Wed. Nov 20th, 2024

Belthangadi: ಗ್ರಾ. ಯೋಜನೆಯ ಗುರುವಾಯನಕೆರೆ ವ್ಯಾಪ್ತಿಯ ಪ್ರಗತಿ ಬಂಧು ಸ್ವಸಹಾಯ ಸಂಘ ಒಕ್ಕೂಟಗಳ ತಾಲೂಕು ಮಟ್ಟದ ಪದಾಧಿಕಾರಿಗಳ ಸಮಾವೇಶ

ಬೆಳ್ತಂಗಡಿ:(ಸೆ.27) ಸೇವೆ ಮತ್ತು ಆರ್ಥಿಕ ಸದೃಢತೆ ಶ್ರೀ ಕ್ಷೇತ್ರ ಧರ್ಮಸ್ಥಳದ ಗ್ರಾ. ಯೋಜನೆಯ ಮೂಲ ಮಂತ್ರ. ಆ ಮೂಲಕ ಪ್ರತೀ ಕುಟುಂಬದಲ್ಲಿ ಆರ್ಥಿಕ ಸುಸ್ಥಿರತೆ ತರುವ ಸಂಕಲ್ಪದೊಂದಿಗೆ ಹಣಕಾಸು ಸಂಸ್ಥೆಯೊಂದಿಗಿನ ಸಂಪರ್ಕ ಸೇತುವಾಗಿ ಗ್ರಾ. ಯೋಜನೆ ಕೆಲಸ ಮಾಡುತ್ತಿದೆ ಎಂದು ಉಡುಪಿ ವಿಭಾಗದ ಪ್ರಾದೇಶಿಕ ನಿರ್ದೇಶಕ ದುಗ್ಗೇ ಗೌಡ ಹೇಳಿದರು.

ಇದನ್ನೂ ಓದಿ: 🔴ಬೈಲಹೊಂಗಲ ಮಂಡಲದ ವತಿಯಿಂದ ಶಾಸಕ ಹರೀಶ್ ಪೂಂಜರಿಗೆ ಸನ್ಮಾನ

ಪಡಂಗಡಿ ಪ್ರಾ‌.ಕೃ.ಪ.ಸಹಕಾರ ಸಂಘದ ಸಮೃದ್ದಿ ಸಭಾಭವನದಲ್ಲಿ ಸೆ.‌27ರಂದು ನಡೆದ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ. ಟ್ರಸ್ಟ್ ಗುರುವಾಯನಕೆರೆ ಇದರ ವ್ಯಾಪ್ತಿಯ ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟಗಳ ತಾಲೂಕು ಮಟ್ಟದ ಪದಾಧಿಕಾರಿಗಳ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು.

800 ವರ್ಷಗಳ ದೈವಿಕ ಇತಿಹಾಸ ಇರುವ ಕುಡುಮಪುರವಾದ ಧರ್ಮಸ್ಥಳದಲ್ಲಿ 21 ನೇ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಪರಿವರ್ತನೆಯ ಮಹಾ ಅಭಿಯಾನ ನಡೆಯುತ್ತಿದ್ದು, ಇದು ಸಶಕ್ತ ಸಮಾಜದ ಧ್ಯೇಯ ಮಾತ್ರ ಹೊಂದಿದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಗತಿ ಬಂಧು ಸ್ವಸಹಾಯ ಸಂಘಗಳ ಕೇಂದ್ರ ಒಕ್ಕೂಟದ ಅಧ್ಯಕ್ಷ ಸದಾನಂದ ಬಂಗೇರ ವಹಿಸಿದ್ದರು.

ಬ್ಯಾಂಕ್ ವ್ಯವಹಾರ, ಗ್ರಾಮಾಭಿವೃದ್ದಿ ಯೋಜನೆಯ ವತಿಯಿಂದ ಜನರ ಮಧ್ಯೆ ಸಂಪರ್ಕ ಸೇತುವಾಗಿ ಮಾಡುತ್ತಿರುವ ಸೇವೆ, ಆರ್ಥಿಕ ವ್ಯವಹಾರದ ಮೂಲಕ ಸಿಬಿಲ್ ಭದ್ರತೆ ಇತ್ಯಾದಿ ಬಗ್ಗೆ ಬೆಳ್ತಂಗಡಿ ಎಸ್.ಬಿ.ಐ ಬ್ಯಾಂಕ್ ನ ಶಾಖಾ ವ್ಯವಸ್ಥಾಪಕ ಪದ್ಮನಾಭ ನಾಯಕ್ ಮತ್ತು ಧರ್ಮಸ್ಥಳ ಕೇಂದ್ರ ಕಚೇರಿ ನಿರ್ದೇಶಕ ಪ್ರವೀಣ್ ಎಂ.ಸಿ ಅವರು, ಕರಾವಳಿ ಭಾಗದ ಸ್ವಾತಂತ್ರ್ಯ ಪೂರ್ವದ ಬ್ಯಾಂಕಿಂಗ್ ವ್ಯವಸ್ಥೆ, ಸಂಘಟಿತ ಆರ್ಥಿಕ ಅಭಿವೃದ್ಧಿಗಾಗಿ ಇರುವ ಬಿ.ಸಿ ವ್ಯವಸ್ಥೆ, ನಬಾರ್ಡ್ ಮತ್ತು ಸಿಡ್ಬಿ ಯೋಜನೆಗಳು, ಸ್ವಸಹಾಯ ಸಂಘಗಳು ಅನುಸರಿಸಬೇಕಾದ ಪಂಚ ಸೂತ್ರಗಳ ಬಗ್ಗೆ ಸಂಪನ್ಮೂಲ ಉಪನ್ಯಾಸ ನಡೆಸಿಕೊಟ್ಟರು.

