ಮಂಗಳೂರು
-
Mangalore: ಯುವತಿ ನಾಪತ್ತೆ
ಮಂಗಳೂರು: ಯುವತಿಯೊಬ್ಬಳು ನಾಪತ್ತೆಯಾಗಿರುವ ಘಟನೆ ಸುರತ್ಕಲ್ ಕೃಷ್ಣಾಪುರದಲ್ಲಿ ನಡೆದಿದೆ. ಕೃಷ್ಣಾಪುರ ನಿವಾಸಿ ಅನನ್ಯ(20) ನಾಪತ್ತೆಯಾದ ಯುವತಿ. ಇದನ್ನೂ ಓದಿ: 🔴ಬೆಳ್ತಂಗಡಿ: ತಾಲೂಕು ಮಟ್ಟದ ಅಥ್ಲೆಟಿಕ್ ಸ್ಪರ್ಧೆಯಲ್ಲಿ ಕುಂಭಶ್ರೀ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ಅದ್ಭುತ ಸಾಧನೆ ಅನನ್ಯ ಕಾರ್ತಿಕ್ ಎಂಬಾತನನ್ನು ಪ್ರೀತಿಸುತ್ತಿದ್ದಳು ಎನ್ನಲಾಗಿದೆ. ಮನೆಯವರು ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದರು. ಅಕ್ಟೋಬರ್ 25 ರಂದು ತಂದೆ ತಾಯಿ ಕೆಲಸಕ್ಕಾಗಿ ಹೊರಗಡೆ ಹೋದವರು ವಾಪಾಸ್ ಮಧ್ಯಾಹ್ನ ಮನೆಗೆ ಬಂದು ನೋಡಿದಾಗ ಮನೆಯಲ್ಲಿ ಅನನ್ಯ ಇರಲಿಲ್ಲ. ಅಕ್ಕಪಕ್ಕದವರನ್ನು ವಿಚಾರಿಸಿದಾಗ ಆಕೆ ಬೆಳಿಗ್ಗೆ…
-
Mangaluru: ಸಮಾಜದಲ್ಲಿ ದ್ವೇಷಪೂರಿತ ಭಾಷಣ ಮಾಡುವವರ ವಿರುದ್ಧ ಎಫ್‌ಐಆರ್ – ಸಿದ್ದರಾಮಯ್ಯ
ಮಂಗಳೂರು: ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ) ಯಾರು ಮಾಡಿದರೂ ಅವರ ಮೇಲೆ ಪ್ರಕರಣ ದಾಖಲಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಮಂಗಳೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ದ್ವೇಷಪೂರಿತ ಭಾಷಣ ಮಾಡುವವರ ಮೇಲೆ ಎಫ್‌ಐಆರ್ ದಾಖಲಾಗುತ್ತದೆ. ಅವರು ಭಾಷಣದಲ್ಲಿ ಮಹಿಳೆಯರಿಗೆ ಅಗೌರವವಾಗಿ ಮಾತನಾಡಿದ್ದಾರೆ ಎಂದರು. ಇದನ್ನೂ ಓದಿ: 🌪ಕರಾವಳಿಗೂ ತಟ್ಟಿದ ಮೊಂತಾ ಎಫೆಕ್ಟ್ ಧರ್ಮಸ್ಥಳ ಪ್ರಕರಣದ ಬಗ್ಗೆ ಎಸ್‌ಐಟಿ…
-
Montha Cyclone: ಕರಾವಳಿಗೂ ತಟ್ಟಿದ ಮೊಂತಾ ಎಫೆಕ್ಟ್ – ತಣ್ಣೀರುಬಾವಿ ಕಡಲತೀರದಲ್ಲಿ ಅಲೆಗಳ ಅಬ್ಬರ
