ಚಿಕ್ಕಮಗಳೂರು:(ಸೆ.10) ಚಿಕ್ಕಮಗಳೂರಿನಲ್ಲಿ ವೈದ್ಯರ ಮೇಲೆ ಮಹಿಳೆ ಹಲ್ಲೆ ನಡೆಸಿದ ಘಟನೆ ನಡೆದಿದ್ದು, ಆಕ್ರೋಶಗೊಂಡಿರುವ ಆರೋಗ್ಯ ಸಿಬ್ಬಂದಿಗಳು ಓಪಿಡಿ ಬಂದ್ ಮಾಡಿ ಪ್ರತಿಭಟನೆ ನಡೆಸಿದ್ದಾರೆ.
ಇದನ್ನೂ ಓದಿ: ⛔ಬೆಳ್ತಂಗಡಿ: ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ
ನಗರದ ಮಲ್ಲೇಗೌಡ ಜಿಲ್ಲಾಸ್ಪತ್ರೆಯಲ್ಲಿ ಈ ಘಟನೆ ನಡೆದಿದ್ದು, ಮೂಳೆ ತಜ್ಞ ಡಾ. ವೆಂಕಟೇಶ್ ಎಂಬವರ ಮೇಲೆ ಮಹಿಳೆ ಏಕಾಏಕಿ ಹಲ್ಲೆ ನಡೆಸಿದ್ದಾರೆ.
ಶರ್ಟ್, ಕುತ್ತಿಗೆ ಪಟ್ಟಿ ಹಿಡಿದು ಎಳೆದಾಡಿದ ಹಲ್ಲೆ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ರಕ್ಷಣೆ ನೀಡುವಂತೆ ಆಗ್ರಹಿಸಿ ಆಸ್ಪತ್ರೆ ಸಿಬ್ಬಂದಿಗಳು ಪ್ರತಿಭಟನೆ ನಡೆಸಿದ್ದಾರೆ.
ಎರಡು ಗುಂಪುಗಳ ನಡುವೆ ಗಲಾಟೆ ನಡೆದಿದ್ದು, ಚಿಕಿತ್ಸೆ ನೀಡುವ ಸಮಯದಲ್ಲಿ ವೈದ್ಯರ ಮೇಲೆ ಹಲ್ಲೆ ನಡೆದಿದೆ.
ರೋಗಿ ಅಕ್ಕನಿಗೆ ವೈದ್ಯರು ಅವಾಚ್ಯ ಶಬ್ಧಗಳಿಂದ ನಿಂದಿಸಿದ ಆರೋಪ ಕೇಳಿ ಬಂದಿದೆ. ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಕ್ಕೆ ರೋಗಿ ಅಕ್ಕನಿಂದ ಹಲ್ಲೆ ನಡೆದಿದೆ ಎಂಬ ಆರೋಪ ಕೇಳಿ ಬಂದಿದೆ.