ಇಂದಬೆಟ್ಟು:(ಅ.2) ಇಂದಬೆಟ್ಟುವಿನ ಹೋಟೆಲ್ ಸಮೀಪ ನಿಲ್ಲಿಸಿದ್ದ ಕಾರಿಗೆ ಕೆ ಎಸ್ ಆರ್ ಟಿಸಿ ಬಸ್ ಡಿಕ್ಕಿ ಹೊಡೆದ ಘಟನೆ ಅ.1 ರಂದು ನಡೆದಿದೆ.

ಅದೃಷ್ಟವಶಾತ್ ಕಾರಿನಲ್ಲಿ ಹಾಗೂ ಸುತ್ತಮುತ್ತ ಸ್ಥಳದಲ್ಲಿ ಯಾರೂ ಇಲ್ಲದೆ ಇದ್ದುದರಿಂದ ಯಾವುದೇ ಅನಾಹುತ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.



ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ಜಖಂ ಗೊಂಡಿದೆ.


ಅಪಘಾತಕ್ಕೆ ಬಸ್ ಚಾಲಕನ ನಿರ್ಲಕ್ಷ್ಯವೇ ಕಾರಣ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.