ಮಂಗಳೂರು(ಅ.28): ಮೊಂತಾ ಚಂಡಮಾರುತದ ಪರಿಣಾಮ ಕರ್ನಾಟಕದ ಕರಾವಳಿಗೂ ತಟ್ಟಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಚಂಡಮಾರುತದ ಪ್ರಭಾವದಿಂದ ಬಿಟ್ಟು ಬಿಟ್ಟು ಮಳೆಯಾಗುತ್ತಿದ್ದು, ಅರಬ್ಬಿ ಸಮುದ್ರವು ಪ್ರಕ್ಷುಬ್ಧಗೊಂಡಿದೆ. ಇದನ್ನೂ ಓದಿ: 🔴ಪ್ರೀತಿ ಎಲ್ಲಿ, ಹೇಗೆ ಹುಟ್ಟುತ್ತದೆ ಹೇಳೋಕಾಗಲ್ಲ” ಎಂದ ರಾಶಿಕಾ ಮಂಗಳೂರಿನ ತಣ್ಣೀರುಬಾವಿ ಸಮುದ್ರ ತೀರದಲ್ಲಿ ಬೃಹತ್ ಅಲೆಗಳು ದಡಕ್ಕೆ ಅಪ್ಪಳಿಸುತ್ತಿವೆ. ಅರಬ್ಬಿ ಸಮುದ್ರದಲ್ಲಿ ಗಾಳಿಯ ವೇಗವೂ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಮೀನುಗಾರಿಕೆ ಇಲಾಖೆಯು ಮೀನುಗಾರರಿಗೆ ಆಳಸಮುದ್ರ ಮೀನುಗಾರಿಕೆಗೆ ತೆರಳದಂತೆ ಎಚ್ಚರಿಕೆ ನೀಡಿದೆ. ಕಳೆದ ಮೂರು ದಿನಗಳ ಹಿಂದೆಯೇ ಸೂಚನೆ…
-
Ullal: ಮಲತಂದೆಯಿಂದ ಅಪ್ರಾಪ್ತೆ ಮೇಲೆ ಅತ್ಯಾಚಾರ – ಆರೋಪಿ ಬಂಧನ
ಉಳ್ಳಾಲ:(ಅ.20) ಅಪ್ರಾಪ್ತೆಯ ಮೇಲೆ ಮಲ ತಂದೆಯೇ ಅತ್ಯಾಚಾರಗೈದ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಕುಂಪಲದಲ್ಲಿ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಅಮೀರ್ ಎಂಬಾತನನ್ನು ಪೊಲೀಸರು ರವಿವಾರ ಬಂಧಿಸಿದ್ದಾರೆ. ಇದನ್ನೂ ಓದಿ: ⭕Devanahalli: ಪತಿ ಮನೆಯವರ ಕಿರುಕುಳದಿಂದ ಬೇಸತ್ತು ಡ್ಯಾಂ ಗೆ ಹಾರಿ ಪ್ರಾಣಬಿಟ್ಟ ಉಪನ್ಯಾಸಕಿ ಘಟನೆ ವಿವರ: ಸಂತ್ರಸ್ತೆಯ ತಂದೆ ಮೃತಪಟ್ಟ ಬಳಿಕ ಆಕೆಯ ತಾಯಿ ಅಮೀರ್ ಎಂಬಾತನ ಜೊತೆ ವಿವಾಹವಾಗಿ ಕುಂಪಲದ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದರು. ಈ ಮಧ್ಯೆ ತಾಯಿ ಹಾಗೂ ಅಪ್ರಾಪ್ತೆ ಮಲಗಿದ್ದ ಸಂದರ್ಭದಲ್ಲಿ…
-
Mangaluru: ಅಭಿಷೇಕ್ ಆಚಾರ್ಯ ಆತ್ಮಹತ್ಯೆ ಪ್ರಕರಣ – ಪ್ರಕರಣದ ಕಿಂಗ್ ಪಿನ್ ನಿರೀಕ್ಷಾ ಲಾಕ್
