ಬೆಳ್ತಂಗಡಿ :(ಸೆ.5) ನೆರಿಯ ಗ್ರಾಮದ ದೇವಗಿರಿ ನಿವಾಸಿ ಪನಚ್ಚಿಕಲ್ ಜೋಸೆಫ್ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ.
ಇದನ್ನೂ ಓದಿ: 🟣ಕಳೆಂಜ : ಕಳೆಂಜ ಗ್ರಾಮಸ್ಥರ ಮನವಿಗೆ ತಕ್ಷಣ ಸ್ಪಂದಿಸಿದ ಶಾಸಕ ಹರೀಶ್ ಪೂಂಜ
ಜೋಸೆಫ್ ಆ.31ರಂದು ಮನೆಯಲ್ಲಿ ವಿಷ ಸೇವಿಸಿದ್ದು, ಕೂಡಲೇ ಮನೆಯವರು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಕೊಂಡೊಯ್ದು ಪ್ರಾಥಮಿಕ ಚಿಕಿತ್ಸೆ ನೀಡಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಸೆ.4 ರಂದು ಮೃತಪಟ್ಟಿದ್ದಾರೆ.
ಜೋಸೆಫ್ ಪತ್ನಿಯೊಂದಿಗೆ ಸದಾ ಜಗಳವಾಡುತ್ತಿದ್ದರು ಎನ್ನಲಾಗಿದ್ದು, ಇದೇ ಕಾರಣಕ್ಕೆ ಅವರ ಪತ್ನಿ ಮಕ್ಕಳೊಂದಿಗೆ ಮನೆಯಿಂದ ತಾಯಿ ಮನೆಗೆ ಹೋಗಿದ್ದರು ಎನ್ನಲಾಗಿದೆ.
ಈ ಹಿನ್ನಲೆ ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಅಂದಾಜಿಸಲಾಗಿದ್ದು, ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.