Wed. Nov 20th, 2024

Ujire: ಅನುಗ್ರಹ ಆಂಗ್ಲ ಮಾಧ್ಯಮ ಶಾಲೆ ಉಜಿರೆಯಲ್ಲಿ ಕೊಕ್ಕಡ ವಲಯ ಮಟ್ಟದ ಪ್ರತಿಭಾ ಕಾರಂಜಿ

ಉಜಿರೆ:(ಸೆ.12) ಶಾಲಾ ಸಾಕ್ಷರತಾ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬೆಳ್ತಂಗಡಿ ಮತ್ತು ಅನುಗ್ರಹ ಆಂಗ್ಲ ಮಾಧ್ಯಮ ಶಾಲೆ,

ಇದನ್ನೂ ಓದಿ: 🟣ಉಜಿರೆ: ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ – ಎಂಡೋವೆನಸ್ ಲೇಸರ್ ಯಶಸ್ವಿ ಶಸ್ತ್ರಚಿಕಿತ್ಸೆ

ಉಜಿರೆ ಇದರ ಸಹಭಾಗಿತ್ವದಲ್ಲಿ ಕೊಕ್ಕಡ ವಲಯ ಮಟ್ಟದ ಪ್ರೌಢಶಾಲಾ ವಿಭಾಗದ ಪ್ರತಿಭಾ ಕಾರಂಜಿ ಸ್ಪರ್ಧೆಯು ದಿನಾಂಕ 11/9/2024 ರಂದು ಅನುಗ್ರಹ ಆಂಗ್ಲ ಮಾಧ್ಯಮ ಶಾಲೆ ಉಜಿರೆಯಲ್ಲಿ ವಿಜೃಂಭಣೆಯಿಂದ ಜರುಗಿತು.

ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಉಜಿರೆ ಗ್ರಾಮ ಪಂಚಾಯತ್‌ನ ಅಧ್ಯಕ್ಷರಾದ ಶ್ರೀಮತಿ ಉಷಾ ಕಿರಣ್ ಕಾರಂತ್ ಇವರು ವಹಿಸಿದ್ದರು.

ತಾಲೂಕಿನ ಶಿಕ್ಷಣಾಧಿಕಾರಿಗಳಾದ ಶ್ರೀಮತಿ ತಾರಾ ಕೇಸರಿ ಅವರ ದೀಪ ಪ್ರಜ್ವಲನೆ ಮಾಡುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಇದೇ ವೇಳೆ ಮಾತನಾಡಿದ ಶಿಕ್ಷಣಾಧಿಕಾರಿಯವರು, ಪ್ರತಿಭಾ ಕಾರಂಜಿಯು ಮಕ್ಕಳ ಪ್ರತಿಭೆಯ ಪ್ರದರ್ಶನಕ್ಕೊಂದು ಉತ್ತಮ ವೇದಿಕೆ, ವಿದ್ಯಾರ್ಥಿಗಳಿಗೆ ಗೆಲುವು ಮಾತ್ರ ಮುಖ್ಯವಲ್ಲ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಲು ಉತ್ತಮ ಅವಕಾಶ ಇದು ಎಂಬ ಮಾತುಗಳನ್ನಾಡಿದರು.

ಸಂಚಾಲಕರಾದ ಫಾ! ಅಬೆಲ್ ಲೋಬೊ ಅವರು ಪ್ರತಿಭೆ ಎಂಬುದು ದೇವರ ಕರುಣೆ ಅದನ್ನು ಪೋಷಣೆ ನೀಡುವ ಕಾರ್ಯ ಶಿಕ್ಷಣ ಇಲಾಖೆಯಿಂದ ಆಗುತ್ತಿದೆ . ಇದರಿಂದ ವಿದ್ಯಾರ್ಥಿಯ ವ್ಯಕ್ತಿತ್ವ ಅರಳುತ್ತದೆ ಎಂಬ ಮಾತನ್ನು ಹೇಳಿದರು.


ಶಿಕ್ಷಣ ಸಂಯೋಜಕರಾದ ಶ್ರೀಮತಿ ಚೇತನಾಕ್ಷೀ, ಕ್ಷೇತ್ರ ಸಮೂಹ ವ್ಯಕ್ತಿಯಾದ ಶ್ರೀಮತಿ ಪ್ರತಿಮಾ ಕೆಎಂ ಪ್ರಾಂಶುಪಾಲರಾದ ಫಾ! ವಿಜಯ್ ಲೋಬೊ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಉಜಿರೆ ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀ ಅನಿಲ್ ಡಿಸೋಜ, ಚರ್ಚ್ ಪಾಲನಾಮಂಡಳಿ ಉಪಾಧ್ಯಕ್ಷರಾದ ಶ್ರೀ ಅ್ಯಂಟನಿ ಫೆರ್ನಾಂಡೀಸ್ ಮತ್ತು ಶಾಲಾ ಆಡಳಿತ ಮಂಡಳಿಯ ಸದಸ್ಯರು ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ಬೆಳಗ್ಗಿನ ಉಪಹಾರದ ಪ್ರಾಯೋಜಕತ್ವವನ್ನು ಶ್ರೀ ಹರೀಶ್ ಪೈ, ಮಾಲಕರು ಸಂಧ್ಯಾ ಟ್ರೇಡರ್ಸ್ ಉಜಿರೆ ಹಾಗೂ ಮಧ್ಯಾಹ್ನದ ಭೋಜನದ ಪ್ರಾಯೋಜಕತ್ವವನ್ನು ವಹಿಸಿದ ಶ್ರೀ ಉಮೇಶ್ ಶೆಟ್ಟಿ ಮಾಲಕರು ದುರ್ಗಾ ಫರ್ನಿಚರ್ಸ್ ಮಡಂತ್ಯಾರು ಇವರನ್ನು ನಮ್ಮ ಸಂಸ್ಥೆಯ ಪರವಾಗಿ ಅತ್ಮೀಯವಾದ ಕೃತಜ್ಞತೆಯನ್ನು ಸಲ್ಲಿಸಲಾಯಿತು.

ಈ ವೇಳೆ 27 ಶಾಲೆಯ ವಿದ್ಯಾರ್ಥಿಗಳು ಧಾರ್ಮಿಕ ಪಠಣ, ಕನ್ನಡ ಭಾಷಣ, ಆಶುಭಾಷಣ, ಚಿತ್ರಕಲೆ, ರಂಗೋಲಿ, ಭಾವಗೀತೆ, ಜನಪದ ಗೀತೆ, ಕವ್ವಾಲಿ, ಭರತನಾಟ್ಯ, ಜಾನಪದ ನೃತ್ಯ ಮುಂತಾದ ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿದ್ದರು. ಕಾರ್ಯಕ್ರಮದ ಕೊನೆಯಲ್ಲಿ ವಿಜೇತರಾದ ಎಲ್ಲಾ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆಯನ್ನು ಮಾಡಲಾಯಿತು. ಪ್ರಾಂಶುಪಾಲರಾದ ಫಾ! ವಿಜಯ್ ಲೋಬೊ, ಸ್ವಾಗತಿಸಿ ಸಹ ಶಿಕ್ಷಕಿಯಾದ ಶ್ರೀಮತಿ ಅರ್ಪಿತ ಇವರು ವಂದಿಸಿ, ಸಹ ಶಿಕ್ಷಕರಾದ ಗಣೇಶ್ ಇವರು ಕಾರ್ಯಕ್ರಮವನ್ನು ನಿರೂಪಿಸಿದರು.

Leave a Reply

Your email address will not be published. Required fields are marked *