ಮುಖ್ಯ ಅತಿಥಿಗಳಾಗಿ ಯೋಜನೆಯ ಜಿಲ್ಲಾ ನಿರ್ದೇಶಕ ಮಹಾಬಲ ಕುಲಾಲ್, ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ ಯೋಗೀಶ್ ಪೂಜಾರಿ ಕಡ್ತಿಲ, ವೇಣೂರು ವಲಯ ಜನಜಾಗೃತಿ ವೇದಿಕೆಯ ವಲಯಾಧ್ಯಕ್ಷ ಮೋಹನ ಅಂಡಿಂಜೆ, ಎಸ್.ಕೆ.ಡಿ.ಆರ್.ಡಿ.ಪಿ,ಎಂ.ಐ.ಎಸ್.ಯೋಜನಾಧಿಕಾರಿ ಪ್ರೇಮನಾಥ, ಒಕ್ಕೂಟದ ವಲಯಾಧ್ಯಕ್ಷ ಮೋಹನ್ ಆಚಾರ್ಯ ಪಡಂಗಡಿ, ರಾಜಶೇಖರ್ ತಣ್ಣಿರುಪಂತ, ಗಿರೀಶ್ ವೇಣೂರು, ಶೇಖರ್ ಹೆಗ್ಡೆ ನಾರಾವಿ, ಜಯ ಪೂಜಾರಿ ಮಡಂತ್ಯಾರು ಉಪಸ್ಥಿತರಿದ್ದರು.

ಶ್ರೀ.ಕ್ಷೇ.ಧ.ಗ್ರಾ.ಯೋ ಬಿಸಿ ಟ್ರಸ್ಟ್ ಗುರುವಾಯನಕೆರೆ ಯೋಜನಾಧಿಕಾರಿ ದಯಾನಂದ ಪೂಜಾರಿ ಪಿ ಪ್ರಾಸ್ತಾವಿಕ ಮಾತನಾಡಿ, ಸ್ವಾಗತಿಸಿದರು. ಕಣಿಯೂರು ವಲಯ ಮೇಲ್ವಿಚಾರಕ ಶಿವಾನಂದ ಕಾರ್ಯಕ್ರಮ ನಿರೂಪಿಸಿದರು. ಮಡಂತ್ಯಾರು ವಲಯ ಮೇಲ್ವಿಚಾರಕ ವಸಂತ್ ಕುಮಾರ್ ವಂದಿಸಿದರು. ಸಮಾವೇಶದಲ್ಲಿ ಗುರುವಾಯನಕೆರೆ ಯೋಜನಾ ಕಚೇರಿ ವ್ಯಾಪ್ತಿಯ ಸ್ವಸಹಾಯ ಸಂಘಗಳ ಒಕ್ಕೂಟದ ಪದಾಧಿಕಾರಿಗಳು, ಜನಜಾಗೃತಿ ವೇದಿಕೆಯ ವಲಯಾಧ್ಯಕ್ಷರುಗಳು ಭಾಗಿಯಾಗಿದ್ದರು.

ಗುರುವಾಯನಕೆರೆ ವ್ಯಾಪ್ತಿಯಲ್ಲಿ ಒಟ್ಟು 1832 ಪ್ರಗತಿಬಂಧು ಸ್ವಸಹಾಯ ಸಂಘಗಳು, 3265 ಗುಂಪುಗಳು, 24700 ಮಂದಿ ಸದಸ್ಯರುಗಳು 94 ಒಕ್ಕೂಟಗಳು ಕಾರ್ಯನಿರ್ವಹಿಸುತ್ತಿದ್ದು, ಆರ್ಥಿಕ ಜ್ಞಾನ ವೃದ್ಧಿ ಮತ್ತು ಬ್ಯಾಂಕಿಂಗ್ ವ್ಯವಸ್ಥೆಯ‌ ಮೂಲಕ ದೇಶದ ಪ್ರಗತಿಯ ಭಾಗವಾಗಿ ಗುರುತಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *