Wed. Nov 20th, 2024

Belthangadi: ಕಂಪ್ಯೂಟರ್ ತರಬೇತಿಯ ಪ್ರಮಾಣ ಪತ್ರ ವಿತರಣೆ

ಬೆಳ್ತಂಗಡಿ:(ಸೆ.13) ತಂತ್ರಜ್ಞಾನದ ವಿದ್ಯೆ ಎನ್ನುವಂತದ್ದು ಇಂದಿನ ಪ್ರಾಪಂಚಿಕ ವ್ಯವಹಾರಕ್ಕೆ ಅತ್ಯವಶ್ಯವಾಗಿದೆ. ಜೀವನದಲ್ಲಿ ಕಲಿಕೆ ನಿರಂತರವಾಗಿರಬೇಕು. ಜ್ಞಾನವು ಎಂದೂ ಕರಗದ ಸಂಪತ್ತು.

ಇದನ್ನೂ ಓದಿ: ⛔ಬೆಂಗಳೂರು : online game addiction – ಅಣ್ಣನ ಮದುವೆಗೆ ಇಟ್ಟಿದ್ದ ಚಿನ್ನಾಭರಣ ಕದ್ದು ತಮ್ಮ ಪರಾರಿ

ತಾವುಗಳು ಮುಂದಿನ ಜೀವನದಲ್ಲಿ ಉನ್ನತ ಸ್ಥಾನಕ್ಕೆ ಏರಬೇಕು. ಇಷ್ಟು ದೊಡ್ಡ ಸಂಖ್ಯೆಯಲ್ಲಿ ಬಂದು ತಾವು ಕಂಪ್ಯೂಟರ್ ತರಬೇತಿ ಪಡೆದುಕೊಂಡಿದ್ದು ತಮಗೆ ಹೆಮ್ಮೆಯ ವಿಷಯವಾಗಿದೆ ಎಂದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ. ಟ್ರಸ್ಟ್ -ಲಾಯಿಲ ಗ್ರಾಮೀಣ ಶ್ರೇಷ್ಠತಾ ತರಬೇತಿ ಕೇಂದ್ರದಲ್ಲಿ ಸಿಬ್ಬಂದಿ-ಮಾನವ ಸಂಪನ್ಮೂಲ ವಿಭಾಗದ ಯೋಜನಾಧಿಕಾರಿಯಾದ ಶ್ರೀನಿವಾಸ್ ಇವರು ಕಂಪ್ಯೂಟರ್ ತರಬೇತಿ ಪೂರ್ಣಗೊಳಿಸಿದ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಿ ಶುಭ ಹಾರೈಸಿದರು.


ಕಂಪ್ಯೂಟರ್ ತರಬೇತಿಯು ರಾಷ್ಟ್ರೀಯ ಕಂಪ್ಯೂಟರ್ ಸಾಕ್ಷರತಾ ಸಮಿತಿ ಯೋಜನೆಯಡಿ ನೋಂದಾಯಿತವಾಗಿದ್ದು, ಕೌಶಲ್ಯ ಯೋಜನೆಯಡಿ ಪ್ರಮಾಣೀಕೃತ ಪ್ರಮಾಣ ಪತ್ರ ಮತ್ತು ಅಂಕಪಟ್ಟಿ ವಿತರಿಸಲಾಯಿತು.

ಒಟ್ಟು 22 ವಿದ್ಯಾರ್ಥಿಗಳು ಪ್ರಮಾಣ ಪತ್ರ ಪಡೆದುಕೊಂಡಿದ್ದಾರೆ. ಈ ಸಂದರ್ಭದಲ್ಲಿ ತರಬೇತಿ ಸಂಸ್ಥೆಯ ಪ್ರಾಂಶುಪಾಲರಾದ ಸೋಮನಾಥ್ ಕೆ. ಕಛೇರಿ ಪ್ರಬಂಧಕ ಅಣ್ಣು ಗೌಡ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಕಂಪ್ಯೂಟರ್ ತರಬೇತುದಾರರಾದ ಜಯಶ್ರೀ ಇವರು ನಿರ್ವಹಣೆ ಮಾಡಿ, ವಿದ್ಯಾರ್ಥಿಗಳಿಗೆ ಶುಭಕೋರಿದರು.

Leave a Reply

Your email address will not be published. Required fields are marked *