Wed. Nov 20th, 2024

Belthangady: ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕ ಹುದ್ದೆಗಾಗಿ ಉರ್ದು ಭಾಷೆ ಕಡ್ಡಾಯ ರದ್ದುಗೊಳಿಸುವಂತೆ ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಮನವಿ

ಬೆಳ್ತಂಗಡಿ:(ಅ.1) ಕರ್ನಾಟಕ ರಾಜ್ಯದ ಅಂಗನವಾಡಿ ಕಾರ್ಯಕರ್ತೆ ಅಥವಾ ಸಹಾಯಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಾಗ ಉರ್ದು ಭಾಷೆಯನ್ನು ಆಯ್ಕೆ ಮಾಡದಿದ್ದರೆ ಅರ್ಜಿಯ ಮುಂದಿನ ಪ್ರಕ್ರಿಯೆ ಮಾಡಲು ಸಾಧ್ಯವಿಲ್ಲ.

ಇದನ್ನೂ ಓದಿ: 🟣ಶ್ರೀ ಧ.ಮಂ.ಪಾಲಿಟೆಕ್ನಿಕ್ ಕಾಲೇಜು ಉಜಿರೆಯಲ್ಲಿ ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಅಂತರ್ ಪಾಲಿಟೆಕ್ನಿಕ್ ಕಾಲೇಜು ಪುರುಷರ ಮ್ಯಾಟ್ ಕಬಡ್ಡಿ ಪಂದ್ಯಾಟ ಉದ್ಘಾಟನೆ

ಈ ಮೂಲಕ ಕರ್ನಾಟಕ ಸರ್ಕಾರ ಕ್ರೈಸ್ತರಿಗೆ ಹಾಗೂ ಹಿಂದುಗಳಿಗೆ ಒಂದು ರೀತಿಯಲ್ಲಿ ಅನ್ಯಾಯ ಮಾಡುತ್ತಿರುವುದು ಸ್ಪಷ್ಟ ಗಮನಕ್ಕೆ ಬರುತ್ತದೆ. ಕನ್ನಡವೇ ರಾಜ್ಯ ಭಾಷೆ. ಈ ರೀತಿ ಉರ್ದು ಭಾಷೆಗೆ ಕಡ್ಡಾಯ ಮಾಡಿ ಕನ್ನಡಿಗರನ್ನು ಸಹ ಅವಮಾನ ಮಾಡಿರುವುದು ಕಂಡುಬರುತ್ತದೆ.

ಈ ಹುದ್ದೆಯನ್ನು ಪಡೆಯಬೇಕಾದರೆ ಉರ್ದು ಕಲಿಯುವ ಅನಿವಾರ್ಯತೆಯನ್ನು ಮಾಡಿ ಉರ್ದು ಭಾಷೆ ವೈಭವೀಕರಣವನ್ನು ಮಾಡುವ ಪ್ರಯತ್ನ ನಡೆಯುತ್ತಿದೆಯಾ ಎನ್ನುವಂತಹ ಪ್ರಶ್ನೆಯು ಮೂಡುತ್ತದೆ.

ಅಷ್ಟೇ ಅಲ್ಲದೆ ಕೇವಲ ಉರ್ದು ಭಾಷಿಕ ಮಹಿಳೆಯರೇ ಇನ್ನು ಅಂಗನವಾಡಿ ಕೇಂದ್ರಗಳನ್ನು ನಡೆಸಲು ಅವಕಾಶ ನೀಡಲಾಗುತ್ತಿದೆಯೇ? ಜೊತೆಗೆ ಈ ಹುದ್ದೆ ಇನ್ನು ಕೇವಲ ಅವರಿಗೆ ಮಾತ್ರ ಸೀಮಿತವೇ ಎಂಬ ಭೀತಿ ಈಗ ಜನರಲ್ಲಿ ನಿರ್ಮಾಣವಾಗಿದೆ! ಹಾಗಾಗಿ ಸಮಸ್ತ ಹಿಂದೂಗಳು ಇದರ ಬಗ್ಗೆ ಧ್ವನಿ ಎತ್ತುತ್ತಿದ್ದಾರೆ.

ಆದುದರಿಂದ ಇಲಾಖೆಯು ಈ ಆದೇಶವನ್ನು ಕೂಡಲೇ ಹಿಂಪಡೆದು ಜಾಲತಾಣದಲ್ಲಿ ಅವಶ್ಯಕ ಬದಲಾವಣೆ ಮಾಡಬೇಕೆಂದು ಬೆಳ್ತಂಗಡಿ ತಹಶೀಲ್ದಾರರಾದ ಶ್ರೀ ಪೃಥ್ವಿ ಸಾನಿಕಂ ಇವರಿಗೆ ಮನವಿಯನ್ನು ನೀಡಲಾಯಿತು.


ಈ ಸಂದರ್ಭದಲ್ಲಿ ವಕೀಲರಾದ ಉದಯ ಬಿ.ಕೆ, ಜಯ ಸಾಲಿಯಾನ್ ಮೊಕ್ತೇಸರರು ಶ್ರೀ ನಾಗಬ್ರಹ್ಮ ದೇವಸ್ಥಾನ ಬಲೆಂಜ, ಸಂಜೀವ ಶೆಟ್ಟಿ ಉಜಿರೆ, ಶಿವರಾಮ್ ಉಜಿರೆ, ವಸಂತ ಬಂಗೇರ, ಶಶಿಧರ ಪೆರಿಯಡ್ಕ, ಎಂ. ಹರೀಶ್ ಜಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *