ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಸಿಂಹ ಮಾಸ, ಮಹಾನಕ್ಷತ್ರ: ಪೂರ್ವಾಫಲ್ಗುಣೀ, ಮಾಸ: ಭಾದ್ರಪದ, ಪಕ್ಷ: ಶುಕ್ಲ, ವಾರ: ಶನಿ, ತಿಥಿ: ಏಕಾದಶೀ, ನಿತ್ಯನಕ್ಷತ್ರ: ಉತ್ತರಾಷಾಢ, ಯೋಗ: ಶೋಭನ, ಕರಣ: ವಣಿಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 22 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06:33 ಗಂಟೆ, ರಾಹು ಕಾಲ ಬೆಳಿಗ್ಗೆ 09:25 ರಿಂದ 10:56, ಯಮಘಂಡ ಕಾಲ ಮಧ್ಯಾಹ್ನ 01:59 ರಿಂದ 03:30ರ ವರೆಗೆ, ಗುಳಿಕ ಕಾಲ ಬೆಳಿಗ್ಗೆ 06:22 ರಿಂದ 07:53ರ ವರೆಗೆ.
ಮೇಷ ರಾಶಿ: ಪ್ರೇಮ ಜೀವನ ನಡೆಸುವ ಜನರು ಇಂದು ಸ್ವಲ್ಪ ಒತ್ತಡವನ್ನು ಎದುರಿಸಬಹುದು. ಅರ್ಹರ ಮೇಲೆ ಇಟ್ಟ ನಂಬಿಕೆ ಹುಸಿಯಾಗದು. ನೀವು ಕುಟುಂಬದ ಸದಸ್ಯರ ಬಗ್ಗೆ ಸ್ವಲ್ಪ ಚಿಂತಿತರಾಗಬಹುದು.
ವೃಷಭ ರಾಶಿ: ಇಂದು ನೀವು ಕಳೆದುಕೊಂಡ ವಸ್ತುವಿನಿಂದ ಚಿಂತೆಗೀಡಾಗಿ, ಪುನಃ ಪಡೆದು ಸಂತೋಷಗೊಳ್ಳುವಿರಿ. ನಿಮಗೆ ಕೆಲವು ಹೊಸ ಅವಕಾಶಗಳು ದೊರೆಯುವುದು. ಈ ದಿನ ನೀವು ಹೆಚ್ಚಿನ ಪ್ರೀತಿಯನ್ನು ಅನುಭವಿಸುವಿರಿ.
ಮಿಥುನ ರಾಶಿ: ಇಂದು ನಿಮ್ಮ ಕಾರ್ಯಕ್ಷೇತ್ರದಲ್ಲಿ ಕೆಲವು ಹೊಸ ವ್ಯವಹಾರಗಳಿಗೆ ಅವಕಾಶಗಳು ಸಿಗಲಿದ್ದು, ಇದರಿಂದ ನಿಮ್ಮ ಮನಸ್ಸಿಗೆ ಸಂತೋಷವಾಗುತ್ತದೆ. ಉತ್ತಮ ಬೆಳವಣಿಗೆಗಳ ಮೂಲಕ ಮನಸಿಗೆ ನೆಮ್ಮದಿ ದೊರೆಯುತ್ತದೆ.
ಕರ್ಕಾಟಕ ರಾಶಿ: ಇಂದು ನೀವು ಯಾವುದೇ ಕೆಲಸವನ್ನು ಮಾಡಿದರೂ ಅದನ್ನು ಪೂರ್ಣ ಉತ್ಸಾಹದಿಂದ ಮಾಡುವಿರಿ. ನೀವು ಖಂಡಿತವಾಗಿಯೂ ಯಶಸ್ಸನ್ನು ಪಡೆಯುತ್ತೀರಿ. ನೀವು ಧನಾತ್ಮಕ ಹಾದಿಯಲ್ಲಿ ಸಾಗುತ್ತಿರುವಂತೆ ತೋರಿಸುತ್ತದೆ. ನೀವು ಅನುಭವಿಸುತ್ತಿರುವ ಧನಾತ್ಮಕ ಶಕ್ತಿಯನ್ನು ಆನಂದಿಸಿ.
