Wed. Nov 20th, 2024

Mumbai: ಮುಂಬೈನಲ್ಲಿ ಪ್ರತಿಷ್ಠಾಪನೆಯಾಗಲಿದೆ ವಿಶ್ವದ ಶ್ರೀಮಂತ ಗಣೇಶ – ಈ ಗಣಪತಿಯ ವಿಮೆ ಎಷ್ಟು ಕೋಟಿ ಗೊತ್ತಾ?

Mumbai:(ಸೆ.6) ಹಿಂದೂಗಳ ವೈಭವದ, ಸಂಭ್ರಮದ ಹಬ್ಬ ಗಣೇಶ ಚತುರ್ಥಿ ಆಚರಣೆಗೆ ಭರ್ಜರಿ ತಯಾರಿ ನಡೆಯುತ್ತಿದೆ. ಎಲ್ಲೆಡೆ ಗಣೇಶನ ಮೂರ್ತಿಗಳ ಮಾರಾಟ ಭರ್ಜರಿಯಾಗಿ ನಡೆಯುತ್ತಿದೆ. ಹಬ್ಬದಂದು ದೇಶಾದ್ಯಂತ ಗಲ್ಲಿ ಗಲ್ಲಿಯಲ್ಲಿ ಗಣೇಶನ ಮೂರ್ತಿ ಕೂರಿಸಿ ಪೂಜೆ ನಡೆಯುತ್ತದೆ. ಬಳಿಕ ವಿಸರ್ಜನೆಯೂ ಅಷ್ಟೇ ವಿಜೃಂಭಣೆಯಿಂದ ನಡೆಯಲಿದೆ. ಆದರೆ ಗಣೇಶ ಚತುರ್ಥಿ ಆಚರಣೆ ಮುಂಬೈನಲ್ಲಿ ಭಾರಿ ವಿಶೇಷ. ಅಲ್ಲಿ ಪ್ರತಿಷ್ಠಾಪನೆಯಾಗೋ ಗಣಪತಿಯೂ ಕೂಡ.

ಇದನ್ನೂ ಓದಿ: ⛔ಬೆಂಗಳೂರು : ಬುಕ್ಕಿಂಗ್ ಕ್ಯಾನ್ಸಲ್ ಮಾಡಿದ್ದಕ್ಕೆ ಯುವತಿ ಮೇಲೆ ರೇಗಾಡಿದ ಆಟೋ ಚಾಲಕ – ಅಶ್ಲೀಲ ಪದಗಳಿಂದ ನಿಂದನೆ!

ಮುಂಬೈನಲ್ಲಿ ಹಲವು ದಶಕಗಳಿಂದ ಕೆಲ ಸಂಘಟನೆಗಳು ಗಣೇಶ ಹಬ್ಬ ಆಚರಿಸುತ್ತಾ ಬರುತ್ತಿದೆ. ಈ ಪೈಕಿ ಜಿಎಸ್‌ಬಿ ಸೇವಾ ಮಂಡಲ್ ಕೂಡ ಒಂದು. ಈ ಬಾರಿಯೂ ಜಿಎಸ್‌ಬಿ ಸೇವಾ ಮಂಡಲದ ಗಣೇಶ ವಿಶ್ವದ ಶ್ರೀಮಂತ ಗಣಪ ಅನ್ನೋ ಹೆಗ್ಗಳಿಕೆಗೆ ಪಾತ್ರವಾಗಿದೆ. ಜಿಎಸ್‌ಬಿ ಗಣಪನಿಗೆ ಈ ಬಾರಿ ಬರೋಬ್ಬರಿ 400.58 ಕೋಟಿ ರೂಪಾಯಿ ವಿಮೆ ಮಾಡಲಾಗಿದೆ. ಈ ಮೂಲಕ ಅದು ದೇಶದಲ್ಲಿಯೇ ಅತೀ ಶ್ರೀಮಂತ ಗಣಪತಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಆದ್ರೆ ಈ ಗಣೇಶ ಮೂರ್ತಿಯ ಅಧಿಕೃತ ಬೆಲೆ ಎಷ್ಟು ಎಂದು ಮಂಡಲ್‌ ಸುಳಿವು ಬಿಟ್ಟುಕೊಟ್ಟಿಲ್ಲ.