ಮಂಗಳೂರು, (ಅ.20)ಯುವತಿ ಬಟ್ಟೆ ಬದಲಾಯಿಸುವ ವೀಡಿಯೋ ಮಾಡಿ ಬ್ಲ್ಯಾಕ್ ಮೇಲ್ ಮಾಡಿರುವ ಆರೋಪದಡಿಯಲ್ಲಿ ಯುವತಿಯೊಬ್ಬಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಚಿಕ್ಕಮಗಳೂರು ಮೂಲದ, ಮಂಗಳೂರಿನ ಕಂಕನಾಡಿಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ನಿರೀಕ್ಷಾ ಎಂಬಾಕೆ ಬಂಧಿತ ಆರೋಪಿ. ಇತ್ತೀಚೆಗೆ ಕಾರ್ಕಳದ ನಿಟ್ಟೆಯ ಅಭಿಷೇಕ್ ಆಚಾರ್ಯ ಆತ್ಮಹತ್ಯೆ ಪ್ರಕರಣದಲ್ಲಿಯೂ ನಿರೀಕ್ಷಾ ವಿರುದ್ಧ ಹನಿ ಟ್ರ್ಯಾಪ್ ಆರೋಪ ಕೇಳಿ ಬಂದಿತ್ತು. ಯುವತಿಯೊಬ್ಬಳು ನೀಡಿದ ದೂರಿನಿಂದ ಆರೋಪಿಯನ್ನು ಬಂಧಿಸಲಾಗಿದೆ. ಮಂಗಳೂರಿನ ಕದ್ರಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದ ಹಿನ್ನೆಲೆಯಲ್ಲಿ ನಿರೀಕ್ಷಾಳನ್ನು ರವಿವಾರ (ಅ.19) ಬಂಧಿಸಿರುವ…
-
Tumkur : ಎಸ್‌ಡಿಎಂ ಪಿಯು ಕಾಲೇಜು ಉಜಿರೆ — ರಾಜ್ಯಮಟ್ಟದ ಕಬಡ್ಡಿ ಚಾಂಪಿಯನ್
ತುಮಕೂರು (ಅ.19) : ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಆಯೋಜಿಸಿದ್ದ ರಾಜ್ಯಮಟ್ಟದ ಬಾಲಕರ ಕಬಡ್ಡಿ ಪಂದ್ಯಾಟವು ತುಮಕೂರಿನ ಮಹಾತ್ಮ ಗಾಂಧಿ ಒಳಾಂಗಣ ಕ್ರೀಡಾಂಗಣದಲ್ಲಿ ಭವ್ಯವಾಗಿ ನೆರವೇರಿತು. ಈ ಪಂದ್ಯಾಟದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಬಾಲಕರ ತಂಡ ಶ್ರೇಷ್ಠ ಪ್ರದರ್ಶನ ನೀಡಿ ಚಾಂಪಿಯನ್ ಪಟ್ಟವನ್ನು ತಮ್ಮದಾಗಿಸಿಕೊಂಡಿದೆ. ಅಂತಿಮ (ಫೈನಲ್) ಪಂದ್ಯದಲ್ಲಿ ವಿಜಯಪುರ ಜಿಲ್ಲೆಯ ತಂಡದ ವಿರುದ್ಧ 38–26 ಅಂಕಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸಿ, 2025–26ನೇ ಸಾಲಿನ ರಾಜ್ಯಮಟ್ಟದ…
-
