ಪುತ್ತೂರು :(ಸೆ.24) ಆಂಬ್ಯುಲೆನ್ಸ್ ಹಾಗೂ ಪಿಕಪ್ ನಡುವೆ ಅಪಘಾತ ಸಂಭವಿಸಿ, ಚಾಲಕ ಹಾಗೂ ಆಂಬ್ಯುಲೆನ್ ನಲ್ಲಿದ್ದ ಮಗು ಗಾಯಗೊಂಡು ಅಪಾಯದಿಂದ ಪಾರಾದ ಘಟನೆ ಪುತ್ತೂರು ತಾಲೂಕಿನ ಮುರ ಎಂಬಲ್ಲಿ ನಡೆದಿದೆ.
ಇದನ್ನೂ ಓದಿ: ⛔ಮುಡಾ ಹಗರಣ – ಸಿಎಂ ಸಲ್ಲಿಸಿದ್ದ ರಿಟ್ ಅರ್ಜಿ ವಜಾ!
ಸುಳ್ಯ ಆಸ್ಪತ್ರೆಯೊಂದರಲ್ಲಿ ಜನಿಸಿದ ಮಗುವೊಂದನ್ನು ಉಸಿರಾಟದ ತೊಂದರೆ ಹಿನ್ನೆಲೆಯಲ್ಲಿ ವೈದ್ಯರ ಸೂಚನೆ ಮೇರೆಗೆ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಅಂಬ್ಯುಲೆನ್ಸ್ ನಲ್ಲಿ ಕರೆದೊಯ್ಯಲಾಗುತ್ತಿತ್ತು.
ಈ ಸಂದರ್ಭದಲ್ಲಿ ಪುತ್ತೂರು ಸಮೀಪದ ಮುರ ಎಂಬಲ್ಲಿ ವಿರುದ್ಧ ದಿಕ್ಕಿನಿಂದ ಬಂದ ಪಿಕಪ್ , ಆಂಬ್ಯುಲೆನ್ಸ್ ಗೆ ಢಿಕ್ಕಿ ಹೊಡೆದು ಅಪಘಾತ ನಡೆದಿದೆ.
ಅಪಘಾತದಲ್ಲಿ ಆಂಬ್ಯುಲೆನ್ಸ್ ನಲ್ಲಿದ್ದ ಮಗು ಹಾಗೂ ಚಾಲಕನಿಗೆ ಸಣ್ಣ- ಪುಟ್ಟ ಗಾಯಗಳಾಗಿವೆ.
ಕೂಡಲೇ ಬೇರೆ ವಾಹನದಲ್ಲಿ ಮಗುವನ್ನು ಮತ್ತು ಮನೆಯವರನ್ನು ಮಂಗಳೂರಿಗೆ ಕಳುಹಿಸಲಾಗಿದೆ ಎಂದು ತಿಳಿದು ಬಂದಿದೆ.