ಮಂಗಳೂರು:(ಸೆ.16) ಇನ್ನೊಬ್ಬರ ಜೀವ ಉಳಿಸಲು ಹೋಗಿ ಮಹಿಳೆ ಒಬ್ಬರು ತನ್ನ ಪ್ರಾಣವನ್ನೇ ಕಳೆದುಕೊಂಡ ಘಟನೆ ನಡೆದಿದೆ.
ಮೃತರನ್ನು ಅರ್ಚನ ಕಾಮತ್ (34 ) ಎಂದು ಗುರುತಿಸಲಾಗಿದೆ.
ಅರ್ಚನ ಕಾಮತ್ ಯಕೃತ್ತಿಗೆ ಸಂಬಂಧಿಸಿದ ಕಾಯಿಲೆಯಿಂದ ಬಳಲುತ್ತಿದ್ದ ತಮ್ಮ ಸಂಬಂಧಿಕರೊಬ್ಬರಿಗೆ ಯಕೃತ್ತಿನ ಕಸಿಗೆ ತನ್ನ ಯಕೃತ್ ಅನ್ನು ದಾನ ಮಾಡಿದ್ದರು.
ಈ ಚಿಕಿತ್ಸೆಗೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದರು.
ಚಿಕಿತ್ಸೆ ವೇಳೆ ಸೋಂಕಿಗೆ ತುತ್ತಾಗಿದ್ದರು ಎಂದು ಹೇಳಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ಮೃತರು ಪತಿ, 4 ವರ್ಷದ ಮಗು, ತಂದೆ ,ತಾಯಿಯನ್ನು ಅಗಲಿದ್ದಾರೆ.