Mangaluru: ಮಂಗಳೂರಿನಲ್ಲಿ 3 ಮಂದಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಗಾಲಿಕುರ್ಚಿ ವಿತರಣೆ
ಮಂಗಳೂರು (ಅ.18) : ಬೆಂಗಳೂರು APD ಸಂಸ್ಥೆಯ ಸಹಕಾರದೊಂದಿಗೆ ಪ್ರಸ್ತುತ ವರ್ಷದಲ್ಲಿ 100 ಗಾಲಿಕುರ್ಚಿಯನ್ನು ನೀಡುವ ಯೋಜನೆಯನ್ನು ಹೊಂದಿದ್ದು. ಸೆಪ್ಟೆಂಬರ್ ತಿಂಗಳಿನಲ್ಲಿ ಸೇವಾಧಾಮವು 8ನೇ ವರ್ಷಕ್ಕೆ ಪಾದಾರ್ಪಣೆಯಾದ ಸಂದರ್ಭದಲ್ಲಿ 30 ಗಾಲಿಕುರ್ಚಿಯನ್ನು ನೀಡುವುದಾಗಿ ನಿರ್ಧರಿಸಿದ್ದು ಇದನ್ನೂ ಓದಿ: 🔴ಉಜಿರೆ: ಉಜಿರೆ ಎಸ್.ಡಿ.ಎಂ ಪಿ ಯು ಕಾಲೇಜಿನಲ್ಲಿ ಪ್ರಥಮ ಚಿಕಿತ್ಸೆ ಕಾರ್ಯಾಗಾರ ಅದರಲ್ಲಿ 3 ಗಾಲಿಕುರ್ಚಿಯನ್ನು ಸೇವಾಭಾರತಿಯ ಅಂಗಸಂಸ್ಥೆಯಾದ ಸೇವಾಧಾಮದಿಂದ ಗುರುತಿಸಲ್ಪಟ್ಟ ಬೆನ್ನುಹುರಿ ಅಪಘಾತಕ್ಕೊಳಗಾದ ಮಂಗಳೂರಿನ ಶ್ರೀ ವಿಶ್ವನಾಥ ರೈ, ವಾಮಂಜೂರಿನ ಶ್ರೀ ಜನಾರ್ಧನ ಮತ್ತು ಜಾರ್ದೋಲಿಯ ಪ್ರಕಾಶ್…
-
MRPL : ಎಂಆರ್‌ಪಿಎಲ್‌ನಿಂದ ಬೃಹತ್ ಚೇತರಿಕೆ: ಎರಡನೇ ತ್ರೈಮಾಸಿಕದಲ್ಲಿ ₹639 ಕೋಟಿ ತೆರಿಗೆ ನಂತರದ ಲಾಭ
ಮಂಗಳೂರು (ಅ.16) : ರಿಫೈನರಿ ಅಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL) 2025-26ರ ಆರ್ಥಿಕ ವರ್ಷದ ಎರಡನೇ ತ್ರೈಮಾಸಿಕದಲ್ಲಿ (Q2) ಗಮನಾರ್ಹವಾದ ಆರ್ಥಿಕ ಚೇತರಿಕೆ ಕಂಡಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ ₹682 ಕೋಟಿ ನಷ್ಟವನ್ನು ಅನುಭವಿಸಿದ್ದ ಕಂಪನಿಯು, ಪ್ರಸ್ತುತ ತ್ರೈಮಾಸಿಕದಲ್ಲಿ ₹639 ಕೋಟಿ ತೆರಿಗೆ ನಂತರದ ಲಾಭ (PAT) ವನ್ನು ವರದಿ ಮಾಡಿದೆ. ಕಂಪನಿಯ ನಿರ್ದೇಶಕರ ಮಂಡಳಿಯು ಅಕ್ಟೋಬರ್ 15 ರಂದು ನಡೆದ 271ನೇ ಸಭೆಯಲ್ಲಿ ಈ ಫಲಿತಾಂಶಗಳಿಗೆ ಅನುಮೋದನೆ ನೀಡಿದೆ. ಲಾಭದ ಪ್ರಮುಖ ಕಾರಣಗಳು: ಸುಧಾರಿತ…
