತಿಯಲ್ಲಿ ಭಾಗಿಯಾಗಿದ್ದಾರೆ. ಈ ವೇಳೆ ಆ ವೈದ್ಯೆಯ ಜತೆಗೆ ಸಲುಗೆ ಬೆಳೆಸಿಕೊಂಡು ಇಬ್ಬರು ಕೂಡಾ ಆತ್ಮೀಯರಾಗಿದ್ದಾರೆ.

ದೈಹಿಕವಾಗಿಯೂ ಆಕೆಯನ್ನು ಬಳಸಿಕೊಂಡಿದ್ದಾನೆ. ಪುದೀಪ್ ನಂತರ 2020-21ರಲ್ಲೂ ಇಲ್ಲಿಗೆ ಬಂದು ಯೋಗ ತರಗತಿಯಲ್ಲಿ ಆಕೆ ಭಾಗಿಯಾಗಿದ್ದಾಳೆ. ಯೋಗದ ಜತೆಗೆ ದೈಹಿಕ ಸಂಬಂಧವೂ ಮುಂದುವರೆದಿದೆ. ಈ ನಡುವೆ ಆತ ಇತರರ ಜತೆಗೂ ಇದೇ ರೀತಿ ಸಂಬಂಧ ಹೊಂದಿದ್ದಾನೆಂಬುದು ಆಕೆಗೆ ಗೊತ್ತಾಗಿದೆ.

ಏಕಾಏಕಿ ರೊಚ್ಚೆದ್ದ ಆಕೆ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆಗೆ ಭೇಟಿ ನೀಡಿ ದೂರು ನೀಡಿದ್ಧಾಳೆ. ಆತ ನನ್ನ ನಂಬಿಕೆಗೆ ದ್ರೋಹ ಮಾಡಿದ್ದಾನೆ. ಬಲವಂತವಾಗಿ ನನ್ನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾನೆ ಅಂತ ಆರೋಪಿಸಿದ್ದಾಳೆ. ಈ ಆಧಾರದಲ್ಲಿ ಆರೋಪಿಯನ್ನು ಬಂಧಿಸಲಾಗಿದೆ.

Leave a Reply

Your email address will not be published. Required fields are marked *