Tue. Jul 22nd, 2025

Ramnagar: ಗ್ರಾಹಕರಿಗೆ ಶಾಕ್ – ಹಾಲಿನ ದರ ಹೆಚ್ಚಳ ಮಾಡುತ್ತೇವೆಂದು ಸಿಎಂ ಸಿದ್ದರಾಮಯ್ಯ ಘೋಷಣೆ

ರಾಮನಗರ : ರಾಜ್ಯದಲ್ಲಿ ನಂದಿನ ಹಾಲಿನ ದರ ಹೆಚ್ಚಳ ಮಾಡುತ್ತೇವೆ. ಹೆಚ್ಚಳ ಮಾಡಿದ ಹಾಲಿನ ದರ ರೈತರಿಗೆ ಹೋಗಬೇಕು ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.

ರಾಮನಗರ ಜಿಲ್ಲೆಯ ಮಾಗಡಿ ಪಟ್ಟಣದಲ್ಲಿ ಅನೇಕ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಉದ್ಘಾಟನೆ ಶಂಕು ಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ನಂದಿನ ಹಾಲಿನ ದರ ಹೆಚ್ಚಳ ಸಂಬಂಧ ಸಭೆ ಕರೆದು ಮಾತುಕತೆ ನಡೆಸಿ ಹಾಲಿನ ದರ ಹೆಚ್ಚಳ ಮಾಡೋಣ ಎಂದು ಹೇಳಿದ್ದಾರೆ.

ಹಾಲಿನ ದರ ಏರಿಕೆ ಮಾಡುತ್ತೇವೆ. ಏರಿಕೆ ಮಾಡಿದ ಹಣ ಸಂಪೂರ್ಣ ರೈತರಿಗೆ ಹೋಗಬೇಕು. ನಮ್ಮ ಸರ್ಕಾರ ಯಾವಾಗಲೂ ರೈತರ ಪರ, ಹಾಲು ಉತ್ಪಾದಕರ ಪರ, ದಲಿತರು, ಬಡವರ ಪರ ಇರುತ್ತದೆ ಎಂದು ಸಿದ್ದರಾಮಯ್ಯ ತಿಳಿಸಿದರು.

Leave a Reply

Your email address will not be published. Required fields are marked *