-
Mangaluru: ತೆಂಕುತಿಟ್ಟಿನ ಯಕ್ಷಗಾನ ಪರಂಪರೆಯ ಹಿರಿಯ ಭಾಗವತ ದಿನೇಶ್ ಅಮ್ಮಣ್ಣಾಯ ನಿಧನ
ಮಂಗಳೂರು: ತೆಂಕುತಿಟ್ಟು ಯಕ್ಷಗಾನ ಪರಂಪರೆಯ ಹಿರಿಯ ಭಾಗವತ, ‘ರಸರಾಗ ಚಕ್ರವರ್ತಿ’ ಎಂಬ ಬಿರುದು ಹೊಂದಿದ್ದ, ದಿನೇಶ್ ಅಮ್ಮಣ್ಣಾಯರು ನಿಧನರಾಗಿದ್ದಾರೆ. ಇದನ್ನೂ ಓದಿ: ⭕ಬೆಳಗಾವಿ: ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗವಹಿಸಿದ್ದಕ್ಕಾಗಿ ವಿದ್ಯಾರ್ಥಿಗೆ ಶಿಕ್ಷೆ ನೀಡಿದ ಶಿಕ್ಷಕಿ ತಮ್ಮ ಕಂಚಿನ ಕಂಠ ಹಾಗೂ ವಿಶಿಷ್ಟ ರಾಗ ಸಂಯೋಜನೆಯ ಮೂಲಕ ನಾಲ್ಕು ದಶಕಗಳಿಗೂ ಹೆಚ್ಚು ಕಾಲ ಕಲಾ ಸೇವೆಯಲ್ಲಿ ತೊಡಗಿಸಿಕೊಂಡಿದ್ದ ಅವರ ಅಗಲಿಕೆಯಿಂದ ಯಕ್ಷಗಾನ ಲೋಕಕ್ಕೆ ಭಾರಿ ನಷ್ಟವಾಗಿದೆ. ಪೌರಾಣಿಕ ಮತ್ತು ತುಳು ಪ್ರಸಂಗಗಳೆರಡರಲ್ಲೂ ತಮ್ಮ ಛಾಪು ಮೂಡಿಸಿರುವ ಇವರು, ಯಕ್ಷಗಾನ ಕ್ಷೇತ್ರದಲ್ಲಿ…
-
Ujire : ಆಪತ್ತಿನಲ್ಲಿರುವ ಕುಟುಂಬಕ್ಕೆ ಆಸರೆಯಾಗಲು ಮನವಿ: ಪ್ರಮೋದ್ ಗೌಡ ಅವರ ಚಿಕಿತ್ಸೆಗೆ ಸಹಾಯ ಹಸ್ತ ಚಾಚಿ
ಉಜಿರೆ (ಅ.15) : ದಕ್ಷಿಣ ಕನ್ನಡ ಜಿಲ್ಲೆಯ ಉಜಿರೆ ಗ್ರಾಮದ ನಿವಾಸಿ ಪ್ರಮೋದ್ ಗೌಡ (Pramod Gowda) ಅಪಘಾತವೊಂದರಲ್ಲಿ ತೀವ್ರವಾಗಿ ಗಾಯಗೊಂಡು ಸಾವಿನೊಂದಿಗೆ ಹೋರಾಡುತ್ತಿದ್ದಾರೆ. ಸುಮಾರು 18 ಅಡಿ ಎತ್ತರದಿಂದ ಬಿದ್ದ ಪರಿಣಾಮವಾಗಿ ಪ್ರಮೋದ್ ಅವರ ತಲೆ ಭಾಗ ಹಾಗೂ ಬೆನ್ನು ಹುರಿ (ಸ್ಪೈನಲ್ ಕಾರ್ಡ್) ಸಂಪೂರ್ಣವಾಗಿ ಮುರಿತಕ್ಕೊಳಗಾಗಿದೆ. ಮಂಗಳೂರಿನ ಪ್ರತಿಷ್ಠಿತ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಪ್ರಮೋದ್ ಅವರಿಗೆ ಚಿಕಿತ್ಸೆ ಮುಂದುವರೆದಿದೆ. ಬಡ ಕುಟುಂಬಕ್ಕೆ ಆರ್ಥಿಕ ಸಂಕಷ್ಟ: ದಿನಗೂಲಿ ಕೆಲಸ ಮಾಡಿ ಜೀವನ ಸಾಗಿಸುತ್ತಿದ್ದ ಪ್ರಮೋದ್…