ಮುಂಬೈನ ಜಿಎಸ್‌ಬಿ ಸೇವಾ ಮಂಡಲ ಈ ಬಾರಿ 5 ದಿನಗಳ ಗಣೇಶೋತ್ಸವ ಆಚರಿಸಲಿದೆ. ಸೆಪ್ಟೆಂಬರ್ 7 ರಿಂದ 11ರ ವರೆಗೆ ಅದ್ಧೂರಿಯಾಗಿ ಗಣೇಶೋತ್ಸವ ನಡೆಯಲಿದೆ. ಜಿಎಸ್‌ಬಿ ಗಣೇಶನ ದರ್ಶನ ಪಡೆಯಲು ಈಗಾಗಲೇ ಭಕ್ತರು ಸಜ್ಜಾಗಿದ್ದಾರೆ. ಆದರೆ ಗಣೇಶನ ಅನಾವರಣ ಸೆಪ್ಟೆಂಬರ್ 5 ರಂದು ಜಿಎಸ್‌ಬಿ ಸೇವಾ ಮಂಡಲ ಮಾಡಲಿದೆ. ಜಿಎಸ್‌ಬಿ ಸೇವಾ ಮಂಡಲ್‌ ಪ್ರತಿ ವರ್ಷ ಗಣೇಶೋತ್ಸವಕ್ಕೆ ಕೋಟಿ ಕೋಟಿ ರೂಪಾಯಿ ಖರ್ಚು ಮಾಡುತ್ತದೆ. ಈ ಬಾರಿ 70ನೇ ವರ್ಷದ ಗಣೇಶೋತ್ಸವದ ಕಾರಣ ವಿಮೆ ಮೊತ್ತವನ್ನು ಏರಿಸಲಾಗಿದೆ.

ಇನ್ನು ಜಿಎಸ್‌ಬಿ ಗಣಪನಿಗೆ ಬರೋಬ್ಬರಿ 66 ಕೆಜಿ ಚಿನ್ನ, 25 ಕೆಜಿ ಬೆಳ್ಳಿ ಹಾಗೂ ಇತರ ಅತ್ಯಮೂಲ್ಯ ಚಿನ್ನಾಭರಣಗಳನ್ನು ತೊಡಿಸಲಾಗುತ್ತದೆ. ಕೋಟಿ ಕೋಟಿ ಮೌಲ್ಯದ ಚಿನ್ನಾಭರಣಗಳನ್ನು ಜಿಎಸ್‌ಬಿ ಗಣಪನಿಗೆ ತೊಡಿಸಲಾಗುತ್ತದೆ. ಪ್ರತೀ ವರ್ಷದಂತೆ ಈ ವರ್ಷವೂ 5 ದಿನಗಳ ಗಣೇಶೋತ್ಸವ ಆಚರಿಸಲಾಗುತ್ತಿದೆ. ಎಂದಿನಂತೆ ಪರಿಸರಕ್ಕೆ ಪೂರಕವಾದ ಗಣೇಶ ಮೂರ್ತಿಯನ್ನು ತಯಾರಿಸಲಾಗಿದೆ. ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿಒಪಿ) ಸೇರಿದಂತೆ ಯಾವುದೇ ಹಾನಿಕಾರ ವಸ್ತುಗಳ ಬಳಕೆ ಮಾಡಿಲ್ಲ. ಪೂರ್ತಿಯಾಗಿ ಮಣ್ಣಿನ ಗಣಪನನ್ನ ಕೂರಿಸಿ ಪೂಜೆ ಮಾಡಲಾಗುತ್ತದೆ.

ಕಳೆದ ವರ್ಷ ಇದೇ ರೀ ವೈಭವೋಪೇತ ಗಣೇಶಮೂರ್ತಿಯೊಂದನ್ನ ಸೇವಾ ಮಂಡಲ ಪ್ರತಿಷ್ಠಾಪಿಸಿತ್ತು. ಈ ಗಣೇಶನ ಮೂರ್ತಿಯ ಅಲಂಕಾರಕ್ಕೆ 69 ಕೆಜಿ ಚಿನ್ನ ಹಾಗೂ 336 ಕೆಜಿ ಬೆಳ್ಳಿ ಬಳಕೆ ಮಾಡಲಾಗಿತ್ತು. ಕಳೆದ ವರ್ಷ 360.40 ಕೋಟಿ ರೂ. ವಿಮೆ ಮಾಡಲಾಗಿತ್ತು. ಈ ಬಾರಿ ಈ ಮೊತ್ತವನ್ನು ಏರಿಕೆ ಮಾಡಲಾಗಿದೆ.

Leave a Reply

Your email address will not be published. Required fields are marked *