ಸಿಂಹ ರಾಶಿ: ವಿದೇಶದಲ್ಲಿರುವ ಸಂಬಂಧಿಕರಿಂದ ಶುಭ ಸುದ್ದಿಯು ಬರುವುದು. ಮಕ್ಕಳು ವಿದ್ಯಾಭ್ಯಾಸದಲ್ಲಿ ಅನಿರೀಕ್ಷಿತ ಬೆಳವಣಿಯಾಗುವುದು ಖುಷಿ ಕೊಡುವುದು. ನೀವು ಸ್ವಲ್ಪ ಸಮಯದಲ್ಲಿ ಭೂ ವ್ಯವಹಾರವನ್ನು ಮಾಡಲು ಉತ್ತಮ ಗ್ರಾಹಕರು ಸಿಗಲಿದ್ದಾರೆ.
ಕನ್ಯಾ ರಾಶಿ: ಇಂದು ಕೆಲಸದ ಸ್ಥಳದಲ್ಲಿ ನಿಮ್ಮ ಜೀವನ ಸಂಗಾತಿಯ ಸಲಹೆ ನಿಮಗೆ ಬೇಕಾಗುತ್ತದೆ. ನಿಮ್ಮ ಮಕ್ಕಳ ವಿದ್ಯಾಭ್ಯಾಸಕ್ಕೆ ಸೇರಿಸಲು ಕಷ್ಟವಾದೀತು. ಆರ್ಥಿಕ ವ್ಯವಹಾರವನ್ನು ಮತ್ತೊಬ್ಬರ ಸಹಾಯದಿಂದ ಸರಿ ಮಾಡಿಕೊಳ್ಳುವಿರಿ.
ತುಲಾ ರಾಶಿ: ಇಂದು ವಿದ್ಯಾರ್ಥಿಗಳು ಸ್ಪರ್ಧಾ ಪರೀಕ್ಷೆಯ ತಯಾರಿಯ ಕಡೆ ಗಮನ ಕೊಡಬೇಕು. ಆರ್ಥಿಕ ಕ್ಷೇತ್ರದಲ್ಲಿ ಕೆಲಸ ಮಾಡುವವರಿಗೆ ಹೆಚ್ಚು ಕಾರ್ಯದ ಒತ್ತಡವಿರಲಿದೆ. ಇಂದು ನಿಮ್ಮ ಕಾರ್ಯವು ನಿಮಗೆ ಸಂತೋಷವನ್ನು ತರಬಹುದು. ನಿಮ್ಮ ಕೆಲಸವು ಮೇಲಧಿಕಾರಿಗಳ ಬೆಂಬಲಕ್ಕೆ ಪೂರಕವಾಗುವುದು.
ವೃಶ್ಚಿಕ ರಾಶಿ: ನಿಮ್ಮ ಕೆಲಸದಲ್ಲಿ ಆಗುತ್ತಿದ್ದ ಸಮಸ್ಯೆಗಳು ಇಂದು ಕೊನೆಗೊಳ್ಳಲಿವೆ. ನಿಮ್ಮ ಆದಾಯದ ಹೆಚ್ಚಳದ ಹೊಸ ಮೂಲಗಳು ಸೃಷ್ಟಿಯಾಗುತ್ತವೆ. ನಿಮ್ಮ ಕೋಪವನ್ನು ಸಾಧ್ಯವಾದಷ್ಟು ನಿಯಂತ್ರಿಸುವುದು ಮುಖ್ಯ. ಅಪಾಯದ ಮುನ್ಸೂಚನೆಯನ್ನು ಅರ್ಥಮಾಡಿಕೊಂಡು ಮುನ್ನಡೆಯಿರಿ. ನಿಮ್ಮ ಪ್ರೇಮ ವ್ಯವಹಾರಗಳು ಕುಟುಂಬ ಜೀವನಕ್ಕೆ ಬಿಸಿ ತುಪ್ಪದಂತೆ ಆಗಬಹುದು.
