ಬೆಳ್ತಂಗಡಿ:(ಸೆ.6) ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಪರಿಶಿಷ್ಟ ಜಾತಿ ನಗರ ಮತ್ತು ಗ್ರಾಮೀಣ ಘಟಕದ ಪದಾಧಿಕಾರಿಗಳ ಸಭೆಯು ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಸಭಾಂಗಣದಲ್ಲಿ ನಡೆಯಿತು.
ಇದನ್ನೂ ಓದಿ: ⛔ಕಡಬ : ತೋಡಿಗೆ ಬಿದ್ದು ಯುವಕ ಸಾವು!
ಸಭೆಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭಾಗವಹಿಸಿ ಸರ್ಕಾರವು ಜಾರಿ ಮಾಡಿರುವ ಯೋಜನೆಯನ್ನು ಜನಸಾಮಾನ್ಯರಿಗೆ ತಲುಪಿಸಲು ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದರು.
ಈ ಸಂದರ್ಭದಲ್ಲಿ ಉಭಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸತೀಶ್ ಕೆ ಬಂಗೇರ , ನಾಗೇಶ್ ಕುಮಾರ್ ಗೌಡ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಶೇಖರ್ ಕುಕ್ಕೆಡಿ,
ಉಭಯ ಬ್ಲಾಕ್ ಎಸ್.ಸಿ ಘಟಕ ಅಧ್ಯಕ್ಷರಾದ ವಿಜಯ ಕುಮಾರ್ ಬಜಿರೆ, ನೇಮಿರಾಜ್ ಕಿಲ್ಲೂರು, ಜಿಲ್ಲಾ ಎಸ್.ಸಿ ಘಟಕದ ಉಪಾಧ್ಯಕ್ಷರಾದ ಓಬಯ್ಯ ಆರಂಬೋಡಿ ತಾಲೂಕು ,
ಅಕ್ರಮ-ಸಕ್ರಮ ಸಮಿತಿಯ ಸದಸ್ಯರಾದ ಶ್ರೀಧರ ಕಳೆಂಜ , ತಾಲೂಕು ಆರೋಗ್ಯ ರಕ್ಷಾ ಸಮಿತಿಯ ಸದಸ್ಯರಾದ ವೆಂಕಣ್ಣ ಕೊಯ್ಯುರು, ಶ್ರೀಮತಿ ಸವಿತ ಅಟ್ರಿಂಜ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.