ಪುತ್ತೂರು (ಸೆ. 22) : ಗ್ರಾಮಾಂತರ ಮಂಡಲ ಯುವಮೋರ್ಚಾದ ಪದಾಧಿಕಾರಿಗಳ ಸಭೆಯು ಪುತ್ತೂರು ಬಿಜೆಪಿ ಕಛೇರಿಯಲ್ಲಿ ಜರುಗಿತು. ಈ ಸಭೆಯಲ್ಲಿ ಯುವ ಮೋರ್ಚಾ ಜಿಲ್ಲಾಧ್ಯಕ್ಷರಾದ ನಂದನ್ ಮಲ್ಯ ಭಾಗವಹಿಸಿ , ಮೋರ್ಚಾದ ಕಾರ್ಯವೈಖರಿ ಸಂಘಟನಾತ್ಮಕ ವಿಷಯಗಳ ಮೇಲೆ ಮಾತನಾಡಿದರು. ಹಾಗೆಯೆ ಪಕ್ಷದ ಸದಸ್ಯತ್ವ ಅಭಿಯಾನ ಸೇವಾಪಾಕ್ಷಿಕದ ಕೆಲಸ ಕಾರ್ಯಗಳ ಬಗ್ಗೆ ಮಾಹಿತಿ ನೀಡಿದರು.
ಗ್ರಾಮಾಂತರ ಮಂಡಲದ ಅಧ್ಯಕ್ಷರಾದ ದಯಾನಂದ ಉಜಿರೆಮಾರ್ ಇವರು ಮಾತನಾಡಿ ಯುವಮೋರ್ಚಾದ ತಂಡಕ್ಕೆ ಶುಭಾಶಯಗಳನ್ನು ತಿಳಿಸಿ ಪಕ್ಷದ ಚಟುವಟಿಕೆಗಳ ಬಗ್ಗೆ ಯುವಕರ ಭಾಗವಹಿಸುವಿಕೆ ಬಹಳ ಮುಖ್ಯ. ಯುವಕರು ಪಕ್ಷದ ಬೆನ್ನೆಲುಬು ಎಂಬುದನ್ನು ಹೇಳುತ್ತಾ ಯುವಕರಿಗೆ ಕಿವಿಮಾತು ಹೇಳಿದರು.
ಗ್ರಾಮಾಂತರ ಮಂಡಲದ ಪ್ರಭಾರಿ ಜಿಲ್ಲಾ ಯುವ ಮೋರ್ಚಾ ಕಾರ್ಯದರ್ಶಿ ಶ್ರೀ ಕೃಷ್ಣ ಎಂ ಆರ್ , ಜಿಲ್ಲಾ ಯುವ ಮೋರ್ಚಾ ಕಾರ್ಯದರ್ಶಿ ಮಚ್ಚಿಮಲೆ ವಿರೂಪಾಕ್ಷ ಭಟ್ , ಮಂಡಲ ಪ್ರಭಾರಿ ಮಂಡಲದ ಕಾರ್ಯದರ್ಶಿ ರತನ್ ರೈ ಕುಂಬ್ರ ಮಂಡಲದ ಪ್ರಧಾನ ಕಾರ್ಯದರ್ಶಿಗಳಾದ ಉಮೇಶ್ , ನಗರ ಮಂಡಲ ಪ್ರಧಾನ ಕಾರ್ಯದರ್ಶಿ ಅನಿಲ್ ತೆಂಕಿಲ, ಮಂಡಲದ ಉಪಾಧ್ಯಕ್ಷರಾದ ಹರಿಪ್ರಸಾದ್ ಯಾದವ್ , ನಗರ ಮಂಡಲ ಯುವಮೋರ್ಚಾ ಅಧ್ಯಕ್ಷ ನೀತೇಶ್ ಕಲ್ಲೇಗ ಮತ್ತು ಯುವ ಮೋರ್ಚಾ ಪದಾಧಿಕಾರಿಗಳು ಭಾಗಿಯಾಗಿದ್ದರು. ಸಭೆಯಲ್ಲಿ ಗ್ರಾಮಾಂತರ ಮಂಡಲ ನೂತನ ಪದಾಧಿಕಾರಿಗಳನ್ನು ಶಾಲು ಹಾಕಿ ಅಭಿನಂದಿಸಲಾಯಿತು. ಸಭೆಯಲ್ಲಿ ಅಧ್ಯಕ್ಷರಾದ ಶಿಶಿರ್ ಪೆರ್ವೋಡಿ ಪ್ರಾಸ್ತಾವಿಕ ಮಾತನಾಡಿದರು. ಯುವಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ಆದೇಶ್ ಸ್ವಾಗತಿಸಿ , ಅಜಿತ್ ವಂದಿಸಿದರು.