ಧನು ರಾಶಿ: ನೀವು ಕೌಟುಂಬಿಕ ಆಸ್ತಿಗೆ ಸಂಬಂಧಿಸಿದ ಕಾನೂನು ವಿವಾದವನ್ನು ಹೊಂದಿದ್ದರೆ. ಇಂದು ಪರಿಸ್ಥಿತಿಯು ನಿಮ್ಮ ಪರವಾಗಿ ತಿರುಗಬಹುದು. ಸಂಗಾತಿಯ ಬಗ್ಗೆ ಸಂದೇಹವು ಹೆಚ್ಚಿರುವುದು. ನಿಮ್ಮ ಆಲೋಚನೆಗಳನ್ನು ಸ್ಪಷ್ಟವಾಗಿ ತಿಳಿಸಲು ನೀವು ಪ್ರಯತ್ನಿಸುವಿರಿ.
ಮಕರ ರಾಶಿ: ಇಂದು ರಾಜಕೀಯದಲ್ಲಿ ತೊಡಗಿಕೊಂಡವರಿಗೆ ಸಂತೋಷಕರವಾದ ಸುದ್ದಿ ಸಿಗಲಿದೆ. ಉದ್ಯೋಗ ಸ್ಥಳದಲ್ಲಿ ಕಿರಿಕಿರಿಯ ಕಾರಣ ಮುಂದಿನ ಕಾರ್ಯವು ಸೂಚಿಸದೇ ಬಹಳ ಜಡರಂತೆ ಆಗುವಿರಿ. ಇಂದು ನೀವು ಮನೆಯಲ್ಲಿ ಉಂಟಾದ ಸಮಸ್ಯೆಗಳನ್ನು ಪರಿಹರಿಸಲು ಬುದ್ಧಿವಂತಿಕೆಯಿಂದ ಪ್ರಯತ್ನಿಸಬೇಕಾದೀತು.
ಕುಂಭ ರಾಶಿ: ನಿಮ್ಮ ಸಾಮಾಜಿಕ ಕ್ಷೇತ್ರದ ವ್ಯಾಪ್ತಿಯನ್ನು ವಿಸ್ತರಿಸಬಹುದು. ಇಂದು ನೀವು ಮಕ್ಕಳ ಕಡೆಯಿಂದ ಕೆಲವು ಒಳ್ಳೆಯ ಸುದ್ದಿಗಳನ್ನು ಕೇಳಿ, ಆನಂದಿಸುವಿರಿ. ಕೆಲವು ಸವಾಲಿನ ಪರಿಸ್ಥಿತಿಗಳು ಬರುವ ಸಾಧ್ಯತೆ ಇದೆ. ಇದು ಕೆಲಸಕ್ಕೆ ಉತ್ತೇಜನವನ್ನು ಕೊಡುವುದು. ಇಂದು ಇನ್ನೊಬ್ಬರ ಮನಃಸ್ಥಿತಿಯನ್ನು ನಿರ್ಣಯಿಸುವಲ್ಲಿ ಸೋಲುವಿರಿ. ಕೆಲ ಕಾಲ ಹೊಸ ಉದ್ಯಮಕ್ಕೆ ಪಾಲುದಾರರಾಗುವುದು ಬೇಡ.
ಮೀನ ರಾಶಿ: ನಿಮ್ಮ ಗೃಹ ನಿರ್ಮಾಣ ಕಾರ್ಯದಲ್ಲಿ ಹೆಚ್ಚು ಮಗ್ನರಾಗುವಿರಿ. ಆದರೆ ವ್ಯವಹಾರದಲ್ಲಿ ಉತ್ತಮ ಲಾಭದಿಂದಾಗಿ ನೀವು ಅದನ್ನು ಪೂರ್ಣಗೊಳಿಸಲು ಸಾಧ್ಯವಾಗುತ್ತದೆ. ನಾಯಕ ಸ್ಥಾನದಿಂದ ನೀವು ಕೆಳಗಿಳಿಯುವ ಆಲೋಚನೆ ಮಾಡುವಿರಿ. ಇಂದು ಸಾಮಾಜಿಕ ಕೆಲಸವು ನಿಮಗೆ ಬೇಸರ ತರಿಸಬಹುದು. ನೆಮ್ಮದಿಗಾಗಿ ಎಲ್ಲಿಗಾದರೂ ಹೋಗುವ ಮನಸ್ಸು ಮಾಡುವಿರಿ. ಕಛೇರಿಯಲ್ಲಿ ಎಂದಿನ ಉತ್ಸಾಹವು ಇರುವುದಿಲ್ಲ.